
ಬೆಂಗಳೂರು, ಏಪ್ರಿಲ್ 1: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತವಾಗಿ ಏರಿಕೆ ಕಂಡಿವೆ. ನಿನ್ನೆ ಗ್ರಾಮಕ್ಕೆ 185 ರೂ ಹೆಚ್ಚಿದ್ದ ಚಿನ್ನದ ಬೆಲೆ ಇಂದು ಬುಧವಾರ 200 ರೂ ಏರಿದೆ. ಎರಡು ದಿನದಲ್ಲಿ ಸುಮಾರು 400 ರೂಗಳಷ್ಟು ಆಗಿದೆ. ಅಪರಂಜಿ ಚಿನ್ನದ ಬೆಲೆ (ಚಿನ್ನ ದರಗಳು) 15,000 ರೂ ಗಡಿದಾಟಿದೆ. ವಿದೇಶದಲ್ಲಿ ಅನೇಕ ಕಡೆ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಇದೇ ವೇಳೆ, ಬೆಳ್ಳಿ ಬೆಲೆಯೂ ನಿನ್ನೆಯಂತೆ ಇವತ್ತೂ 5 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,38,850 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,51,480 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 25,500 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,38,850 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 25,500 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,500 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 1ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,148 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,885 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,361 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,148 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,885 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)
- ಬೆಂಗಳೂರು: 13,885 ರೂ
- ಬೆಲೆ: 14,050 ರೂ
- ಮುಂಬೈ: 13,885 ರೂ
- ದೆಹಲಿ: 13,900 ರೂ
- ಕೋಲ್ಕತಾ: 13,885 ರೂ
- ಕೇರಳ: 13,885 ರೂ
- ಅಹ್ಮದಾಬಾದ್: 13,890 ರೂ
- ಜೈಪುರ: 13,900 ರೂ
- ಲಕ್ನೋ: 13,900 ರೂ
- ಭುವನೇಶ್ವರ್: 13,885 ರೂ
ಇದನ್ನೂ ಓದಿ: ಪ್ರೀಮಿಯಂ ಪೆಟ್ರೋಲ್, ಡೀಸಲ್ ಬೆಲೆ ಮತ್ತೆ ಏರಿಕೆ; ಲೀಟರ್ಗೆ 11 ರೂ ದರ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)
- ಮಲೇಷ್ಯಾ: 574 ರಿಂಗಿಟ್ (13,298 ರೂಪಾಯಿ)
- ದುಬೈ: 518.25 ಡಿರಾಮ್ (13,144 ರೂಪಾಯಿ)
- ಅಮೆರಿಕ: 144 ಡಾಲರ್ (13,415 ರೂಪಾಯಿ)
- ಸಿಂಗಾಪುರ: 187.90 ಸಿಂಗಾಪುರ ಡಾಲರ್ (13,644 ರೂಪಾಯಿ)
- ಕತಾರ್: 515 ಕತಾರಿ ರಿಯಾಲ್ (13,162 ರೂ)
- ಸೌದಿ ಅರೇಬಿಯಾ: 527 ಸೌದಿ ರಿಯಾಲ್ (13,083 ರುಪಾಯಿ)
- ಓಮನ್: 54.90 ಒಮಾನಿ ರಿಯಾಲ್ (13,287 ರೂಪಾಯಿ)
- ಕುವೇತ್: 42.83 ಕುವೇತಿ ದಿನಾರ್ (13,010 ರೂಪಾಯಿ)
ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)
- ಬೆಂಗಳೂರು: 255 ರೂ
- ಬೆಲೆ: 265 ರೂ
- ಮುಂಬೈ: 255 ರೂ
- ದೆಹಲಿ: 255 ರೂ
- ಕೋಲ್ಕತಾ: 255 ರೂ
- ಕೇರಳ: 265 ರೂ
- ಅಹ್ಮದಾಬಾದ್: 255 ರೂ
- ಜೈಪುರ: 255 ರೂ
- ಲಕ್ನೋ: 255 ರೂ
- ಭುವನೇಶ್ವರ್: 265 ರೂ
- ಪುಣೆ: 255
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ