
ಬೆಳ್ಳುಳ್ಳಿಯಲ್ಲಿ ವಿಟಮಿನ್ ಸಿ, ಕೆ, ಫೈಬರ್, ಕಬ್ಬಿಣ, ಕ್ಯಾಲ್ಸಿಯಂ, ಪೊಟ್ಯಾಸಿಯಂ, ಫಾಸ್ಫರಸ್, ಫೋಲೇಟ್, ಸೆಲೆನಿಯಮ್ ಮತ್ತು ತಾಮ್ರ ಸೇರಿದಂತೆ ಹಲವಾರು ಆ್ಯಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿವೆ.<img>ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ನೀರನ್ನು ಕುಡಿಯುವುದರಿಂದ ಆಗುವ ಆರೋಗ್ಯಕರ ಪ್ರಯೋಜನಗಳು ಯಾವುವು ಎಂಬುದನ್ನು ಇಲ್ಲಿ ನೋಡೋಣ.<img>ಬೆಳ್ಳುಳ್ಳಿಯಲ್ಲಿರುವ ‘ಅಲಿಸಿನ್’ ಎಂಬ ಅಂಶವು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ವೈರಸ್, ಬ್ಯಾಕ್ಟೀರಿಯಾ ಮತ್ತು ಫಂಗಸ್‌ನಂತಹ ಸೋಂಕುಗಳ ವಿರುದ್ಧ ಹೋರಾಡಲು ದೇಹಕ್ಕೆ ಶಕ್ತಿ ನೀಡುತ್ತದೆ.<img>ಬೆಳ್ಳುಳ್ಳಿಯು ರಕ್ತದೊತ್ತಡವನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಇದು ರಕ್ತನಾಳಗಳನ್ನು ಹಿಗ್ಗಿಸಿ, ರಕ್ತ ಸಂಚಾರವನ್ನು ಸುಧಾರಿಸುತ್ತದೆ. ಜೊತೆಗೆ, ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಿ, ಉತ್ತಮ ಕೊಲೆಸ್ಟ್ರಾಲ್ ಹೆಚ್ಚಿಸಲು ಬೆಳ್ಳುಳ್ಳಿ ಸಹಾಯ ಮಾಡುತ್ತದೆ.<img>ಬೆಳ್ಳುಳ್ಳಿ ನೀರು ಜೀರ್ಣಕ್ರಿಯೆಯನ್ನು ಸುಲಭಗೊಳಿಸಲು ಸಹಾಯ ಮಾಡುತ್ತದೆ. ಅಜೀರ್ಣ, ಗ್ಯಾಸ್ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳಿಗೆ ಇದು ಉತ್ತಮ ಪರಿಹಾರವಾಗಿದೆ.<img>ಬೆಳ್ಳುಳ್ಳಿಯಲ್ಲಿ ಕ್ಯಾಲ್ಸಿಯಂ ಹೇರಳವಾಗಿದೆ. ಆದ್ದರಿಂದ, ಬೆಳ್ಳುಳ್ಳಿ ನೀರನ್ನು ಕುಡಿಯುವುದು ಆಸ್ಟಿಯೊಪೊರೋಸಿಸ್ ಅಪಾಯವನ್ನು ಕಡಿಮೆ ಮಾಡಲು ಮತ್ತು ಮೂಳೆಗಳ ಆರೋಗ್ಯವನ್ನು ಕಾಪಾಡಲು ತುಂಬಾ ಒಳ್ಳೆಯದು.<img>ಶ್ವಾಸಕೋಶ ಸಂಬಂಧಿ ಸಮಸ್ಯೆಗಳಿಗೂ ಬೆಳ್ಳುಳ್ಳಿ ಪರಿಹಾರ ನೀಡುತ್ತದೆ. ಇದರಲ್ಲಿರುವ ಆ್ಯಂಟಿಬ್ಯಾಕ್ಟೀರಿಯಲ್ ಅಂಶಗಳು ಇದಕ್ಕೆ ಸಹಾಯ ಮಾಡುತ್ತವೆ.<img>ದೇಹದ ತೂಕವನ್ನು ನಿಯಂತ್ರಿಸಲು ಬೆಳ್ಳುಳ್ಳಿ ನೀರು ಸಹಾಯ ಮಾಡುತ್ತದೆ. ಇದು ದೇಹದ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಿ, ಕೊಬ್ಬನ್ನು ಕರಗಿಸುವ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ.<img>ಪ್ರತಿದಿನ ಬೆಳಿಗ್ಗೆ ಎರಡು ಎಸಳು ಬೆಳ್ಳುಳ್ಳಿಯನ್ನು ಜಜ್ಜಿ, ಒಂದು ಗ್ಲಾಸ್ ಉಗುರುಬೆಚ್ಚಗಿನ ನೀರಿನಲ್ಲಿ ಬೆರೆಸಿ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ.
Source link
Garlic Water: ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ನೀರು ಕುಡಿದರೆ ಏನಾಗುತ್ತೆ? ಈ ಸಮಸ್ಯೆಗಳಿರೋರು ಕುಡಿಯಿರಿ!!