Headlines

ಹೊಸ ದಾಖಲೆ ಬರೆದ ಹಾಸನಾಂಬೆ: ಒಂದೇ ವಾರದಲ್ಲಿ ದೇಗುಲಕ್ಕೆ ಬಂತು ಕೋಟ್ಯಂತರ ರೂ. ಆದಾಯ

ಹೊಸ ದಾಖಲೆ ಬರೆದ ಹಾಸನಾಂಬೆ: ಒಂದೇ ವಾರದಲ್ಲಿ ದೇಗುಲಕ್ಕೆ ಬಂತು ಕೋಟ್ಯಂತರ ರೂ. ಆದಾಯ


ಹಾಸನ, (ಅಕ್ಟೋಬರ್ 17): ಹಾಸನಾಂಬ (ಹಾಸನಾಂಬ) ದರ್ಶನೋತ್ಸವ ಆರಂಭಗೊಂಡು ಕೇವಲ ಒಂದೇ ವಾರದಲ್ಲಿ (8 ದಿನ) ಹೊಸ ಇತಿಹಾಸ ಸೃಷ್ಟಿಯಾಗಿದೆ. ಹೌದು..ಇಲ್ಲಿಯವರೆಗೂ 15,30,000 ಭಕ್ತರು ಹಾಸನಾಂಬ ದೇವಿ ದರ್ಶನದಲ್ಲಿದ್ದಾರೆ. ಇನ್ನು ಕೇವಲ 8 ದಿನದಲ್ಲಿ ದೇವಾಲಯಕ್ಕೆ 10.5 ಕೋಟಿ ರೂ. ಆದಾಯ ಹರಿದು ಬಂದಿದ್ದು, ದಾಖಲೆಯಾಗಿದೆ. ಈ ಬಾರಿ ವಿಐಪಿ, ವಿವಿಐಪಿ ಪಾಸ್‌ಗಳನ್ನು ರದ್ದುಪಡಿಸಲಾಗಿದೆ ಭಕ್ತರು ಸುಗಮವಾಗಿ ದರ್ಶನ ಪಡೆಯುತ್ತಿದ್ದಾರೆ. ಮೂಲತಃ ಭಕ್ತರಲ್ಲಿ ಸಂತಸ ಮೂಡಿದೆ. ನಾಡಿನ ನಾನಾ ಭಾಗಗಳಿಂದ ಭಕ್ತರ ದಂಡೇ ಹಾಸನಾಂಬೆಯ ದರ್ಶನಕ್ಕೆ ಹರಿದು ಬರುತ್ತಿದೆ. ಈ ಐದು ದಿನ ಹಾಸನಾಂಬ ಜಾತ್ರಾ ಮಹೋತ್ಸವ, ಈ ಐದು ದಿನದಲ್ಲಿ ಲಕ್ಷಾಂತರ ಭಕ್ತರು ದರ್ಶನಕ್ಕೆ ಆಗಮಿಸುವ ನಿರೀಕ್ಷೆ ಇದೆ.

ಹಾಸನಾಂಬೆ ದರ್ಶನದ ಬಗ್ಗೆ ಡಿಸಿ ಹೇಳಿದ್ದಿಷ್ಟು

ಇನ್ನು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶುಕ್ರವಾರ ಸಾಗರೋಪಾದಿಯಲ್ಲಿ ಭಕ್ತರು ಆಗಮಿಸಿದ್ದಾರೆ. ಇಂದು 1,60,000 ಭಕ್ತರಿಂದ ದರ್ಶನ ಮಾಡಿದ್ದು, ಜನರಿಗೆ ಸವಾಲಾಗಿದೆ. ಎಲ್ಲಾ ಸರತಿ ಸಾಲುಗಳು ಸಂಪೂರ್ಣ ಭರ್ತಿಯಾಗಿವೆ. ಇಂದು 4 ಲಕ್ಷಕ್ಕೂ ಹೆಚ್ಚು ಭಕ್ತರು ದರ್ಶನ ಪಡೆಯುವ ನಿರೀಕ್ಷೆ ಇದೆ. ನಾನೇ ಧರ್ಮ ದರ್ಶನದ ಸಾಲಿನಲ್ಲಿ ಬಂದು 3 ಗಂಟೆ ನಂತರ ದರ್ಶನ ಪಡೆದಿದ್ದೇನೆ. ಈಗ ಸಮಯ ಹೆಚ್ಚಾಗುತ್ತಿದೆ. ಕೆಲವು ಭಕ್ತರು ಅಸಮಾಧಾನ ತೊಡಿಕೊಳ್ಳುತ್ತಿದ್ದಾರೆ. ಬೆಳಗ್ಗೆ 7 ಗಂಟೆಗೆ ನಿಂತವರು, ಸಂಜೆ 4 ಗಂಟೆಗೆ ದರ್ಶನ ಪಡೆದಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಹಾಸನಾಂಬೆ ದರ್ಶನದಲ್ಲಿ ದಾಖಲೆಯ ಆದಾಯ: ಒಂದೇ ದಿನಕ್ಕೆ 1 ಕೋಟಿಗೂ ಹೆಚ್ಚು ಹಣ ಸಂಗ್ರಹ

ಗರ್ಭಗುಡಿ ಬಳಿ ತಳ್ಳುತ್ತಿದ್ದಾರೆಂದು ಕೆಲವರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಭಕ್ತರು ಶಾಂತಿಯಿಂದ ಸಹಕರಿಸಬೇಕು. 1000 ಕೊಟ್ಟರೆ ಸರತಿ ಸಾಲು ಕಡಿಮೆ ಇರುತ್ತದೆ. ಅನುಕೂಲವಾಗಲಿ ಎಂದು ಮಾಡಿದ್ದೇವೆ ಎಂದರೆ ಹಣ ಮಾಡಲು ಅಲ್ಲ. ಎರಡರಿಂದ ಮೂರು ಪಟ್ಟು ಹೆಚ್ಚು ಭಕ್ತರು ಬಂದಿದ್ದಾರೆ. ಮುಂದೆ ಒಂದು ದಿನದಲ್ಲಿ ಭಕ್ತರ ಸಂಖ್ಯೆ ಐದು ಲಕ್ಷ ಮೀರಬಹುದು ಎಂದು ಹೇಳಿದರು.

ಧರ್ಮ ದರ್ಶನದ ಸಾಲಿನಲ್ಲಿ ಬರುತ್ತಿರುವವರಿಗೆ 7ರಿಂದ 8 ಗಂಟೆ, 1000 ರೂಪಾಯಿ ಟಿಕೆಟ್ ಪಡೆದವರಿಗೆ 3ರಿಂದ 4 ಗಂಟೆ ಹಾಗೂ 300 ರೂ. ಟಿಕೆಟ್ ಪಡೆದವರಿಗೆ 6 ರಿಂದ 7 ಗಂಟೆ ಸಮಯ ಆಗುತ್ತಿದೆ. ಹಾಸನಾಂಬೆ ದರ್ಶನಕ್ಕೆ ನಿಮಗೆ ಸಿಗುವುದು ಕೆಲ ಸೆಕೆಂಡ್‌ಗಳು ಮಾತ್ರ. ಪೂರ್ವ ತಯಾರಿ ಮಾಡಿಕೊಂಡು ಬಂದು ಆಶೀರ್ವಾದ ಪಡೆಯಿರಿ. ಮೊದಲು ತಾಳ್ಮೆ ಕಲಿಯಿರಿ, ಮೊಬೈಲ್ ಫೋನ್ ಬಳಸಬೇಡಿ. ಮಕ್ಕಳನ್ನು ಮೇಲೆತ್ತಿಕೊಂಡು ಬನ್ನಿ. ತುಂಬಾ ಒತ್ತಡ ಇದೆ. ದ್ವಾರ ಬಾಗಿಲು ಬಂದ ವೇಳೆಯೇ ದೇವಿ ಕಡೆಗೆ ನೋಡಿ ಎಂದು ಮನವಿ ಮಾಡಿದರು ಭಕ್ತರಿಗೆ ಡಿಸಿ ಕೆ.ಎಸ್.ಲತಾಕುಮಾರಿ ಮಾನವಿ ಮಾಡಿದರು.

ರಂದು ಪ್ರಕಟಿಸಲಾಗಿದೆ – 8:01 pm, ಶುಕ್ರ, 17 ಅಕ್ಟೋಬರ್ 25



Source link

Leave a Reply

Your email address will not be published. Required fields are marked *