ಹಾಸನ: ಹೊಸ ವರ್ಷದ ಮೊದಲ ದಿನವೇ ಭೀಕರ ದುರಂತ; ವಾಹನ​ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವು

ಹಾಸನ: ಹೊಸ ವರ್ಷದ ಮೊದಲ ದಿನವೇ ಭೀಕರ ದುರಂತ; ವಾಹನ​ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವು


ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಅಪಘಾತ

ಹಾಸನ, ಜನವರಿ 01: ಜಿಲ್ಲೆಯ ಅರಸೀಕೆರೆ ತಾಲೂಕಿನ ಚಿಕ್ಕಾರಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅಡಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಕಡೂರು ತಾಲೂಕಿನ ತಂಗ್ಲಿ ಗ್ರಾಮದ ನಿವಾಸಿಗಳಾದ ಶಬ್ಬೀರ್(55), ತಿಮ್ಮಣ್ಣ(53) ಮತ್ತು ಸಂಜಯ್(45) ಮೃತರು. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೆ, ಕಡೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಣಾವರ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.



Source link

Leave a Reply

Your email address will not be published. Required fields are marked *