Headlines

Gold Rate Today: ಮುಂದುವರಿದಿದೆ ಚಿನ್ನ, ಬೆಳ್ಳಿ ಬೆಲೆಗಳ ಕುಸಿತ

Gold Rate Today: ಮುಂದುವರಿದಿದೆ ಚಿನ್ನ, ಬೆಳ್ಳಿ ಬೆಲೆಗಳ ಕುಸಿತ


ಬೆಂಗಳೂರು, ಫೆಬ್ರುವರಿ 17: ಚಿನ್ನ, ಬೆಳ್ಳಿ ಬೆಲೆಗಳೆರಡೂ ಮಂಗಳವಾರ ಕುಸಿತ ಕಂಡಿವೆ. ಭಾರತದಲ್ಲಿ, ವಿದೇಶದಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ (ಚಿನ್ನದ ದರಗಳು) ಇಳಿಕೆ ಮುಂದುವರಿದಿದೆ. ಭಾರತದಲ್ಲಿ ಇಂದು ಒಂದು ಗ್ರಾಮ್ ಚಿನ್ನದ ಬೆಲೆಯಲ್ಲಿ 140 ರೂ ಕಡಿಮೆಯಾಗಿದೆ. ಇದಕ್ಕೆ ಬೆಳ್ಳಿ ಬೆಲೆಯ ಕುಸಿತವು ಹೆಚ್ಚಿನ ತೀವ್ರತೆಯನ್ನು ಹೊಂದಿದೆ. ಗ್ರಾಮಕ್ಕೆ 8 ರೂನಷ್ಟು ಇಳಿಕೆಯಾಗಿದೆ. ಕಳೆದ ಐದು ದಿನಗಳ ಅಂತರದಲ್ಲಿ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ 35 ರೂ ಇಳಿಕೆಯಾಗಿದೆ. ಕಳೆದ ಮೂರು ವಾರಗಳಲ್ಲಿ ಇದರ ಬೆಲೆ 410 ರೂನಿಂದ 260 ರೂಗೆ ಇಳಿದಿದೆ. ಅಂದರೆ, ಶೇ. 60ಕ್ಕೂ ಹೆಚ್ಚಿನ ಪ್ರಮಾಣದಲ್ಲಿ ಬೆಲೆ ತಗ್ಗಿದೆ. ಜನವರಿ 10 ರಂದು ಇದ್ದ ಬೆಲೆಗೆ ಸದ್ಯ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,42,200 ರೂಪಾಯಿ ಇದೆ. 24 ಕ್ಯಾರಟ್‌ನ ಅಪರಂಜಿ ಚಿನ್ನದ ಬೆಲೆ 1,54,910 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 26,000 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,42,000 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 26,000 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 17ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,491 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,200 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,618 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,491 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,200 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 14,200 ರೂ
  • ಬೆಲೆ: 14,320 ರೂ
  • ಮುಂಬೈ: 14,200 ರೂ
  • ದೆಹಲಿ: 14,215 ರೂ
  • ಕೋಲ್ಕತಾ: 14,200 ರೂ
  • ಕೇರಳ: 14,200 ರೂ
  • ಅಹ್ಮದಾಬಾದ್: 14,205 ರೂ
  • ಜೈಪುರ: 14,215 ರೂ
  • ಲಕ್ನೋ: 14,215 ರೂ
  • ಭುವನೇಶ್ವರ್: 14,200 ರೂ

ಇದನ್ನೂ ಓದಿ: ಅಮೆರಿಕದ ಟ್ಯಾರಿಫ್ ಪರಿಣಾಮ ನಡುವೆಯೂ ಜನವರಿಯಲ್ಲಿ ಭಾರತದ ರಫ್ತು ಶೇ. 13.16 ಒಟ್ಟು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 599 ರಿಂಗಿಟ್ (13,879 ರೂಪಾಯಿ)
  • ದುಬೈ: 557.50 ಡಿರಾಮ್ (13,778 ರೂಪಾಯಿ)
  • ಅಮೆರಿಕ: 155 ಡಾಲರ್ (14,066 ರೂಪಾಯಿ)
  • ಸಿಂಗಾಪುರ: 195.50 ಸಿಂಗಾಪುರ ಡಾಲರ್ (14,048 ರೂಪಾಯಿ)
  • ಕತಾರ್: 551 ಕತಾರಿ ರಿಯಾಲ್ (13,722 ರೂ)
  • ಸೌದಿ ಅರೇಬಿಯಾ: 563 ಸೌದಿ ರಿಯಾಲ್ (13,627 ರುಪಾಯಿ)
  • ಓಮನ್: 59.20 ಒಮಾನಿ ರಿಯಾಲ್ (13,958 ರೂಪಾಯಿ)
  • ಕುವೇತ್: 45.53 ಕುವೇತಿ ದಿನಾರ್ (13,543 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 260 ರೂ
  • ಬೆಲೆ: 265 ರೂ
  • ಮುಂಬೈ: 260 ರೂ
  • ದೆಹಲಿ: 260 ರೂ
  • ಕೋಲ್ಕತಾ: 260 ರೂ
  • ಕೇರಳ: 265 ರೂ
  • ಅಹ್ಮದಾಬಾದ್: 260 ರೂ
  • ಜೈಪುರ: 260 ರೂ
  • ಲಕ್ನೋ: 260 ರೂ
  • ಭುವನೇಶ್ವರ್: 265 ರೂ
  • ಪುಣೆ: 260

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *