ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ

ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ


ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ

ಗದಗ, ಮಾರ್ಚ್ 25: ಗದಗ ಜಿಲ್ಲೆಯ ಹಲವೆಡೆ ಕಳೆದ ರಾತ್ರಿ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ. ವಿಶೇಷವಾಗಿ ಮುಂಡರಗಿ ತಾಲೂಕಿನ ದಿಂಡೂರ ತಾಂಡಾದಲ್ಲಿ ಭಾರೀ ಅವಾಂತರ ಉಂಟಾಗಿದೆ. ಭಾರಿ ಗಾಳಿ ಹಾಗೂ ಮಳೆಯ ಅಬ್ಬರಕ್ಕೆ ತಾಂಡಾದಲ್ಲಿ 4ಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿಗೆ ಹಾಕಿದ್ದ ತಗಡಿನ ಶೀಟ್‌ಗಳು ಹಾರಿಹೋಗಿವೆ. ಈ ವೇಳೆ ಹಾರಿದ ಶೀಟ್‌ಗಳು ತಗುಲಿ ಮೂವರು ಬಳಲುತ್ತಿದ್ದಾರೆ. ಗಾಯಾಳುಗಳನ್ನು ಶಿವಪ್ಪ ಲಮಾಣಿ, ಸೋಮವ್ವ ಲಮಾಣಿ ಮತ್ತು ದೇವಲಪ್ಪ ಲಮಾಣಿ ಎಂದು ಗುರುತಿಸಲಾಗಿದೆ. ಭಾರೀ ಮಳೆ ಹಾಗೂ ಗಾಳಿಯ ಪರಿಣಾಮವಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಗ್ರಾಮಸ್ಥರು ಕತ್ತಲಲ್ಲಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *