ಬೆಂಗಳೂರು: ಚಿನಿವಾರ ಪೇಟೆಯಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಕಳೆದ ಮೂರು ದಿನಗಳಿಂದ ಇಳಿಕೆ ಕಾಣಲಾರಂಭಿಸಿದೆ. ಮಾರ್ಚ್ 14ರಂದು ಬೆಂಗಳೂರಿನಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಿದೆ ಎನ್ನುವುದನ್ನು ನೋಡೋಣ ಬನ್ನಿ.

ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ನಿರಂತರವಾಗಿ ಇಳಿಕೆ ಕಾಣಲಾರಂಭಿಸಿರುವುದು ಚಿನ್ನದ ಖರೀದಿಸುವವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ಇದೀಗ ಸತತ ಮೂರನೇ ದಿನವೂ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡಿದೆ.

ಹೌದು, ಮಾರ್ಚ್ 11ರಂದು 24 ಕ್ಯಾರಟ್ ಚಿನ್ನದ ಬೆಲೆಯು ಒಂದು ಗ್ರಾಮ್‌ಗೆ 16,331ಗೆ ತಲುಪಿತ್ತು. ಇದು ಇರಾನ್-ಇಸ್ರೇಲ್ ಯುದ್ದದ ಭೀತಿಯಿಂದಾಗಿ ಚಿನ್ನದ ಬೆಲೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿತ್ತು.

ಆದರೆ ಇದೀಗ ಸತತ ಮೂರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ. ಇಂದು 10 ಗ್ರಾಮ್ 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ 1,030 ರುಪಾಯಿ ಇಳಿಕೆ ಕಂಡಿದ್ದು, ಇಂದು 24 ಕ್ಯಾರಟ್ ಪ್ರತಿ ಗ್ರಾಮ್ ಚಿನ್ನದ ಬೆಲೆಯು 15,966 ರುಪಾಯಿಗೆ ಬಂದು ನಿಂತಿದೆ.

ಕಳೆದ ಮೂರು ದಿನಗಳಿಂದ 24 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 3650 ರುಪಾಯಿ ಇಳಿಕೆ ಕಂಡಿದೆ. ಸದ್ಯದ ಇಳಿಮುಖವನ್ನು ಗಮನಿಸಿದರೆ ಚಿನ್ನದ ಬೆಲೆಯಲ್ಲಿ ಮುಂಬರುವ ದಿನಗಳಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆಯಿದೆ.

ಇನ್ನು 22 ಕ್ಯಾರಟ್ ಆಭರಣ ಚಿನ್ನದ ಬೆಲೆಯಲ್ಲಿ ಕೂಡಾ ಇಂದು ಮತ್ತೆ ಇಳಿಕೆ ಕಂಡಿದೆ. ಮಾರ್ಚ್ 14ರಂದು 22 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ 950 ರುಪಾಯಿ ಇಳಿಕೆ ಕಂಡಿದೆ. ಕಳೆದ ಮೂರು ದಿನಗಳಲ್ಲಿ 10 ಗ್ರಾಮ್ ಆಭರಣ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 3350 ರುಪಾಯಿ ಇಳಿಕೆ ಕಂಡಿದೆ. ಇಂದು 22 ಕ್ಯಾರಟ್ ಪ್ರತಿ ಗ್ರಾಮ್ ಚಿನ್ನದ ಬೆಲೆ 14,635 ರುಪಾಯಿಗಳಾಗಿದೆ.

ಇನ್ನು ಚಿನ್ನ ಮಾತ್ರವಲ್ಲದೇ ಬೆಳ್ಳಿಯ ಬೆಲೆಯಲ್ಲೂ ಭಾರೀ ಇಳಿಕೆ ಕಂಡಿದೆ. ನಿನ್ನೆ ಬೆಳ್ಳಿ ಬೆಲೆ ಸ್ಥಿರವಾಗಿತ್ತು. ಆದರೆ ಮಾರ್ಚ್ 14ರಂದು ಪ್ರತಿ ಕೆಜಿ ಬೆಳ್ಳಿ ಬೆಲೆಯಲ್ಲಿ 5 ಸಾವಿರ ರುಪಾಯಿ ಇಳಿಕೆ ಕಂಡಿದ್ದು, ಇಂದು ಒಂದು ಕೆಜಿ ಬೆಳ್ಳಿ ಬೆಲೆ 2,75,000 ರುಪಾಯಿಗಳಾಗಿವೆ.

Source link
ಚಿನ್ನದ ಬೆಲೆಯಲ್ಲಿ ಸತತ ಮೂರನೇ ದಿನವೂ ಭಾರೀ ಕುಸಿತ! 3 ದಿನಗಳಲ್ಲಿ ಬರೋಬ್ಬರಿ 3,650 ರುಪಾಯಿ ಕುಸಿತ!