ಬಾಲಿವುಡ್ ನಟ ರಣ್ವೀರ್ ಸಿಂಗ್ (ರಣವೀರ್ ಸಿಂಗ್) ಇತ್ತೀಚೆಗಷ್ಟೇ ಮುಕ್ತಾಯವಾದ ಗೋವಾ ಅಂತರಾಷ್ಟ್ರೀಯ ಸಿನಿಮಾೋತ್ಸವದಲ್ಲಿ ಕನ್ನಡದ ನಟ, ನಿರ್ದೇಶಕ ರಣ್ವೀರ್ ಸಿಂಗ್ ಅವರ ‘ಕಾಂತಾರ: ಅಧ್ಯಾಯ 1’ ಸಿನಿಮಾವನ್ನು ಕೊಂಡಾಡುತ್ತಾ, ತುಸು ಅತಿರೇಕದ ವರ್ತನೆ ತೋರಿದರು. ರಿಷಬ್ ಶೆಟ್ಟಿಯ ನಟನೆಯನ್ನು ಹೊಗಳುತ್ತಾ, ಅನುಚಿತ ರೀತಿಯಲ್ಲಿ ದೈವದ ಅನುಕರಣೆಯನ್ನು ಮಾಡಿದರು. ಅಷ್ಟು ಮಾತ್ರವೇ ಅಲ್ಲದೆ, ದೈವವನ್ನು ‘ಹೆಣ್ಣು ದೆವ್ವ’ ಎಂದು ಸಹ ಕರೆದರು. ರಣವೀರ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.
ರಣ್ವೀರ್ ಸಿಂಗ್ ಅವರು ದೈವಕ್ಕೆ ಅವಮಾನ ಮಾಡಿದ್ದಾರೆಂದು ಆರೋಪಿಸಿ, ರಣ್ವೀರ್ ವಿರುದ್ಧ ದೂರು ದಾಖಲಿಸಲಾಗಿದೆ. ಹಿಂದು ಜನಜಾಗೃತಿ ಸಮಿತಿ (ಎಚ್‌ಜೆಎಸ್) ರಣ್ವೀರ್ ಸಿಂಗ್ ವಿರುದ್ಧ ಗೋವಾದ ಪಣಜಿಯಲ್ಲಿ ದೂರು ದಾಖಲಿಸಿದ್ದು, ರಣವೀರ್ ವಿರುದ್ಧ ಕ್ರಮ ಜರುಗಿಸಲಾಗಿದೆ. ರಣ್ವೀರ್ ಸಿಂಗ್ ಅವರು ದೈವವನ್ನು ದೆವ್ವ ಎಂದು ಕರೆಯುವ ಮೂಲಕ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
‘ಚಾವುಂಡಿ’ ದೈವವು ಭಕ್ತರಿಗೆ ಪೂಜನೀಯವಾಗಿದ್ದು, ತುಳು ಸಮುದಾಯಕ್ಕೆ ಅತ್ಯಂತ ಮಹತ್ವದ ದೈವವಾಗಿದೆ. ಆದರೆ ದೈವವನ್ನು ಕೆಟ್ಟ ರೀತಿಯಲ್ಲಿ ರಣ್ವೀರ್ ಅನುಕರಣೆ ಮಾಡಿದ್ದಾರೆ. ರಣ್ವೀರ್ ಸಿಂಗ್ ಅವರ ಈ ರೀತಿಯ ನಡೆಯು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ, ಸಾರ್ವಜನಿಕ ಶಾಂತಿಯನ್ನು ಕಡಿದುಕೊಳ್ಳುವ ಕಾರ್ಯವಾಗಿದೆ. ಈ ಕುರಿತು ತನಿಖೆಯನ್ನು ಮಾಡಿ, ನಟನ ವಿಚಾರಣೆ ನಡೆಸಿ, ಕಾನೂನು ರೀತ್ಯ ಕ್ರಮ ಜರುಗಿಸಲು ಹಿಂದು ಜನಜಾಗೃತಿ ಸಮಿತಿ ಕೋರಿದೆ.
ಇದನ್ನೂ ಓದಿ:ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಜೊತೆ ಶ್ರೀಲೀಲಾ, ಆದರೆ ಸಿನಿಮಾಕ್ಕಾಗಿ ಅಲ್ಲ
ತಮ್ಮ ಮಾತು ಮತ್ತು ನಡೆ ತೀವ್ರ ಟೀಕೆಗೆ ಗುರಿಯಾದ ಬೆನ್ನಲ್ಲೇ ನಟ ರಣ್ವೀರ್ ಸಿಂಗ್ ಅವರು ಈ ಬಗ್ಗೆ ಕ್ಷಮಾಪಣೆ ಕೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ರಣವೀರ್ ಸಿಂಗ್, ‘ವೀರ್ ಅವರು ಈ ವಿಷಯವಾಗಿ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ. ಕ್ಷಮೆ ಕೇಳಿ ಅವರು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ‘ಚಿತ್ರದಲ್ಲಿ ರಿಷಬ್ ಅವರ ಅದ್ಭುತ ಅಭಿನಯವನ್ನು ಎತ್ತಿ ತೋರಿಸುವುದು ನನ್ನ ಮುಖ್ಯ ಉದ್ದೇಶವಾಗಿತ್ತು. ಆ ದೃಶ್ಯವನ್ನು ಮಾಡಲು ಎಷ್ಟು ಶ್ರಮ ಬೇಕು ಎಂಬುದು ನನಗೆ ತಿಳಿದಿದೆ. ಹೀಗಾಗಿ ಅವರ ಬಗ್ಗೆ ನನಗೆ ಮೆಚ್ಚುಗೆ ಇದೆ. ನಮ್ಮ ದೇಶದ ಪ್ರತಿಯೊಂದು ಸಂಸ್ಕೃತಿ, ಸಂಪ್ರದಾಯ ಮತ್ತು ನಂಬಿಕೆಯನ್ನು ನಾನು ಯಾವಾಗಲೂ ಆಳವಾಗಿ ಗೌರವಿಸುತ್ತೇನೆ. ನಾನು ಯಾರದ್ದಾದರೂ ಭಾವನೆಗಳಿಗೆ ನೋವುಂಟು ಮಾಡಿದ್ದೇನೆ, ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ’.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ