ಹಾಸನ: ಪತಿ, 7 ವರ್ಷದ ಮಗನನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲೇ ಮದುವೆಯಾದ ಮಹಿಳೆ!

ಹಾಸನ: ಪತಿ, 7 ವರ್ಷದ ಮಗನನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲೇ ಮದುವೆಯಾದ ಮಹಿಳೆ!


ಹಾಸನ: ಪತಿ, 7 ವರ್ಷದ ಮಗನನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲೇ ಮದುವೆಯಾದ ಮಹಿಳೆ!

ಹಾಸನ, ಏಪ್ರಿಲ್ 13: ಎಂಟು ವರ್ಷಗಳ ಕಾಲ ಪತಿಯೊಂದಿಗೆ ಸಂಸಾರ ನಡೆಸಿದ್ದ ಗೃಹಿಣಿಯಾಗಿರುವವರು, ಈಗ ತನ್ನ ಏಳು ವರ್ಷದ ಮಗ ಹಾಗೂ ಪತಿಯನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲೇ ವಿವಾಹ ವಿಚಿತ್ರ ಹಾಸನದಲ್ಲಿ (ಹಾಸನ) ನಡೆದಿದೆ. ಒಂದು ಬಾರಿ ಓಡಿಹೋಗಲು ಯತ್ನಿಸಿದ್ದ ಮಹಿಳೆಯನ್ನು ಪೋಷಕರ ದೂರಿನ ಪೊಲೀಸರು ಮಧ್ಯ ಪ್ರವೇಶಿಸಿ ಮನವೊಲಿಸಿ ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದರು. ಆದರೆ, ನಂತರ ಅಲ್ಲಿಂದಲೂ ಹೇಗೋ ತಪ್ಪಿಸಿಕೊಂಡ ಆಕೆ, ಪ್ರಿಯಕರನ ಜತೆ ಓಡಿಹೋಗಿ ಕಾರಿನಲ್ಲೇ ಮದುವೆಯಾಗಿದ್ದಾರೆ!

ಘಟನೆಯ ವಿವರ

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮುಂಡಗೋಡು ಗ್ರಾಮದ ಹರ್ಷಿತಾಗೆ 2017ರಲ್ಲಿ ಹಾಸನ ತಾಲೂಕಿನ ಮುಕಂದೂರು ಗ್ರಾಮದ ಪ್ರಕಾಶ್ ಅವರಿಗೆ ವಿವಾಹವಾಗಿತ್ತು. ಪ್ರಕಾಶ್ ಅವರು ಹರ್ಷಿತಾ ಅವರ ಅತ್ತೆಯ ಮಗನಾಗಿದ್ದರೆ, ದಂಪತಿಗೆ ಏಳು ವರ್ಷದ ಗಂಡು ಮಗನಿದ್ದಾನೆ. ಮಾರ್ಚ್ 30ರಂದು ‘ಆಸ್ಪತ್ರೆಗೆ ಹೋಗಿ ಬರುತ್ತೇನೆ’ ಎಂದು ಮನೆಯಿಂದ ಹೋದ ಹರ್ಷಿತಾ ವಾಪಸ್ ಬಂದಿರಲಿಲ್ಲ.

ಪೊಲೀಸ್ ಠಾಣೆಯಲ್ಲಿಯೇ ಹಠ!

ಮಗಳು ಕಾಣುತ್ತಿರುವ ಬಗ್ಗೆ ಹರ್ಷಿತಾ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಹರ್ಷಿತಾಳನ್ನು ಪತ್ತೆ ಹಚ್ಚಿ ಠಾಣೆಗೆ ಕರೆತಂದಿದ್ದರು. ಈ ವೇಳೆ ಪತಿ ಪ್ರಕಾಶ್ ಜೊತೆ ಹೋಗಲು ನಿರಾಕರಿಸಿದ ಹರ್ಷಿತಾ, ತನ್ನ ಪ್ರಿಯಕರ ಸಚಿನ್ ಜೊತೆಗೇ ಹೋಗುವುದಾಗಿ ಹಠ ಹಿಡಿದಿದ್ದರು. ಪರಿಸ್ಥಿತಿ ತಿಳಿಗೊಳಿಸಲು ಆಕೆಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದರು.

ಆಸ್ಪತ್ರೆಗೆ ಹೋಗುವ ನೆಪದಲ್ಲಿ ಮತ್ತೆ ಪರಾರಿ

ಸಾಂತ್ವನ ಕೇಂದ್ರದಲ್ಲಿದ್ದ ಹರ್ಷಿತಾ, ತನಗೆ ಆರೋಗ್ಯ ಸರಿಯಿಲ್ಲ ಎಂದು ನಾಟಕವಾಡಿ ಆಸ್ಪತ್ರೆಗೆ ಹೋಗುವ ನೆಪದಲ್ಲಿ ಹೊರಬಂದಿದ್ದಾರೆ. ಬಳಿಕ ಅಲ್ಲಿಂದಲೇ ತನ್ನ ಪ್ರಿಯಕರ ಸಚಿನ್ ಜೊತೆ ಕಾರಿನಲ್ಲಿ ತೆರಳಿ ವಿವಾಹವಾಗಿದ್ದಾರೆ. ಮಗ ಹಾಗೂ ಪತಿಯನ್ನು ತೊರೆದು ಪ್ರಿಯಕರನ ಜೊತೆ ಹೋದ ಹರ್ಷಿತಾಳ ಕೃತ್ಯಕ್ಕೆ ಹಾಗೂ ನಂತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊಪ್ಪಳದಲ್ಲೂ ಲವ್ ಜಿಹಾದ್: ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ; ಸಿಡಿದೆದ್ದ ಹಿಂದೂ ಯುವಕರು

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *