
ಮುಪ್ಪು ದೂರವಿಡುತ್ತದೆ: ಪ್ರತಿದಿನ ವಿವಿಧ ಬಣ್ಣಬಣ್ಣದ ಹಣ್ಣುಗಳನ್ನು ತಿನ್ನುವುದರಿಂದ ದೇಹಕ್ಕೆ ಅಗತ್ಯವಾದ ಉತ್ಕರ್ಷಣ ನಿರೋಧಕಗಳು ದೊರೆಯುತ್ತವೆ. ಅವು ಫ್ರೀ ರಾಡಿಕಲ್ಗಳ ವಿರುದ್ಧ ಹೋರಾಡಲು ಮತ್ತು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ. ಇದು ನಿಮ್ಮನ್ನು ಯವ್ವನದಂತೆ ಕಾಣುವಂತೆ ಮಾಡುತ್ತದೆ. ಇದು ನಿಮ್ಮ ಚರ್ಮವನ್ನು ಹೈಡ್ರೇಟ್ ಆಗಿರಿಸುತ್ತದೆ. ಮುಖದ ಮೇಲೆ ಸುಕ್ಕುಗಳು ಬೀಳದಂತೆ ತಡೆಯುತ್ತದೆ. ಇದರಿಂದ ನೀವು ಯವ್ವನದಂತೆ ಕಾಣುತ್ತೀರಿ
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ಪ್ರತಿದಿನ ಒಂದು ಬಟ್ಟಲು ಹಣ್ಣುಗಳನ್ನು ಸೇವಿಸುವುದರಿಂದ ವಿವಿಧ ದೀರ್ಘಕಾಲದ ಕಾಯಿಲೆಗಳಿಂದ ರಕ್ಷಣೆ ದೊರೆಯುತ್ತದೆ. ಹಣ್ಣುಗಳಲ್ಲಿ ವಿಟಮಿನ್ಗಳು, ಖನಿಜಗಳು, ಉತ್ಕರ್ಷಣ ನಿರೋಧಕಗಳು ಮತ್ತು ಫೈಟೊನ್ಯೂಟ್ರಿಯೆಂಟ್ಗಳು ಹೇರಳವಾಗಿವೆ, ಇವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ.
ಪ್ರತಿದಿನ ಹಣ್ಣುಗಳನ್ನು ತಿನ್ನುವುದರಿಂದ ದೇಹಕ್ಕೆ ಅಗತ್ಯವಿರುವ ಎಲ್ಲಾ ಪೋಷಕಾಂಶಗಳು ದೊರೆಯುತ್ತವೆ. ಇದು ಹೃದ್ರೋಗ, ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ, ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಕೆಲವು ರೀತಿಯ ಕ್ಯಾನ್ಸರ್ಗಳನ್ನು ತಡೆಯುತ್ತದೆ ಎಂದು ಅಧ್ಯಯನ ಹೇಳುತ್ತದೆ.