
ಹಾಸನ, ಏಪ್ರಿಲ್ 1: ಜಿಲ್ಲೆಯ ಸಕಲೇಶಪುರ ತಾಲೂಕಿನೂರು ಗ್ರಾಮದಲ್ಲಿ ಕಾಡಾನೆಗಳ ಚಲನವಲನವನ್ನು ಗಮನಿಸುತ್ತಿರುವ ಅರಣ್ಯ ಇಲಾಖೆಯ ಎಲಿಫೆಂಟ್ ಟಾಸ್ಕ್ ಫೋರ್ಸ್ (ಇಟಿಎಫ್) ಸಿಬ್ಬಂದಿ ಮೇಲೆ ಕಾಡಾನೆಯೊಂದು ಭೀಕರವಾಗಿ ದಾಳಿ ನಡೆಸಿದೆ. ಈ ವೇಳೆ ಸಿಬ್ಬಂದಿ ಕೂಡಲೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ. ಐಟಿಎಫ್ ಸಿಬ್ಬಂದಿಯಾದ ಪ್ರಸನ್ನ, ಯುವರಾಜ್ ಮತ್ತು ಧನಂಜಯ ಮತ್ತೂರು ಗ್ರಾಮದ ಬಳಿ ಕಾಡಾನೆಗಳ ಮೇಲೆ ನಿಗಾ ಇರಿಸಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಆನೆಯೊಂದು ಇವರತ್ತ ನುಗ್ಗಿ ಬಂದಿದೆ. ಆನೆ ದಾಳಿ ಮಾಡಿದ್ದರಿಂದ ಗಾಬರಿಗೊಂಡ ಸಿಬ್ಬಂದಿ ಬೈಕ್‌ಗಳನ್ನು ಸ್ಥಳದಲ್ಲೇ ಬಿಟ್ಟು ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ. ಸಿಬ್ಬಂದಿ ನಂತರ ಆನೆಯು ಅಲ್ಲಿದ್ದ ಬೈಕ್‌ಗಳನ್ನು ಸಂಪೂರ್ಣವಾಗಿ ಜಖಂಗೊಳಿಸಿದೆ.
ಈ ಘಟನೆಯಿಂದ ರೊಚ್ಚಿಗೆದ್ದ ಸ್ಥಳೀಯರು, ಕಾಡಾನೆಗಳನ್ನು ಓಡಿಸುವ ಅರಣ್ಯ ಇಲಾಖೆ ಸಿಬ್ಬಂದಿಗೆ ಸರಿಯಾದ ರಕ್ಷಣೆ ಇಲ್ಲ. ಇನ್ನು ಸಾಮಾನ್ಯ ಜನರ ಕಥೆ ಏನು? ಎಂದು ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ