ಹಾವೇರಿ, (ಜನವರಿ 16):ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೆಸರು ಮಾಡಿದ್ದ ಕೊಬ್ಬರಿ ಹೋರಿ (ಕೊಬ್ಬರಿ ಹೋರಿ) ಅನಾರೋಗ್ಯದಿಂದ ಸಾವನ್ನಪ್ಪಿದ ಘಟನೆ ಹಾವೇರಿ ತಾಲೂಕಿನ ಕರಜಗಿ ಗ್ರಾಮದಲ್ಲಿ ನಡೆದಿದೆ. ಜಗದೀಶ್ ನಾಗಪ್ಪ ಮಾಣೆಗರ ಎಂಬವರಿಗೆ ಸೇರಿದ್ದ ಕರ್ಜಗಿ ಓಮ್-112 ಹೆಸರಿನ ಹೋರಿ ಅನಾರೋಗ್ಯದಿಂದ ಸಾವನ್ನಪ್ಪಿದೆ. ಇನ್ನು ಈ ಹೋರಿ ರಾಜ್ಯ ಮಟ್ಟದ ಹೋರಿ ಸ್ಪರ್ಧೆಯಲ್ಲಿ ಭಾಗವಹಿಸಿ ಇದುವರೆಗೂ ಮೂರು ಬೈಕ್, ಬೆಳ್ಳಿ ಗದೆ, ಟ್ರಜೂರಿ ಸೇರಿದಂತೆ ಹಲವು ಬಹುಮಾನ ಗೆದ್ದಿದ್ದು, ಅಭಿಮಾನಿಗಳ ಪೈಲ್ವಾನ್ ಎಂದು ಹೆಸರು ಮಾಡಿದೆ. ಇಷ್ಟೆಲ್ಲಾ ಸಾಧನೆ ಮಾಡಿರುವ ಹೋರಿಯನ್ನು ಕಳೆದುಕೊಂಡು ಮಾಲೀಕ ಕಣ್ಣೀರಿಟ್ಟಿದ್ದಾನೆ. ಈ ಹೋರಿ ಅಂತಿಮ ದರ್ಶನಕ್ಕಾಗಿ ಸಾವಿರಾರು ಅಭಿಮಾನಿಗಳು ಆಗಮಿಸಿದ್ದು, ಅಂತಿಮವಾಗಿ ಪ್ರಮುಖ ಬೀದಿಯಲ್ಲಿ ಭವ್ಯ ಮೆರವಣಿಗೆ ನಡೆಸಿದ ಮಾಲೀಕನ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.