Headlines

ಜೈಲುಪಾಲಾಗಿರುವ ಪುತ್ರ ಪ್ರಜ್ವಲ್ ಗಾಗಿ ತಂದೆ ರೇವಣ್ಣ ವಿಶೇಷ ಪೂಜೆ

ಜೈಲುಪಾಲಾಗಿರುವ ಪುತ್ರ ಪ್ರಜ್ವಲ್ ಗಾಗಿ ತಂದೆ ರೇವಣ್ಣ ವಿಶೇಷ ಪೂಜೆ


ಜೈಲುಪಾ ಪೂಜೆ ಸಲ್ಲಿಸಿದ ಪುತ್ರ ಪ್ರಜ್ವಲ್ ಗಾಗಿ ತಂದೆ ರೇವಣ್ಣ ವಿಶೇಷ

ಮಂಡ್ಯ, (ಮಾರ್ಚ್ 29): ಜಿಲ್ಲೆಯ ಪಾಂಡವಪುರದಲ್ಲಿರುವ ಶ್ರೀಕ್ಷೇತ್ರ ಮೇಲುಕೋಟೆಯಲ್ಲಿ ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಅದ್ದೂರಿಯಾಗಿ ನಡೆಯಿತು. ಈ ಭವ್ಯ ಉತ್ಸವವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ನೆರೆದಿದ್ದರು. ವೈರಮುಡಿ ಬ್ರಹ್ಮೋತ್ಸವದ ಪ್ರಮುಖ ಆಕರ್ಷಣೆ ಎಂದರೆ ಶ್ರೀದೇವಿ ಮತ್ತು ಭೂದೇವಿ ಸಮೇತ ಚಲುವನಾರಾಯಣಸ್ವಾಮಿಯು ರತ್ನಖಚಿತ ವೈರಮುಡಿ ಕಿರೀಟವನ್ನು ಧರಿಸಿ ಭಕ್ತರಿಗೆ ದರ್ಶನ ನೀಡುವುದು. ಈ ವೈರಮುಡಿ ಕಿರೀಟವನ್ನು ದೇವರಿಗೆ ಧಾರಣೆ ಮಾಡುವ ಆ ಕ್ಷಣವು ಅತಿ ಪವಿತ್ರವೆಂದು ನಡೆಯುತ್ತದೆ. ಈ ವಿಶಿಷ್ಟ ಸಂದರ್ಭವನ್ನು ಕಣ್ತುಂಬಿಕೊಳ್ಳಲು ದೇಶದ ನಾನಾ ಭಾಗಗಳಿಂದ ಭಕ್ತರು ಮೇಲುಕೋಟೆಗೆ ಆಗಮಿಸಿದ್ದರು. ಇನ್ನು ಅತ್ಯಾಚಾರ ಪ್ರಕಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರವಾಗಿ ತಂದೆ ಎಚ್‌ಡಿ ರೇವಣ್ಣ ವಿಶೇಷ ಪೂಜೆ ಸಲ್ಲಿಸಿದರು. ರೇವಣ್ಣ ಹಾಗೂ ಪುತ್ರ ಸೂರಜ್ ವೈರಮುಡಿ ಬ್ರಹ್ಮೋತ್ಸವದಲ್ಲಿ ಪ್ರಜ್ವಲ್ ಹೆಸರಿನಲ್ಲಿ ವಿಶೇಷ ಅರ್ಚನೆ ಮಾಡಿದರು. ಈ ಮೂಲಕ ಆದಷ್ಟು ಬೇಗ ಜೈಲಿನಿಂದ ಆಚೆ ಬರಲಿ ಎಂದು ಬೇಡಿಕೊಂಡರು.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *