ಉತ್ತರ ಕನ್ನಡ, ಡಿ.30: ಶಾಲಾ ವಿದ್ಯಾರ್ಥಿಗಳಿಂದ ಕಾರು ತೊಳೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬಿ.ಕೆ.ಹಳ್ಳಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕ ಉದಯ್ ವಿದ್ಯಾರ್ಥಿಗಳಿಂದ ಶಾಲೆ ಮಕ್ಕಳಿಂದ ಕಾರು ತೊಳೆಸಿದ್ದಾರೆ. ಶಾಲಾ ಅವಧಿಯಲ್ಲೇ ತನ್ನ ಕಾರು ತೊಳೆಯುವಂತೆ ಹೇಳಿದೆ. ಮಕ್ಕಳು ಕಾರು ಕ್ಲಿನ್ ಮಾಡುವ ವಿಡಿಯೋವನ್ನು ವ್ಯಕ್ತಿಯೊಬ್ಬರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಹಿಂದೆಯೂ ಕೂಡ ಶಿಕ್ಷಕ ಉದಯ್ ಇಂತಹ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ಶಿಕ್ಷಣ ಇಲಾಖೆಗೆ ದೂರು ಕೂಡ ನೀಡಲಾಯಿತು. ಈ ದೂರಿನ ಆಧಾರದ ಮೇಲೆ ಹಳಿಯಾಳ ಬಿಇಒ ಪ್ರಮೋದ ಮಹಾಲೆ ಈ ವಿಷಯದ ಬಗ್ಗೆ ವರದಿ ನೀಡುವಂತೆ ಶಾಲಾ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ