Headlines

ಅಕ್ರಮ ಗ್ಯಾಂಬ್ಲಿಂಗ್ ದಂಧೆಗೆ ಕಡಿವಾಣ; ಕೆಲವೇ ತಿಂಗಳಲ್ಲಿ 7,800ಕ್ಕೂ ಹೆಚ್ಚು ವೆಬ್​ಸೈಟ್​ಗಳನ್ನು ಬ್ಲಾಕ್ ಮಾಡಿದ ಸರ್ಕಾರ

ಅಕ್ರಮ ಗ್ಯಾಂಬ್ಲಿಂಗ್ ದಂಧೆಗೆ ಕಡಿವಾಣ; ಕೆಲವೇ ತಿಂಗಳಲ್ಲಿ 7,800ಕ್ಕೂ ಹೆಚ್ಚು ವೆಬ್​ಸೈಟ್​ಗಳನ್ನು ಬ್ಲಾಕ್ ಮಾಡಿದ ಸರ್ಕಾರ


ಜನವರಿ 16: ಭಾರತ ಸರ್ಕಾರ ಅಕ್ರಮ ಬೆಟ್ಟಿಂಗ್ ದಂಡೆಗಳಿಗೆ (ಅಕ್ರಮ ಬೆಟ್ಟಿಂಗ್ ಮತ್ತು ಜೂಜಾಟ) ಕಡಿವಾಣ ಹಾಕುವ ಪ್ರಯತ್ನವನ್ನು ಮುಂದುವರೆಸಿದೆ. ಈ ದಿನ ಇವತ್ತು ಒಂದೇ ದಿನ 242 ಅಕ್ರಮ ಬೆಟ್ಟಿಂಗ್ ಮತ್ತು ಗ್ಯಾಂಬ್ಲಿಂಗ್ ವೆಬ್ ಸೈಟ್ ಲಿಂಕ್ ಬ್ಲಾಕ್ ಆಗಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಸಾವಿರಾರು ಅಕ್ರಮ ಬೆಟ್ಟಿಂಗ್ ವೆಬ್‌ಸೈಟ್‌ಗಳನ್ನು ಸರ್ಕಾರ ನಿರ್ಬಂಧಿಸಿರುವುದು ಗಮನಾರ್ಹವಾಗಿದೆ.

2025ರ ಆಗಸ್ಟ್ ತಿಂಗಳಿನಲ್ಲಿ ಆನ್‌ಲೈನ್ ಗೇಮಿಂಗ್ ಕಾಯ್ದೆ ಜಾರಿಗೆ ಬಂದಿದೆ. ಆಗಿನಿಂದ ಇಲ್ಲಿಯವರೆಗೆ 7,800ಕ್ಕೂ ಅಧಿಕ ಅಕ್ರಮ ಬೆಟ್ಟಿಂಗ್ ಮತ್ತು ಜೂಜು (ಗ್ಯಾಂಬ್ಲಿಂಗ್) ಜಾಲತಾಣಗಳ ಲಿಂಕ್‌ಗಳು ಭಾರತದಲ್ಲಿ ಬ್ಲಾಕ್ ಆಗಿವೆ.

ಕಾಯ್ದೆ ಜಾರಿಯಾಗುವ ಮುನ್ನ, 2022ರಿಂದ 2025ರ ಜೂನ್ ವರೆಗೆ ಐಟಿ ಕಾಯ್ದೆಯ ಸೆಕ್ಷನ್ 69ಎ ಬಳಸಿ 1,524 ಬೆಟ್ಟಿಂಗ್ ಮತ್ತು ಗ್ಯಾಂಬ್ಲಿಂಗ್ ವೆಬ್ ಸೈಟ್ ಗಳು ಹಾಗೂ ಮೊಬೈಲ್ ಆಪ್ ಗಳನ್ನು ಸರ್ಕಾರ ಬ್ಲಾಕ್ ಮಾಡಿತ್ತು. ಈಗ ಗೇಮಿಂಗ್ ಆಯಕ್ಟ್ (ಗೇಮಿಂಗ್ ಆಕ್ಟ್ 2025) ಜಾರಿಯಾಗಿ ನಾಲ್ಕೇ ತಿಂಗಳಲ್ಲಿ ಏಳು ಸಾವಿರಕ್ಕೂ ಅಧಿಕ ಜಾಲತಾಣಗಳನ್ನು ತಡೆಯಲಾಗಿರುವುದು ವಿಶೇಷ.

ಇದನ್ನೂ ಓದಿ: ಸೌರ: 2026ರಲ್ಲಿ ಭಾರತ ವಿಶ್ವದ ಎರಡನೇ ಅತಿದೊಡ್ಡ ಸೌರ ಮಾರುಕಟ್ಟೆ

ಬೆಟ್ಟಿಂಗ್ ಮತ್ತು ಗ್ಯಾಂಬ್ಲಿಂಗ್ ನಿಂದ ಯುವಜನರು ಅತಿಹೆಚ್ಚು ಹಾನಿಗೊಳಗಾಗುತ್ತಿದ್ದಾರೆ. ಬಹಳ ಜನರು ಸಾಕಷ್ಟು ಹಣ ಕಳೆದುಕೊಂಡರು ತಮ್ಮ ಜೊತೆ ಕುಟುಂಬವನ್ನೂ ಬೀದಿಗೆ ಬೀಳುವಂತೆ ಮಾಡುತ್ತಿದ್ದಾರೆ. ಅಕ್ರಮವಾಗಿ ನಡೆಯುವ ಈ ಆನ್‌ಲೈನ್ ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ಗಳಿಗೆ ಕಡಿವಾಣ ಹಾಕಿ ಜನರನ್ನು ರಕ್ಷಿಸಲು ಸರ್ಕಾರ ಪಣತೊಟ್ಟು ಕೆಲಸ ಮಾಡುತ್ತಿದೆ ಎಂದು ಸರ್ಕಾರದ ಮೂಲಗಳು ಹೇಳಿದ್ದಾಗಿ ಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *