
ಮೇಷ ರಾಶಿ:
ಇಂದಿನ ಪ್ರಯಾಣದಲ್ಲಿ ಅಡೆತಡೆಗಳಿದ್ದರೂ ಅದನ್ನು ಲೆಕ್ಕಿಸದೆ ಮುನ್ನಡೆಯುವಿರಿ. ಹೊಂದಾಣಿಕೆ ಕಷ್ಟವಾದರೂ ಅನಿವಾರ್ಯವಾಗಬಹುದು. ಶರೀರದಲ್ಲಿ ಅಸಮತೋಲನವು ಇರಲಿದೆ. ಇಂದು ಉಪಾಯದಿಂದ ಕೆಲಸವನ್ನು ಮಾಡುವುದು ಉತ್ತಮ. ವಿವಾಹ ಸ್ನೇಹಿತರ ಸಮಾರಂಭದಲ್ಲಿ ಖುದ್ದಾಗಿ ಭಾಗವಹಿಸುವಿರಿ. ವ್ಯಾಪಾರವು ಮಧ್ಯಮಗತಿಯಲ್ಲಿ ಇರುವುದು. ನಿಮ್ಮದಾದ ನಿಯಮವನ್ನು ಬಿಡಲು ನೀವು ಸಿದ್ಧರಾಗುವುದಿಲ್ಲ. ಕೆಲವರ ಮನೋಗತವನ್ನು ಅರಿತುಕೊಳ್ಳುವಿರಿ. ಹಿರಿಯರ ಜೊತೆ ವರ್ತನೆಗಳು ಬಿಗುಮಾನದಿಂದ ಇರಲಿದೆ.
ವೃಷಭ ರಾಶಿ:
ದಾಂಪತ್ಯದಲ್ಲಿ ಮನಸ್ತಾಪವನ್ನು ಶಾಂತಗೊಳಿಸಿಕೊಳ್ಳುವುದು ಒಳ್ಳೆಯದು. ಜವಾಬ್ದಾರಿಯನ್ನು ಒಪ್ಪಿಕೊಳ್ಳುವುದಿಲ್ಲ. ಸಂಗಾತಿಯ ಕಾರಣದಿಂದ ನಿಮಗೆ ಬೇಸರವಾಗುವುದು. ಸಕಾಲಕ್ಕೆ ಭೋಜನವನ್ನು ಸ್ವೀಕರಿಸುವುದು ಸೂಕ್ತ. ಕೆಲವು ನಿಮ್ಮ ದಾರಿ ತಪ್ಪಿಸಬಹುದು. ಅತಿಯಾದ ನಿರೀಕ್ಷೆಯನ್ನು ಇಟ್ಟುಕೊಂಡು ಹತಾಶರಾಗುವಿರಿ. ಮನೆಯ ಕೆಲಸದಲ್ಲಿ ಅಧಿಕ ಸಮಯವನ್ನು ಕಳೆಯಿರಿ. ವ್ಯತ್ಯಾಸವನ್ನು ಸರಿದೂಗಿಸುವ ಕಲೆ ಬರಬಹುದು.
ಮಿಥುನ ರಾಶಿ:
ನಿಮ್ಮ ಸ್ವೇಚ್ಛಾಚಾರವು ಮನೆಯವರಿಗೆ ಇಷ್ಟವಾಗದು. ನ್ಯಾಯಕ್ಕೆ ಸಮ್ಮತವಾದ ಕಾರ್ಯವನ್ನು ಮಾಡಿ. ಹಿರಿಯರನ್ನು ನೋಡಿಕೊಳ್ಳುವ ಜವಾಬ್ದಾರಿ ಬರಬಹುದು. ಅನಿರೀಕ್ಷಿತ ಧನಾಗಮನದಿಂದ ಸಂತೋಷವು ಇಮ್ಮಡಿಯಾಗಬಹುದು. ವೈದ್ಯರಿಗೆ ಹೆಚ್ಚಿನ ಅವಕಾಶ ಸಿಗಬಹುದು. ಇನ್ನೊಬ್ಬರ ಗೌಪ್ಯತೆಯನ್ನು ಬಿಚ್ಚಿಡುವುದು ಸಂತೋಷದ ವಿಚಾರವಾಗುವುದು. ನಿಮ್ಮ ಬಗ್ಗೆ ನೀವೇ ಹೇಳಿಕೊಳ್ಳುವುದು ಜಂಭವೆನಿಸುವುದು. ನಿಮ್ಮ ಆಲೋಚನೆಗಳು ನಿಮಗೆ ಮಾತ್ರ ಸರಿ ಎನಿಸುವುದು.
ಕರ್ಕಾಟಕ ರಾಶಿ:
ಎಂದೋ ಪಡೆದ ಸಾಲದ ಮರುಪಾವತಿಯನ್ನು ಮಾಡಬೇಕಾಗಬಹುದು. ಶತ್ರುಬಾಧೆಯನ್ನು ನಿವಾರಿಸಿಕೊಳ್ಳಲು ಕಷ್ಟವಾದೀತು. ನಿಮ್ಮನ್ನು ನಿಂದಿಸುವವರಿಗೆ ಉತ್ತರವನ್ನು ಕೊಡುವ ಯೋಚನೆಯಲ್ಲಿಯೇ ಇರುವಿರಿ. ಧನಾಗಮನದ ನಿರೀಕ್ಷೆಯಲ್ಲಿ ಇರುವಿರಿ. ಕೊಡು ಕೊಳ್ಳುವುದರಲ್ಲಿ ಸಮಾನತೆ ಇರಲಿ. ವಿದೇಶೀ ವ್ಯಾಪಾರದಿಂದ ಆದಾಯವು ಹೆಚ್ಚಾಗಬಹುದು. ನಿಮ್ಮ ಜ್ಞಾನವನ್ನು ನೀವೇ ತೋರಿಸಿಕೊಳ್ಳಿ. ಕೆಲವು ಸಮಸ್ಯೆ ನೀವಾಗಿಯೇ ತಂದುಕೊಳ್ಳುವಿರಿ.
ಸಿಂಹ ರಾಶಿ:
ಯಾವುದೇ ಪೂರ್ವನಿರ್ಧಾರವಿಲ್ಲದೇ ವಿದೇಶ ಪ್ರಯಾಣ ಮಾಡುವಿರಿ. ಅಪಾತ್ರರಿಗೆ ನಿಮ್ಮ ವಸ್ತುವಿಗೆ ಗೊತ್ತಿಲ್ಲದೇ ಕೊಡುವಿರಿ. ಇಂತಹ ದಾನದಿಂದ ಪ್ರಯೋಜನವಾಗದು. ಅಮೇಧ್ಯವಾದ ಆಹಾರವನ್ನು ಸೇವಿಸುವ ಸಂದರ್ಭವು ಬರಬಹುದು. ರಕ್ಷಣೆಯ ಜವಾಬ್ದಾರಿ ಇದ್ದವರಿಗೆ ಒತ್ತಡವಿರುವುದು. ದೂರದ ಸ್ಥಳಕ್ಕೆ ಉದ್ಯೋಗಕ್ಕೆ ಹೋಗಲು ಮನೆಯಿಂದ ನಕಾರಾತ್ಮಕ ಸೂಚನೆ ಬರಬಹುದು. ಯಾರನ್ನೂ ಅವಲಂಬಿಸದೆ ನಡೆಯಬೇಕು ಎನ್ನುವ ಹಠವು ಬರುವುದು.
ಕನ್ಯಾ ರಾಶಿ:
ಸಹೋದ್ಯೋಗಿಗೆ ಸಹಾಯ ಮಾಡುವ ಸ್ಥಿತಿಯು ನಿಮಗೆ ಬರಬಹುದು. ಆಗಬೇಕಾದ ಕಾರ್ಯಗಳು ಒತ್ತಡ ಇಲ್ಲದೇ ಆಗುವುದು. ವಿಶ್ವಾಸದಿಂದ ಕೊಟ್ಟ ಸಾಲಕ್ಕೆ ಬೆಲೆ ಇರಲಿ. ಯಾರ ಬಲವಂತಕ್ಕೂ ಮಣಿಯುವುದಿಲ್ಲ. ನಿಮ್ಮ ಸ್ವಭಾವವು ಇತರರಿಗೆ ಅಸಹಜತೆಯಂತೆ ಕಾಣಿಸಬಹುದು. ಯಾರ ಮೇಲೂ ಹಿಡಿತ ಸಾಧಿಸುವ ಪ್ರಯತ್ನ ಬೇಡ. ಸಮಯ ಮಾತ್ರ ವ್ಯರ್ಥವಾಗುತ್ತದೆ.
ತುಲಾ ರಾಶಿ:
ನಿಮ್ಮ ವಿದ್ಯೆಗೆ ಯೋಗ್ಯವಾದ ಅವಕಾಶಗಳು ಅನಿರ್ಬಂಧಿತವಾಗಿ ಸಿಗಬಹುದು. ದಾಯದಿ ಕಲಹವು ನಿಮ್ಮನ್ನು ಹಿಮ್ಮೆಟ್ಟಿಸೀತು. ಮನಸ್ಸಿನ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಇಂದು ಕಷ್ಟವಾದೀತು. ಕೆಲವು ವ್ಯಕ್ತಿಗಳಿಂದ ನೀವು ದೂರವಿರಲು ಬಯಸುತ್ತೀರಿ. ವ್ಯಾಪಾರದಲ್ಲಿ ಜನರ ಆಕರ್ಷಣೆಯನ್ನು ಮಾಡುವ ಕಲೆ ಸಿದ್ಧಿಸಿದೆ. ಗತ್ತಿನಿಂದ ಮಾತನಾಡುವುದನ್ನು ನಿಲ್ಲಿಸಿ. ನಿಮ್ಮ ಅಸಮಾಧಾನವನ್ನು ಅಸ್ಥಾನದಲ್ಲಿ ಹೊರಹಾಕಿ ಮುಜುಗರಕ್ಕೆ ಒಳಗಾಗುವಿರಿ.
ವೃಶ್ಚಿಕ ರಾಶಿ:
ಗೃಹನಿರ್ಮಾಣದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ತೋರುವಿರಿ. ನಿಮ್ಮ ಉದ್ಯಮಕ್ಕೆ ಹೂಡಕೆ ಬರಬಹುದು. ನೆರೆಹೊರೆಯರ ಮಾತು ನಿಮಗೆ ಬೇಸರ ತರಿಸಿ, ಪ್ರತಿಯಾಗಿ ಏನನ್ನಾದರೂ ಹೇಳಲು ಹೋಗುವಿರಿ. ನಿಮ್ಮ ಉದ್ವೇಗದ ಮನಸ್ಸನ್ನು ಇತರರಿಗೆ ತೋರಿಸುತ್ತದೆ. ಮೇಲಧಿಕಾರಿಗಳು ನಿಮ್ಮ ಕಾರ್ಯಕ್ಕೆ ತೊಂದರೆ ಕೊಡಬಹುದು. ನಿಮಗೆ ಖುಷಿ ಕೊಡುವ ಸಂಗತಿಯ ಕಡೆಗೆ ಗಮನಹರಿಸಿ. ಕೆಲವರಿಂದ ಸಹಾಯವನ್ನು ನಿರೀಕ್ಷಿಸದೇ ಇದ್ದರೂ ಸಹಕಾರ ದೊರೆತಿದೆ.
ಧನು ರಾಶಿ:
ಮಕ್ಕಳ ಜೀವನದಲ್ಲಿ ಬದಲಾವಣೆಯನ್ನು ಗಮನಿಸಿ ನೀವು ಅದಕ್ಕೆ ಬೇಕಾದ ಮಾರ್ಗದರ್ಶನ ಮಾಡುತ್ತೀರಿ. ಉದ್ಧಟತನದ ಮಾತುಗಳಿಂದ ನಿಮ್ಮ ಸ್ವಭಾವವು ಸ್ಪಷ್ಟವಾಗುವುದು. ಪುಣ್ಯಸ್ಥಳಗಳನ್ನು ಕುಟುಂಬದೊಂದಿಗೆ ಹೋಗಿ ದರ್ಶನ ಮಾಡುವಿರಿ. ಅತಿಯಾದ ದೇಹದಂಡನೆಯಿಂದ ನಿಮಗೆ ಆಯಾಸ. ವಿದ್ಯಾಭ್ಯಾಸದ ಕಾರಣಕ್ಕೆ ಹಣವನ್ನು ಪಡೆದು ಅನ್ಯ ಕಾರ್ಯಕ್ಕೆ ಬಳಸಿಕೊಳ್ಳುವಿರಿ.
ಮಕರ ರಾಶಿ:
ನಿರೀಕ್ಷಿತ ಗೌರವವು ನಿಮಗೆ ಸಿಗಲಿದೆ. ಸಾಮಾಜಿಕ ಕ್ಷೇತ್ರದಲ್ಲಿ ಒತ್ತಡ. ಇಂದಿನ ಕೆಲವು ಮಾತುಗಳನ್ನು ನೀವು ನಿರ್ಲಕ್ಷಿಸಿರಿ. ಹೆಣ್ಣು ಮಕ್ಕಳಿಂದ ನಿಮಗೆ ಯಶಸ್ಸು ಪ್ರಾಪ್ತಿ. ಕಛೇರಿಯ ವ್ಯವಹಾರದಲ್ಲಿ ನಿಮಗೆ ಕೋಪ ಬರಬಹುದು. ಹೊಸ ಉದ್ಯೋಗದ ಅಭಿವೃದ್ಧಿಗೆ ದೇವರಲ್ಲಿ ಶರಣಾಗುವಿರಿ. ಪ್ರಯತ್ನಗಳು ಪ್ರಾರಂಭವಾಗಲಿದೆ. ಪಿತ್ರಾರ್ಜಿತ ಆಸ್ತಿಯು ತಾನಾಗಿಯೇ ಬರಬಹುದು. ವಿದ್ಯಾಭ್ಯಾಸದಲ್ಲಿ ಆಸಕ್ತಿ ಬರುವಂತೆ ಮಾಡುವ ಹೊಣೆಗಾರಿಕೆ ಇರಲಿದೆ.
ಕುಂಭ ರಾಶಿ:
ಹೊಸ ಉದ್ಯಮಕ್ಕೆ ಒಬ್ಬೊಬ್ಬರಾದರು ಒಂದೊಂದು ಅಭಿಪ್ರಾಯ. ಆಸ್ತಿಗೆ ಸಂಬಂಧಿಸಿದ ಪತ್ರ ವ್ಯವಹಾರವನ್ನು ಜೋಪಾನ ಮಾಡಿಕೊಳ್ಳಿ. ಬಂಧುಗಳ ಸಮಾಗಮವಾಗಿದ್ದರು, ಅಪರೂಪದ ಸಂತೋಷ. ದೇವಾಲಯಕ್ಕೆ ಹೋಗಿ ನೆಮ್ಮದಿಯನ್ನು ಪಡೆದುಕೊಳ್ಳಿ. ವಾಹನದಿಂದ ಬಿದ್ದು ಗಾಯವಾಗುವ ಸಾಧ್ಯತೆ ಇದೆ. ನಿಮಗೆ ಬೇಕಾದ ವಾತಾವರಣದಲ್ಲಿ ಇರುವುದು ಇಷ್ಟವಾಗುವುದು. ನಿಮ್ಮ ಕನಸನ್ನು ಸಕಾರ ಮಾಡಿಕೊಳ್ಳಲು ಪ್ರಗತಿಯಲ್ಲಿದೆ.
ಮೀನ ರಾಶಿ:
ಸಂತೋಷಕ್ಕೆ ಅಡ್ಡಿಯಾಗುವ ಕಾರ್ಯವನ್ನು ಮಾಡಿಕೊಂಡು ಪಶ್ಚಾತ್ತಾಪ ಪಡುವಿರಿ. ಅಜಾಗರೂಕತೆಯಿಂದ ನಿಮ್ಮ ವಸ್ತುವು ಇತರರ ಪಾಲಾಗಬಹುದು. ಕಳೆದ ವಿಚಾರವನ್ನು ಮತ್ತೆ ನೆನಪಿಸಿಕೊಳ್ಳುವಿರಿ. ಅನ್ಯ ಕಾರ್ಯದಿಂದ ನಿಮ್ಮ ಮುಖ್ಯ ಕಾರ್ಯದಲ್ಲಿ ವೇಗವು ಕಡಿಮೆ ಆಗಬಹುದು. ನೂತನ ವಾಹನವನ್ನು ಖರೀದಿಸುವ ಆಲೋಚನೆ ಇರುವುದು. ಸ್ನೇಹಿತರ ಸಂಪಾದನೆಯ ದಾರಿಯನ್ನು ಹಾಕಿಕೊಡುವಿರಿ.
ಇಂದಿನ ಪಂಚಾಂಗ:
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಕಾರ್ಯಕ್ರಮ : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಮೀನ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ : ಏಕಾದಶೀ, ನಿತ್ಯ ಸೂರ್ಯನಕ್ಷತ್ರ : ಉತ್ತರಾಷಾಢ, ಯೋಗ : ವಾರ್ಯಾನ್, – 4, ಕರಣ – 4 am, 4 ಬವ, 60 33 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 11:04 – 12:34, ಯಮಗಂಡ ಕಾಲ 15:34 – 17:03, ಗುಳಿಕ ಕಾಲ 08:04 – 09:34
-ಲೋಹಿತ ಹೆಬ್ಬಾರ್ – 8762924271 (What’s app ಮಾತ್ರ)