ಹಾವೇರಿ, ಡಿಸೆಂಬರ್ 04: ರಾಜ್ಯದಲ್ಲಿ ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬರ್ತಿರುವ ಹಿನ್ನೆಲೆ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಕಾಲೇಜಿಗೆ ಬಂದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರು ತಾಲೂಕಿನ ಸಿ.ಜಿ. ಬೆಲ್ಲದ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ. ನಿತ್ಯವೂ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರ್ತಿದ್ದ ಹಿನ್ನಲೆಗೆ ಪ್ರತೀಕಾರವಾಗಿ ನೂರಾರು ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿ ಬಂದಿದ್ದಾರೆ. ಕೇಸರಿ ಶಾಲು ಹಾಕಿಕೊಂಡು ಕ್ಲಾಸ್ ರೂಮ್ ನಲ್ಲಿ ವಿದ್ಯಾರ್ಥಿಗಳು ಕೂತಿದ್ದಾರೆ. ಹಲವು ದಿನಗಳಿಂದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತ್ತಿದ್ದರೂ ಈ ಕಾಲೇಜಿನ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿ ಬಂದಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.