ಹೊನ್ನಾವರದ ಬಳಿ ಪಲ್ಟಿಯಾಗಿ ಹೊತ್ತಿ ಉರಿದ ಕಾರು: ಗುರುತು ಸಿಗದಂತೆ ಸುಟ್ಟು ಕರಕಲಾದ ಇಬ್ಬರು!

ಹೊನ್ನಾವರದ ಬಳಿ ಪಲ್ಟಿಯಾಗಿ ಹೊತ್ತಿ ಉರಿದ ಕಾರು: ಗುರುತು ಸಿಗದಂತೆ ಸುಟ್ಟು ಕರಕಲಾದ ಇಬ್ಬರು!


ಕಾರವಾರ/ಚಾಮರಾಜನಗರ: ಪಲ್ಟಿಯಾಗಿ ಕಾರು ಹೊತ್ತಿ ಉರಿದ ಪರಿಣಾಮ ಇಬ್ಬರು ಸಜೀವ ದಹನಇರುವ ಘಟನೆ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್‌ನಲ್ಲಿ ನಡೆದಿದೆ. ಕಾರು ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿರುವ ಸಾಧ್ಯತೆ ಮೇಲ್ನೋಟಕ್ಕೆ ಕಂಡು ಬಂದಿದ್ದು, ಕಾರಿನ ನಂಬರ್ ಪ್ಲೇಟ್ ಕೂಡ ಬೆಂಕಿಯಲ್ಲಿ ಸುಟ್ಟುಹೋಗಿದೆ. ಹೀಗಾಗಿಕಾರು ಮತ್ತು ಕಾರಿನಲ್ಲಿ ಇದ್ದವರ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ತನಿಖೆಯಲ್ಲಿ ಮೃತರು ಸಿದ್ದಾಪುರ ಮೂಲದವರೆಂದು ಗೊತ್ತಾಗಿದ್ದು, ಘಟನೆಯ ಬಗ್ಗೆ ಪ್ರಾಥಮಿಕ ಮಾಹಿತಿ ರವಾನೆ ಮಾಡಲಾಗಿದೆ. ಘಟನಾ ಸ್ಥಳದಲ್ಲಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಹೊನ್ನಾವರ ಪೊಲೀಸ್ ಠಾಣಾ ಘಟನೆ ನಡೆದಿದೆ.

ಇದನ್ನೂ ಓದಿ: ಸಂಪ್ ನಲ್ಲಿ ತಾಯಿ-ಮಕ್ಕಳ ಶವ ಪತ್ತೆ; ನಿಗೂಢ ಸಾವಿಗೆ ಕಾರಣ ಏನು?

ಬಸ್ -ಲಾರಿ ಮುಖಾಮುಖಿ ಡಿಕ್ಕಿ

ಬಸ್ ಅಪಘಾತ (1)

ಬಸ್-ಲಾರಿ ಡಿಕ್ಕಿ

KSRTC ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಘಟನೆ ಚಾಮರಾಜನಗರ ತಾಲೂಕಿನ ಬೆಂಡರವಾಡಿ ಗ್ರಾಮದ ಬಳಿ ನಡೆದಿದೆ. ಅಪಘಾತದ ರಭಸಕ್ಕೆ ಅಶ್ವಮೇಧ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಎರಡು ವಾಹನಗಳ ಚಾಲಕರ ಸ್ಥಿತಿ ಗಂಭೀರವಾಗಿದೆ. ಬೆಂಡರವಾಡಿ ಗ್ರಾಮದ ಹತ್ತಿರದ ತಿರುವಿನಲ್ಲಿ ನಂಜನಗೂಡು ಕಡೆಯಿಂದ ಬರುತ್ತಿದ್ದ ಸಾರಿಗೆ ಬಸ್, ಚಾಮರಾಜನಗರ ಕಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಗಾಯಾಳನ್ನ ನಗರದ ಸಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ, ಅಪಘಾತದ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಕೆಲ ಕಾಲ ವಾಹನ ಸವಾರರು ಪರದಾಟಬೇಕಾಯ್ತು. ಬಳಿಕ ಸ್ಥಳಕ್ಕೆ ಆಗಮಿಸಿದ ಸುಗಮ ಸಂಚಾರಕ್ಕೆ ಮಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *