ಹಾವೇರಿ, ಡಿ.4: ರಾಜ್ಯದಲ್ಲಿ ಚಿರತೆ ಕಾಟ ಹೆಚ್ಚಾಗುತ್ತದೆ. ಹಲವು ಕಡೆ ಚಿರತೆ ದಾಳಿಯಿಂದ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಇದೀಗ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಕಡೂರು ಗ್ರಾಮದ ರೈತರನ್ನ ನಿದ್ರೆಗೆಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಕಡೂರು ಗ್ರಾಮದ ಗುಡ್ಡದ ಸಮೀಪದ ರೈತರ ಜಮೀನಿನಲ್ಲಿ ಈ ಚಿರತೆಯನ್ನು ಸೆರೆಹಿಡಿಯಲಾಗಿದೆ. ಕಳೆದ ಒಂದು ತಿಂಗಳಿನಿಂದ ಈ ಪ್ರದೇಶದಲ್ಲಿ ನಿರಂತರವಾಗು ಅಡ್ಡಾಡುತ್ತಿದ್ದ ಚಿರತೆ ಕಾರಣ ರೈತರು ಚಿರತೆ ಭಯದಿಂದ ಕೃಷಿ ಕೆಲಸಕ್ಕೆ ಹಿಂದೇಟು ಹಾಕುತ್ತಿದ್ದರು. ಇದೀಗ ಚಿರತೆಯನ್ನು ಪತ್ತೆ ಮಾಡಿ, ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ