Headlines

ಗೋಲ್ಡ್ ಇಟ್ಟಿಲ್ಲ, ಲೋನ್ ಪಡೆದಿಲ್ಲ: ಮತ್ತೊಂದು ಕೆನರಾ ಬ್ಯಾಂಕಿನಿಂದ ಮಹಾ ಮೋಸ

ಗೋಲ್ಡ್ ಇಟ್ಟಿಲ್ಲ, ಲೋನ್ ಪಡೆದಿಲ್ಲ: ಮತ್ತೊಂದು ಕೆನರಾ ಬ್ಯಾಂಕಿನಿಂದ ಮಹಾ ಮೋಸ


ಗೋಲ್ಡ್ ಇಟ್ಟಿಲ್ಲ, ಲೋನ್ ಪಡೆದಿಲ್ಲ: ಮತ್ತೊಂದು ಕೆನರಾ ಬ್ಯಾಂಕಿನಿಂದ ಮಹಾ ಮೋಸ

ಮೈಸೂರು (ಡಿಸೆಂಬರ್ .29) : ಬ್ಯಾಂಕ್‌ನಲ್ಲಿ ಅಡವಿಟ್ಟ ಚಿನ್ನದ ತೂಕದಲ್ಲಿ ವ್ಯತ್ಯಾಸ ಮಾಡಿ ಗ್ರಾಹಕರು ವಂಚಿಸಿದ ಪ್ರಕರಣವೊಂದು ಮೈಸೂರಿನ ಕೆನರಾ ಬ್ಯಾಂಕ್‌ನಲ್ಲಿ ಬೆಳಕಿಗೆ ಬಂದಿದೆ. ಈ ಬ್ಯಾಂಕ್ ಸಂಬಂಧ ಅಧಿಕೃತ ಅಕ್ಕಸಾಲಿಗ (ಮೌಲ್ಯಮಾಪಕ) ಅಶ್ವಿನ್ ಆಚಾರ್ ಎಂಬುವವರ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನ ಮಲ್ಲೇಶ್ವರಂ 15ನೇ ಕ್ರಾಸ್ನ ಕೆನರಾ ಬ್ಯಾಂಕ್‌ನಲ್ಲಿ ಇಂತಹ ಘಟನೆ ನಡೆದಿದೆ. ಹೌದು… ಬೆಂಗಳೂರಿನ ಮಲ್ಲೇಶ್ವರಂ 15ನೇ ಕ್ರಾಸ್‌ನ ಕೆನರಾ ಬ್ಯಾಂಕ್‌ನ ಹಿರಿಯ ವ್ಯವಸ್ಥಾಪಕ ಮ್ಯಾನೇಜರ್ ಎನ್.ರಘು ವಿರುದ್ಧ 41 ಗ್ರಾಹಕರು ಮಕ್ಮಲ್ ಟೋಪಿ ಹಾಕಿ ಒಟ್ಟು 3.11 ಕೋಟಿಗೂ ಹೆಚ್ಚು ಹಣ ವಂಚಿಸಿರುವ ಆರೋಪ ಕೇಳಿಬಂದಿದ್ದು, ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಆಗಸ್ಟ್ 4 ರಿಂದ ಡಿ.9ರವರೆಗೆ ನಕಲಿ ಗೋಲ್ಡ್ ಲೋನ್ ಸೃಷ್ಟಿಸಿದ್ದ, 41 ಗ್ರಾಹಕರ ಖಾತೆಗಳಲ್ಲಿ ನಕಲಿ ಗೋಲ್ಡ್ ಲೋನ್ ಮಾಡಿ ಹಣ ಪಡೆದು ಲೂಟಿ ಮಾಡಿದ್ದಾರೆ. ಬ್ಯಾಂಕ್ ನ ಗ್ರಾಹಕರಾಗಿರುವ ವೃದ್ಧರು, ಪಿಂಚಣಿದಾರರು, ಆರ್ಚಕರು, ವ್ಯಾಪಾರಿಗಳನ್ನು ಗುರಿಯಾಗಿಸಿಕೊಂಡು ನಕಲಿ ಚಿನ್ನದ ಲೋನ್ ಸೃಷ್ಟಿಸಿದ್ದು, ಇವರ ಖಾತೆಗಳ ಒಟಿಪಿ ಹಾಗೂ ಚೆಕ್ ಪಡೆದು ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇದೀಗ ಮ್ಯಾನೇಜರ್ ರಘು ಎಸ್ಕೇಪ್ ಆಗಿದ್ದು, ಇತ್ತ 41 ಖಾತೆಗಳನ್ನು ಬ್ಯಾಂಕ್ ಫ್ರೀಜ್ ಮಾಡಲಾಗಿದೆ ಗ್ರಾಹಕರು ಪರದಾಡಿದ್ದಾರೆ. ಇನ್ನು ಈ ಬಗ್ಗೆ ಗ್ರಾಹಕ ಟಿವಿ9 ಜತೆ ಮಾತನಾಡಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *