
ಕೊಪ್ಪಳ, ಏಪ್ರಿಲ್ 2: ಹನುಮ ಜಯಂತಿ ಪ್ರಯುಕ್ತ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಐತಿಹಾಸಿಕ ಅಂಜನಾದ್ರಿ ಬೆಟ್ಟದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಆಂಜನೇಯನ ಜನ್ಮಸ್ಥಳವಾದ ಈ ಪುಣ್ಯಕ್ಷೇತ್ರದಲ್ಲಿ ಹನುಮ ಜಯಂತಿಯ ಪ್ರಯುಕ್ತ ಬೆಳಿಗ್ಗೆಯಿಂದ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನಡೆದವು. ಕೇಸರಿ ವರ್ಣಮಯವಾಗಿ ಶೃಂಗಾರಗೊಂಡಿದ್ದ ಆಂಜನೇಯನ ಮೂರ್ತಿಯು ಭಕ್ತರ ಗಮನ ಸೆಳೆಯಿತು. ಹನುಮ ಜಯಂತಿ ಹಿನ್ನಲೆಯಲ್ಲಿ ಅಂಜನಾದ್ರಿ ಬೆಟ್ಟಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಮತ್ತು ಹೊರ ರಾಜ್ಯಗಳಿಂದಲೂ ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ