ಕರ್ನಾಟಕ ರಾಜ್ಯೋತ್ಸವದಂದೇ ಮೆಟ್ರೋ ಪ್ರಯಾಣಿಕರಿಗೆ ಗುಡ್​​ನ್ಯೂಸ್​​: ಯೆಲ್ಲೋ ಲೈನ್​ಗೆ ಮತ್ತೊಂದು ರೈಲು

ಕರ್ನಾಟಕ ರಾಜ್ಯೋತ್ಸವದಂದೇ ಮೆಟ್ರೋ ಪ್ರಯಾಣಿಕರಿಗೆ ಗುಡ್​​ನ್ಯೂಸ್​​: ಯೆಲ್ಲೋ ಲೈನ್​ಗೆ ಮತ್ತೊಂದು ರೈಲು


ಬೆಂಗಳೂರು, ಅಕ್ಟೋಬರ್ 31: ನವೆಂಬರ್ 1 ರಿಂದ ಹಳದಿ ಮಾರ್ಗದಲ್ಲಿ ನಾಳೆ ಬೆಳಿಗ್ಗೆ 5 ಗಂಟೆಗೆ 5 ನೇ ಮೆಟ್ರೋ ರೈಲು ಸೇವೆ ಪ್ರಾರಂಭವಾಗಲಿದೆ. ಆ ಮೂಲಕ ಕರ್ನಾಟಕ ರಾಜ್ಯೋತ್ಸವ (ಕರ್ನಾಟಕ ರಾಜ್ಯೋತ್ಸವ) ಈ ಸಂದರ್ಭದಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ನಾಳೆಯಿಂದ ಯೆಲ್ಲೋ ಲೈನ್‌ನಲ್ಲಿ ಪ್ರತಿದಿನ 5 ಮೆಟ್ರೋ ಸಂಚರಿಸಲಿವೆ. ಈ ಕುರಿತಾಗಿ ಬಿಎಂಆರ್ ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಬಿಎಂಆರ್ ಸಿಎಲ್ ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ?

ಕರ್ನಾಟಕ ರಾಜ್ಯೋತ್ಸವದ 70ನೇ ವರ್ಷದ ಆಚರಣೆಯ ಸಂದರ್ಭದಲ್ಲಿ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು, ನವೆಂಬರ್ 1 ರಿಂದ ಹಳದಿ ಮಾರ್ಗದಲ್ಲಿ ಐದನೇ ಮೆಟ್ರೋ ರೈಲನ್ನು ವಾಣಿಜ್ಯ ಸೇವೆಗೆ ಒಳಪಡಿಸಲಾಗುತ್ತಿದೆ.

ಇದನ್ನೂ ಓದಿ

ನಮ್ಮ ಮೆಟ್ರೋ ಟ್ವೀಟ್

ಈ ಹೊಸ ರೈಲಿನ ಪ್ರತಿ ಚಾಲನೆಯಿಂದ, ಹಳದಿ ಮಾರ್ಗದಲ್ಲಿ ಪೀಕ್ ಸಮಯದಲ್ಲಿ ರೈಲುಗಳ ಆವರ್ತನವು 15 ನಿಮಿಷಕ್ಕೊಮ್ಮೆ ರೈಲುಗಳು ಸಂಚರಿಸುತ್ತವೆ. (ಪ್ರಸಕ್ತ 19 ನಿಮಿಷಗಳ ಅಂತರದ ಬದಲಾಗಿ). ಈ ಪ್ರಯಾಣಿಕರಿಗೆ ಕಡಿಮೆ ಸಮಯದಲ್ಲಿ ಸುಗಮ ಮತ್ತು ನಿರಂತರ ಸೇವೆಗೆ ಸಹಾಯಕ ವಸ್ತು. ಈ ಬದಲಾವಣೆ ಎಲ್ಲಾ ದಿನಗಳಿಗೆ ಅನ್ವಯವಾಗುತ್ತದೆ.

ಇದನ್ನೂ ಓದಿ: ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಬಂತು ಮತ್ತೊಂದು ಹೊಸ ರೈಲು: ಆಯ್ಕೆಯಲ್ಲಿ ಬದಲಾವಣೆ

ಆರ್.ವಿ. ರಸ್ತೆ ಮತ್ತು ಬೊಮ್ಮಸಂದ್ರ ಟರ್ಮಿನಲ್ ನಿಲ್ದಾಣಗಳಿಂದ ಹೊರಡುವ ಮೊದಲ ಮತ್ತು ಕೊನೆಯ ರೈಲುಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಈ ಮಾರ್ಗದಲ್ಲಿ ಕೊನೆಯ ರೈಲು ರಾತ್ರಿ 11 ಗಂಟೆಗೆ ಸಂಚಾರ ಮಾಡಲಿದೆ. ಪ್ರಯಾಣಿಕರು ಈ ಬದಲಾವಣೆಯನ್ನು ಗಮನಿಸಿ. ಸುಧಾರಿತ ಮೆಟ್ರೋ ಸೇವೆಗಳು ಸದುಪಯೋಗ ಪಡೆದುಕೊಳ್ಳುವಂತೆ ಬಿಎಂಆರ್ ಸಿಎಲ್ ವಿನಂತಿಸಿದೆ.

ಇದನ್ನೂ ಓದಿ: ಹಳದಿ ಲೈನ್ ಮೆಟ್ರೋ: ಮುಂದಿನ ವಾರದಿಂದ ಟ್ರ್ಯಾಕಿಗಿಳಿಯಲಿದೆ ನಮ್ಮ ಮೆಟ್ರೋ ಯೆಲ್ಲೋ ಲೈನ್ ನಾಲ್ಕನೇ ರೈಲು

ಆಗಸ್ಟ್ 10 ರಂದು ಈ ಮಾರ್ಗಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗ್ರೀನ್ ಸಿಗ್ನಲ್ ನೀಡಿದ್ದರು. ಆರ್.ವಿ ರೋಡ್ ಟು ಬೊಮ್ಮಸಂದ್ರ 16 ಮೆಟ್ರೋ ಸ್ಟೇಷನ್, 19.5 ಕಿಮೀ ವಿಸ್ತೀರ್ಣ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 3:11 pm, ಶುಕ್ರ, 31 ಅಕ್ಟೋಬರ್ 25





Source link

Leave a Reply

Your email address will not be published. Required fields are marked *