ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ; 2 ಲಕ್ಷ ರೂ.ಗೂ ಅಧಿಕ ಮೌಲ್ಯದ ಡ್ರಗ್ಸ್ ಸೀಜ್

ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ; 2 ಲಕ್ಷ ರೂ.ಗೂ ಅಧಿಕ ಮೌಲ್ಯದ ಡ್ರಗ್ಸ್ ಸೀಜ್


ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ

ಹಾಸನ, ಫೆಬ್ರವರಿ 14: ಎನ್‌ಡಿಎಂಎ ಮಾದಕ ವಸ್ತುಗಳ ಮಾರಾಟ ಜಾಲವನ್ನು ಪೊಲೀಸರು ಭೇದಿಸಿದ್ದು, ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚೆಕ್ಪೋಸ್ಟ್ (ಹಾಸನ) ಬಳಿ ಕಾರಿನಲ್ಲಿ ಸುಮಾರು 40 ಗ್ರಾಂ ಎಂಡಿಎಂಎ ನಿಗದಿಪಡಿಸಿದ್ದು, ಅದರ ಮೌಲ್ಯ ರೂ.2 ಲಕ್ಷಕ್ಕೂ ಎಂದು ಅಂದಾಜಿಸಲಾಗಿದೆ.

ಶಿವಮೊಗ್ಗ ಮೂಲದವರು ಅರೆಸ್ಟ್

ಖಚಿತ ಮಾಹಿತಿಯ ಹಾಸನದ ರಾಜ್‌ಕುಮಾರ್ ನಗರ ಬಳಿಯ ಚೆಕ್‌ಪೋಸ್ಟ್‌ನಲ್ಲಿ ಸಂಚರಿಸುತ್ತಿದ್ದ ಎಟಿಗಾ ಕಾರನ್ನು ತಪಾಸಣೆ ನಡೆಸಿದ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಬಂಧಿತರನ್ನು ಶಿವಮೊಗ್ಗ ಮೂಲದ ಫರ್ವೀಜ್ (29), ಸುಹೇಲ್ (24), ಅಬ್ದುಲ್ ಯಾಸಿನ್ (20), ಇಬ್ರತ್ ಖಾನ್ (24) ಹಾಗೂ ಹಾಸನದ ಸೈಯದ್ ಯೂಸಫ್ (23) ಎಂದು ಗುರುತಿಸಲಾಗಿದೆ. ನಾಲ್ವರು ಶಿವಮೊಗ್ಗ ಜಿಲ್ಲೆಯವರಾಗಿದ್ದಾಗ, ಒಬ್ಬ ಹಾಸನ ನಿವಾಸಿ ಆಗಿದ್ದರು. 40 ಗ್ರಾಂ ಎಂಡಿಎಂಎ ಹಾಗೂ ಆರೋಪಿಗಳನ್ನು ಬಳಸುತ್ತಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದೆ.

ಪೆನ್ಷನ್ ಮೊಹಲ್ಲಾ ಠಾಣೆಯ ಸಿಪಿಐ ಸ್ವಾಮಿನಾಥ್ ನೇತೃತ್ವದಲ್ಲಿ ಪಿಎಸ್‌ಐ ರವಿ ಹಾಗೂ ಸಿಬ್ಬಂದಿ ಪ್ರಸನ್ನಕುಮಾರ್, ದಿಲೀಪ್, ಪುನೀತ್, ಲೋಕೇಶ್, ಹನುಮೇಶ್ ಸೇರಿದಂತೆ ಇನ್ನಿತರರು ಕಾರ್ಯಾಚರಣೆ ನಡೆಸಿದ್ದು, ಪ್ರಕರಣವನ್ನು ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.

ಇದನ್ನೂ ಮಂಗಳೂರು ಓದಿ: ಮೂವರು ಡ್ರಗ್ಸ್ ಪೆಡ್ಲರ್‌ಗಳ ಖೆಡ್ಡಾಕ್ಕೆ ಕೆಡವಿದ ಪೊಲೀಸರು, 11.90 ಲಕ್ಷ ರೂ. ಮೌಲ್ಯದ MDMA ವಶ

ಚಿಕ್ಕಮಗಳೂರಿನಲ್ಲೂ 5 ಕೆ.ಜಿ.ಗೂ ಹೆಚ್ಚು ಗಾಂಜಾ ವಶ

ಚಿಕ್ಕಮಗಳೂರು ನಗರ ಠಾಣೆಯ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಭಾರೀ ಪ್ರಮಾಣದ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ನಿಲ್ದಾಣದ ಸಮೀಪ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯ ಮೇಲೆ ದಾಳಿ ನಡೆಸಿ 5 ಕೆ.ಜಿ 850 ಗ್ರಾಂ ಗಾಂಜಾವನ್ನು ಸೀಜ್ ಮಾಡಲಾಗಿದೆ. ವಶಪಡಿಸಿಕೊಂಡ ಮಾದಕ ವಸ್ತುವಿನ ಮೌಲ್ಯ ಸುಮಾರು ಮೂರು ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಬಂಧಿತನನ್ನು ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ, ಆತ ಬೆಂಗಳೂರಿನ ನಿವಾಸಿಯಾಗಿದ್ದಾನೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣ ಸಂಬಂಧ ನಗರವನ್ನು ದಾಖಲಿಸಿಕೊಂಡು, ಗಾಂಜಾ ಸರಬರಾಜು ಜಾಲದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *