Headlines

ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!

ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!


ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!

ಕಾರವಾರ, ಮಾರ್ಚ್ 16: ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ಪಟ್ಟಣದಲ್ಲಿ ಭಾನುವಾರ ಸಂಜೆ ಅಬ್ಬರದ ಗಾಳಿ ಮಳೆ ಸುರಿದಿದೆ. ಪರಿಣಾಮವಾಗಿ ಬೃಹತ್ ಮರ ಧರೆಗುರುಳಿದೆ. ಮುಂಡಗೋಡ–ಪಾಳ–ಹಾನಗಲ್ ರಸ್ತೆಯಲ್ಲಿ ಮರ ಉರುಳಿಬಿದ್ದಿದೆ. ಆಲಿಕಲ್ಲು ಮಳೆಯೂ ಸುರಿದಿದೆ. ಮರ ಹೆದ್ದಾರಿಯ ಮಧ್ಯೆ ಬಿದ್ದ ಪರಿಣಾಮ ವಾಹನ ಸವಾರರು ಕೆಲಕಾಲ ಪರದಾಡಿದರು. ಇದರ ಮಧ್ಯೆ ದೇಶದ ಹಲವು ಭಾಗಗಳಲ್ಲಿ ಎಲ್‌ಪಿಜಿ ಗ್ಯಾಸ್ ಕೊರತೆ ಉಂಟಾಗಿರುವ ಹಿನ್ನೆಲೆ, ಸ್ಥಳೀಯರು ಮರವನ್ನು ಸೌದೆಗಾಗಿ ಕತ್ತರಿಸಲು ಮುಗಿಬಿದ್ದರು. ಮಳೆ ಸುರಿಯುತ್ತಿದ್ದರೂ ಸಹ ಮರದ ಕೊಂಬೆಗಳನ್ನು ಕತ್ತರಿಸಿ ತೆಗೆದುಕೊಂಡು ಹೋಗುತ್ತಿರುವ ದೃಶ್ಯಗಳು ಕಂಡುಬಂದವು.

ನಂತರ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಮರವನ್ನು ಸಂಪೂರ್ಣವಾಗಿ ಸೂಚಿಸಿ ರಸ್ತೆ ಸಂಚಾರಕ್ಕೆ ಮಾಡಿಕೊಟ್ಟರು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *