Headlines

Gold Rates: ನಿನ್ನೆ ಏರಿದ್ದ ಚಿನ್ನದ ಬೆಲೆ ಇವತ್ತು ಕುಸಿತ; ಬೆಳ್ಳಿಯೂ ಅಗ್ಗ

Gold Rates: ನಿನ್ನೆ ಏರಿದ್ದ ಚಿನ್ನದ ಬೆಲೆ ಇವತ್ತು ಕುಸಿತ; ಬೆಳ್ಳಿಯೂ ಅಗ್ಗ


Gold Rates: ನಿನ್ನೆ ಏರಿದ್ದ ಚಿನ್ನದ ಬೆಲೆ ಇವತ್ತು ಕುಸಿತ; ಬೆಳ್ಳಿಯೂ ಅಗ್ಗ

ಬೆಂಗಳೂರು, ಏಪ್ರಿಲ್ 9: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಣ್ಣಾಮುಚ್ಚಾಳೆ ಆಟ ಆಡುತ್ತಿವೆ. ಅದರಲ್ಲೂ ಚಿನ್ನದ ಬೆಲೆಯಂತೂ ಪ್ರಕ್ಷುಬ್ಧತೆಯಿಂದ ಕೂಡಿದೆ. ನಿನ್ನ ಅಂದಾಜು 500 ರೂಗಳಷ್ಟು ಏರಿದ್ದ ಚಿನ್ನದ ಬೆಲೆ (ಚಿನ್ನದ ದರಗಳು) ಇವತ್ತು 200ಕ್ಕೂ ಹೆಚ್ಚು ರೂಗಳ ಕುಸಿತ ಕಂಡಿದೆ. ಆಭರಣ ಚಿನ್ನದ ಬೆಲೆ ಮತ್ತೆ 14,000 ರೂ ಗಡಿಯೊಳಗೆ ಇಳಿದಿದೆ. ಬೆಳ್ಳಿ ಬೆಲೆಯೂ ಇಂದು ಗುರುವಾರ ಕಡಿಮೆಯಾಗಿದೆ. ನಿನ್ನೆ 10 ರೂ ಇಳಿದಿದ್ದ ಇದರ ಬೆಲೆ ಇವತ್ತು 5 ರೂ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,38,850 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,51,480 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 25,500 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,38,850 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 25,500 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 9ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,148 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,885 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,361 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,148 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,885 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 13,885 ರೂ
  • ಬೆಲೆ: 14,000 ರೂ
  • ಮುಂಬೈ: 13,885 ರೂ
  • ದೆಹಲಿ: 13,900 ರೂ
  • ಕೋಲ್ಕತಾ: 13,885 ರೂ
  • ಕೇರಳ: 13,885 ರೂ
  • ಅಹ್ಮದಾಬಾದ್: 13,890 ರೂ
  • ಜೈಪುರ: 13,900 ರೂ
  • ಲಕ್ನೋ: 13,900 ರೂ
  • ಭುವನೇಶ್ವರ್: 13,885 ರೂ

ಇದನ್ನೂ ಓದಿ: ಪಿಪಿಎಫ್‌ನಲ್ಲಿ ಕೇವಲ 1 ಪರ್ಸಂಟ್ ಬಡ್ಡಿಗೆ ಸಾಲ? ಯಾವ ವರ್ಷ, ಎಷ್ಟು ಅವಧಿ ಇತ್ಯಾದಿ ನಿಯಮಗಳು ತಿಳಿದಿರಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 579 ರಿಂಗಿಟ್ (13,471 ರೂಪಾಯಿ)
  • ದುಬೈ: 530.50 ಡಿರಾಮ್ (13,375 ರೂಪಾಯಿ)
  • ಅಮೆರಿಕ: 148 ಡಾಲರ್ (13,696 ರೂಪಾಯಿ)
  • ಸಿಂಗಾಪುರ: 187.80 ಸಿಂಗಾಪುರ ಡಾಲರ್ (13,636 ರೂಪಾಯಿ)
  • ಕತಾರ್: 526 ಕತಾರಿ ರಿಯಾಲ್ (13,360 ರೂ)
  • ಸೌದಿ ಅರೇಬಿಯಾ: 540 ಸೌದಿ ರಿಯಾಲ್ (13,324 ರೂಪಾಯಿ)
  • ಓಮನ್: 56.65 ಒಮಾನಿ ರಿಯಾಲ್ (13,625 ರೂಪಾಯಿ)
  • ಕುವೇತ್: 43.50 ಕುವೇತಿ ದಿನಾರ್ (13,141 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 255 ರೂ
  • ಬೆಲೆ: 260 ರೂ
  • ಮುಂಬೈ: 255 ರೂ
  • ದೆಹಲಿ: 255 ರೂ
  • ಕೋಲ್ಕತಾ: 255 ರೂ
  • ಕೇರಳ: 260 ರೂ
  • ಅಹ್ಮದಾಬಾದ್: 255 ರೂ
  • ಜೈಪುರ: 255 ರೂ
  • ಲಕ್ನೋ: 255 ರೂ
  • ಭುವನೇಶ್ವರ್: 260 ರೂ
  • ಪುಣೆ: 255

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *