Headlines

ಹಬ್ಬ ಮುಗಿದ ಮೂರೇ ದಿನಕ್ಕೆ ದೇಗುಲಕ್ಕೆ ಕನ್ನ: 4 ಕೆಜಿ ಬೆಳ್ಳಿ, 30 ಗ್ರಾಂ ಚಿನ್ನಾಭರಣ ದೋಚಿ ಪರಾರಿ

ಹಬ್ಬ ಮುಗಿದ ಮೂರೇ ದಿನಕ್ಕೆ ದೇಗುಲಕ್ಕೆ ಕನ್ನ: 4 ಕೆಜಿ ಬೆಳ್ಳಿ, 30 ಗ್ರಾಂ ಚಿನ್ನಾಭರಣ ದೋಚಿ ಪರಾರಿ


ಹಬ್ಬ ಮುಗಿದ ಮೂರೇ ದಿನಕ್ಕೆ ದೇಗುಲಕ್ಕೆ ಕನ್ನ: 4 ಕೆಜಿ ಬೆಳ್ಳಿ, 30 ಗ್ರಾಂ ಚಿನ್ನಾಭರಣ ದೋಚಿ ಪರಾರಿ

ಚಾಮರಾಜನಗರ, ಮಾರ್ಚ್ 12: ವಿವಿಧ ದೇವಾಲಯಗಳಲ್ಲಿ ನಿರಂತರವಾಗಿ ದುಷ್ಕರ್ಮಿಗಳು ಕಳ್ಳತನ ಎಸಗುತ್ತಿದ್ದಾರೆ. ಇತ್ತೀಚೆಗೆ ಗುಂಡ್ಲುಪೇಟೆ ತಾಲೂಕಿನ ಆರು ದೇವಸ್ಥಾನಗಳಲ್ಲಿ ಕಳ್ಳತನವಾಗಿತ್ತು (ದೇವಸ್ಥಾನ ಕಳ್ಳತನ). ಆ ಘಟನೆ ಮಾಸುವ ಮುನ್ನವೇ ಇದೀಗ ಕಳ್ಳರು ಮತ್ತೆ ಕೈಚಳಕ ತೋರಿಸಿದ್ದಾರೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದ ಹಬ್ಬ ಮುಗಿದ ಮೂರೇ ದಿನಕ್ಕೆ ದೇವಸ್ಥಾನದ ಬಾಗಿಲು ಮೀಟಿ 4 ಕೆ.ಜಿ ಬೆಳ್ಳಿ ಮತ್ತು 30 ಗ್ರಾಂ ಚಿನ್ನಾಭರಣ ದೋಚಿ ಕಳ್ಳರು ಪರಾರಿಯಾಗಿದ್ದಾರೆ.

ನಡೆದಿದ್ದೇನು?

ಚಾಮರಾಜ ಜಿಲ್ಲೆಯಲ್ಲಿ ಕಳ್ಳರ ಕೈಚಳಕ ಮುಂದುವರೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ಬಸವೇಶ್ವರ ಮತ್ತು ಮಾರಮ್ಮ ದೇವಸ್ಥಾನದ ಬಾಗಿಲುಗಳನ್ನು ಮೀಟಿ ಕಳ್ಳತನ ಮಾಡಲಾಗಿದೆ. ಹಬ್ಬ ಮುಗಿದು ಮೂರೇ ದಿನಕ್ಕೆ ದೇಗುಲದಲ್ಲಿದ್ದ 4 ಕೆ.ಜಿ ಬೆಳ್ಳಿ ಮತ್ತು 30 ಗ್ರಾಂ ಚಿನ್ನಾಭರಣ ದೋಚಿ ಕಳ್ಳರು ಪರಾರಿ ಆಗಿದ್ದಾರೆ.

ಇದನ್ನೂ ಓದಿ: ಮಂತ್ರಾಲಯಕ್ಕೆ ಹೋಗುವುದು ಅವರ ಕನಸಾಗಿತ್ತು: ಹರಕೆ ತೀರಿಸಿ ರಾಯರ ದರ್ಶನ ಪಡೆಯಲು ಹೋದ ವ್ಯಕ್ತಿ ನಾಪತ್ತೆ

ಕಳ್ಳರು ದೋಚುವ ಮುಂಚೆ ಮೊದಲು ಸಿಸಿಟಿವಿ ಕ್ಯಾಮೆರಾದ ಹಾರ್ಡಿಸ್ಕ್ ಎಗರಿಸಿದ್ದಾರೆ. ಕಳ್ಳತನ ಸುಳಿವಿಲ್ಲದಂತೆ ಖದೀಮರು ಕೃತ್ಯವೆಸಗಿದ್ದಾರೆ. ಸದ್ಯ ಗ್ರಾಮಸ್ಥರ ಕೃತ್ಯ ಪೂರ್ವ ನಿಯೋಜಿತ ಎಂದು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ಭೇಟಿ ನೀಡಿದ್ದು, ಡಾಗ್ ಸ್ಕೋಡ್, ಬೆಳರಚ್ಚು ಪ್ರಕರಣದಲ್ಲಿ ತೀವ್ರ ಪರಿಶೀಲನೆ ನಡೆಸಲಾಗಿದೆ.

ಬೀದರ್ ಜಿಲ್ಲೆಯಲ್ಲಿ ವಿವಿಧ ಕಡೆ ಕಳ್ಳತನ

ಬೀದರ್ ಜಿಲ್ಲೆಯಲ್ಲಿ ವಿವಿಧ ಕಡೆ ಕಳ್ಳತನ ಪ್ರಕರಣಗಳು ನಡೆದಿವೆ. ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಇತ್ತೀಚೆಗೆ ಸರಣಿ ಕಳ್ಳತನ ನಡೆದಿವೆ. ಚಿಟಗುಪ್ಪ ತಾಲೂಕಿನ ಮಂಗಲಗಿ, ಮಸ್ತರಿವಾಡಿ ಹಾಗೂ ಮುತ್ತಂಗಿ ಗ್ರಾಮಗಳಲ್ಲಿ ಕಳ್ಳರು ಕೈಚಳಕ ತೋರಿದ್ದರು. ಮಂಗಲಗಿ ಗ್ರಾಮದ ಲಕ್ಷ್ಮೀ ದೇವಸ್ಥಾನ ಹಾಗೂ ಮುಸ್ತರಿವಾಡಿಯ ಭವಾನಿ ದೇವಸ್ಥಾನಗಳಲ್ಲಿ ಕಳ್ಳರು ನುಗ್ಗಿ ದೇವಿಯ ಕೊರಳಲ್ಲಿದ್ದ ತಾಳಿ ಕದ್ದು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಚಂಗಡಿ ಗ್ರಾಮಸ್ಥರ ಕನಸು: ಕಲ್ಲು-ಮುಳ್ಳಿನ ಹಾದಿ, 23 ಕಿಮೀ ಕಾಡಿನಲ್ಲಿ ಜನರ ನಿತ್ಯ ದರ್ಶನ

ಇದೇ ವೇಳೆ ಮುತ್ತಂಗಿ ಗ್ರಾಮದ ಡಿಸಿಸಿ ಬ್ಯಾಂಕ್ ಶಾಖೆಯ ಕೀ ಮುರಿದು ಬ್ಯಾಂಕ್ ದರೋಡೆಗೆ ಕಳ್ಳರು ಯತ್ನಿಸಿದ್ದರು. ಆದರೆ ಯತ್ನ ವಿಫಲವಾಗಿದೆ. ಮಂಗಲಗಿ ಗ್ರಾಮದಲ್ಲಿ ಮೂರು ಮನೆಗಳು ಹಾಗೂ ಒಂದು ಕಿರಾಣಿ ಅಂಗಡಿಯಲ್ಲಿ ಕೂಡ ಕಳ್ಳತನ ನಡೆದಿತ್ತು. ಕಳ್ಳರ ಕೈಚಲಕ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳ್ಳರು ಮುಖಕ್ಕೆ ಮಾಸ್ಕ್ ಧರಿಸಿ ಕಳ್ಳತನ ಮಾಡಿದ್ದಾರೆ. ಈ ಮನ್ನಾ ಏಖೆಳ್ಳಿ ಹಾಗೂ ಚಿಟಗುಪ್ಪಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *