ಆರೋಗ್ಯದಲ್ಲಿ ಏರುಪೇರು: ಬೆಂಗಳೂರಿನ ಆಸ್ಪತ್ರೆಯಲ್ಲಿ ಹೆಚ್‌ಡಿ ದೇವೇಗೌಡರಿಗೆ ಚಿಕಿತ್ಸೆ

ಆರೋಗ್ಯದಲ್ಲಿ ಏರುಪೇರು: ಬೆಂಗಳೂರಿನ ಆಸ್ಪತ್ರೆಯಲ್ಲಿ ಹೆಚ್‌ಡಿ ದೇವೇಗೌಡರಿಗೆ ಚಿಕಿತ್ಸೆ

ಆರೋಗ್ಯದಲ್ಲಿ ಏರುಪೇರು: ಬೆಂಗಳೂರಿನ ಆಸ್ಪತ್ರೆಯಲ್ಲಿ ಹೆಚ್‌ಡಿ ದೇವೇಗೌಡರಿಗೆ ಚಿಕಿತ್ಸೆ

HD Devegowda Admitted Hospital ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೇವೇಗೌಡರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.

ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ದೇವೇಗೌಡರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

92 ವರ್ಷದ ಹೆಚ್‌ಡಿ ದೇವೇಗೌಡರು, ರಾಜ್ಯಸಭೆ ಸಂಸದರಾಗಿದ್ದಾರೆ. ಈ ಬಾರಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಕಾರಣ ದೇವೇಗೌಡರ ಪುತ್ರ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಕೇಂದ್ರ ಸಚಿವರಾಗಿದ್ದಾರೆ.

ಹೆಚ್‌ಡಿ ದೇವೇಗೌಡರ ವಯಸ್ಸು 92 ಆಗಿದ್ರೂ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯರಾಗಿದ್ದಾರೆ. ರಾಜ್ಯಸಭಾ ಅಧಿವೇಶನದಲ್ಲಿಯೂ ದೇವೇಗೌಡರು ಭಾಗಿಯಾಗುತ್ತಾರೆ. ಲೋಕಸಭಾ ಚುನಾವಣೆ ಮತ್ತು ಚನ್ನಪಟ್ಟಣ ಉಪ ಚುನಾವಣೆ ಸಂದರ್ಭದಲ್ಲಿಯೂ ದೇವೇಗೌಡರು ಪ್ರಚಾರ ನಡೆಸಿದ್ದರು.

Source link

Leave a Reply

Your email address will not be published. Required fields are marked *