Headlines

ಜೈಲಿನಲ್ಲಿ ಕೈದಿಗಳ ಮೋಜು ಮಸ್ತಿ: ವೈರಲ್ ವೀಡಿಯೋ ಬಗ್ಗೆ ಅಧಿಕಾರಿಗಳಿಗೆ ಗೃಹ ಸಚಿವರ ಕ್ಲಾಸ್​

ಜೈಲಿನಲ್ಲಿ ಕೈದಿಗಳ ಮೋಜು ಮಸ್ತಿ: ವೈರಲ್ ವೀಡಿಯೋ ಬಗ್ಗೆ ಅಧಿಕಾರಿಗಳಿಗೆ ಗೃಹ ಸಚಿವರ ಕ್ಲಾಸ್​


ಬೆಂಗಳೂರು, ನವೆಂಬರ್ 10: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಐಷಾರಾಮಿ ಜೀವನ ಶೈಲಿ ಮತ್ತು ಮೋಜು-ಮಸ್ತಿಯ ವೀಡಿಯೋಗಳು ವೈರಲ್ ಆಗಿದ್ದು, ಅಧಿಕಾರಿಗಳ ನಡೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್ಹಿರಿಯ ಜೈಲು ಅಧಿಕಾರಿಗಳ ಸಭೆ ಕರೆದು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಸಭೆಯಲ್ಲಿ ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ಫೋಟೋ ಮತ್ತು ವೀಡಿಯೋಗಳನ್ನು ಪ್ರೊಜೆಕ್ಟರ್ ಮೂಲಕ ಪ್ರದರ್ಶಿಸಿದ ಸಚಿವರು, ಈ ಬಗ್ಗೆ ಅಧಿಕಾರಿಗಳಿಂದ ವಿವರಣೆ ಕೋರಿದ್ದಾರೆ. ಕಾರಾಗೃಹ ಎಡಿಜಿಪಿ ಬಿ.ದಯಾನಂದ ವಿದೇಶದಲ್ಲಿರುವ ಹಿನ್ನೆಲೆ ಅವರ ಅನುಪಸ್ಥಿತಿಯಲ್ಲಿ ಸಭೆ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *