Headlines

Horoscope Today 13 January: ಇಂದು ಈ ರಾಶಿಯವರಿಗೆ ಆಸೆಗಳ ಅಪೂರ್ಣತೆಯಿಂದ ಬೇಸರ

Horoscope Today 13 January: ಇಂದು ಈ ರಾಶಿಯವರಿಗೆ ಆಸೆಗಳ ಅಪೂರ್ಣತೆಯಿಂದ ಬೇಸರ


ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಕಾಲೇಜಿನ ಪೌಷ ಮಾಸ ಕೃಷ್ಣ ಪಕ್ಷದ ದಶಮೀ ತಿಥಿ ಮಂಗಳವಾರ ಹೋಲಿಕೆ, ಹೊಸ ಸಂಪರ್ಕ, ಮನೋರಂಜನೆ, ಆದಾಯ ಸ್ಥಿರ, ಗೆಲವು, ತಾಳ್ಮೆ, ನಿಂದನೆಗೆ ಕೋಪ ಇವೆಲ್ಲವೂ ಇಂದಿನ ಭವಿಷ್ಯ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಕಾರ್ಯಕ್ರಮ : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಪೂರ್ವಾಷಾಢ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ದಶಮೀ, ನಿತ್ಯ ಸೂರ್ಯನಕ್ಷತ್ರ : ವಿಶಾಖ ಯೋಗ : ಶೂಲಿ, ಕರಣ : 0, ಸೂರ್ಯೋದಯ – 3, 6 ಸ್ತ 6 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 16-23 – 16:48, ಯಮಗಂಡ ಕಾಲ 09:43 – 11:08, ಗುಳಿಕ ಕಾಲ 12:33 – 13:58

ಮೇಷ ರಾಶಿ :

ಶತ್ರುಗಳು ಅನ್ಯ ಕಾರ್ಯದಲ್ಲಿ ತೊಡಗಿರುವ ಕಾರಣ ನಿಮಗೆ ತೊಂದರೆ ಇರದು. ಕಲಾವಿದರು ಅವಕಾಶದ ಕದ ತಟ್ಟುವಿರಿ. ಎದುರಿಸಬಹುದಾದ ತೊಂದರೆ ಧೈರ್ಯದಿಂದ ಮುನ್ನುಗ್ಗಿ. ಇಂದು ನಿಮಗೆ ಕೆಲಸ ಆಗಬೇಕಾಗಿದ್ದರೆ ಪ್ರಯಾಣವು ಅನಿವಾರ್ಯವಾಗುವುದು. ವಾಹನ ಸೌಕರ್ಯದಿಂದ ನಿಮಗೆ ಸಮಾಧಾನ. ಒಂದೇ ಸಾರಿ ಖರ್ಚಿನ ಎಲ್ಲ ಯೋಜನೆ ಇಟ್ಟುಕೊಳ್ಳಬೇಡಿ. ನಿಮ್ಮ ಮಾತು ಇತರರಿಗೆ ಸಿಟ್ಟು ಬರುವಂತೆ ಇರದು. ಮಕ್ಕಳ ವಿದ್ಯಾಭ್ಯಾಸದ ಖರ್ಚು ಸ್ವಲ್ಪ ಕಡಿಮೆ ಆಗಿದ್ದು ಸಂತಸದ ಸಮಾಚಾರ. ವಿವಾದಕ್ಕೆ ಹೋಗಿ ಮೂರ್ಖರಾಗುವುದು ಬೇಡ. ದೈವಾನುಕೂಲದಿಂದ ನಿಮಗೆ ಸಿಗಬೇಕಾದ ಸಂಪತ್ತು ಬರಲಿದೆ.

ವೃಷಭ ರಾಶಿ :

ಇಂದು ಅಧಿಕ ಆದಾಯವನ್ನು ಹುಡುಕುವಿರಿ. ಸಣ್ಣ ವಿಚಾರಕ್ಕೆ ಆದ ಅಪಮಾನವನ್ನು ಎಲ್ಲಿಯೂ ಹೇಳಲಾರಿರಿ. ಮನೆಯಲ್ಲಿ ನಡೆದು ಶುಭಕಾರ್ಯದ ತಯಾರಿಯಲ್ಲಿ ನೀವು ಇರುವಿರಿ. ಆಸ್ತಿ ವಿಚಾರದಲ್ಲಿ ನಿಮ್ಮ ನಿಲುವಿಗೆ ಅಪಜಯವಾಗಬಹುದು. ಇಂದು ನೀವು ಸಂಗಾತಿಯ ಮಾತನ್ನೇ ಹೆಚ್ಚು ಕೇಳಲಾರಿರಿ. ಎಲ್ಲೊ ಸಿಕ್ಕ ಬಂಧುಗಳ ಒಡನಾಟವು ಹಿತವೆನಿಸುವುದು. ಸ್ನೇಹಿತರಿಗೋಸ್ಕರ ನೀವು ಹಣವನ್ನು ಖರ್ಚು ಮಾಡಬೇಕಾದೀತು. ನಿಮ್ಮ ವಸ್ತುಗಳನ್ನು ದುರುಪಯೋಗ ಮಾಡಿಕೊಳ್ಳುವಿರಿ. ನೀವು ಇತರರಿಗೆ ನಿಮ್ಮನ್ನು ಹೋಲಿಸಿಕೊಂಡು ನಿಮ್ಮೊಳಗೇ ಸಂಕಟಪಡುವಿರಿ. ನಿಮ್ಮ ಸಹನೆಯನ್ನು ಬಿಡದೇ ಅದನ್ನೇ ಅಸ್ತ್ರವನ್ನಾಗಿ ಮಾಡಿಕೊಳ್ಳಿ. ಧಾರ್ಮಿಕ ಕಾರ್ಯದಲ್ಲಿ ನಂಬಿಕೆ ಹೆಚ್ಚಾಗುವುದು.

ಮಿಥುನ ರಾಶಿ :

ಖಾಸಗಿ ಸಂಸ್ಥೆಯ ಹುದ್ದೆಯನ್ನು ನೀವು ಪಡೆದಿದ್ದೀರಿ. ಧಾರ್ಮಿಕಚಿಂತನೆಗಳು ನಿಮ್ಮ ಮನಸ್ಸಿನಲ್ಲಿ ಚಲಿಸಬಹುದು. ನೀವು ಇಂದು ಹಳೆಯ ಸ್ನೇಹಿತನ ಜೊತೆ ಸೇರಿ ಹೊಸ ಉದ್ಯೋಗವನ್ನು ಆರಂಭಿಸುವ ಯೋಚನೆ ಮಾಡುತ್ತೀರಿ. ಆದಾಯವು ಕುಗ್ಗಬಹುದು. ತಂದೆ ಮತ್ತು ತಾಯಿಯರ ಜೊತೆ ಬಹಳ ದಿನಗಳ ಅನಂತರ ಹರಟೆ ಹೊಡೆಯುವಿರಿ. ತೀರ್ಥಕ್ಷೇತ್ರಗಳ ದರ್ಶನವನ್ನು ಮಕ್ಕಳ ಜೊತೆ ಮಾಡುವಿರಿ. ಚಂಚಲವಾದ ಮನಸ್ಸನ್ನು ಏಕಾಗ್ರವಾಗಿ ಇಡಲು ಪ್ರಯತ್ನಿಸುವಿರಿ. ತಿಳಿದವರ ಜೊತೆ ಸಂದೇಹವನ್ನು ಪರಿಹರಿಸಿಕೊಳ್ಳಿ. ಎಲ್ಲರಿಂದ ಗೌರವವನ್ನು ಪಡೆಯುವ ಬಯಕೆ ಇರಲಿದೆ. ನಿಮಗೆ ಕೊಟ್ಟ ಜವಾಬ್ದಾರಿಗಳನ್ನು ನೀವು ಇತರರಿಗೆ ಹಂಚಿ ನಿರಾಳರಾಗುವಿರಿ.

ಕರ್ಕಾಟಕ ರಾಶಿ :

ಸಾಕೆನಿಸುವಷ್ಟು ಯಾವ ಆಹಾರವನ್ನೂ ಸೇವಿಸುವುದು ಬೇಡ. ಮಕ್ಕಳ ಶ್ರಮದಿಂದ ಪಾಲಕರಿಗೆ ನೆಮ್ಮದಿ ಇರಲಿದೆ. ಸಾಕಷ್ಟು ಬೆಂಬಲ ಕೊರತೆ ಇರುವುದು. ಹಿರಿಯರ ಆರೋಗ್ಯದಲ್ಲಿ ವ್ಯತ್ಯಯ ಮತ್ತು ತುರ್ತು ಚಿಕಿತ್ಸೆಯ ಅವಶ್ಯಕತೆ ಇರುತ್ತದೆ. ಹಲವು ದಿನಗಳು ನಿಮ್ಮ ಋಣವು ಮುಕ್ತಾಯವಾಗಿದ್ದು ಸಂತಸದ ವಿಚಾರವಾಗಿದೆ. ಸಣ್ಣ ವ್ಯಾಪಾರದಲ್ಲಿ ಲಾಭವನ್ನು ಕಾಣುವಿರಿ. ಉನ್ನತ ಹುದ್ದೆಗೆ ಆಯ್ಕೆಯಾದವರ ಪಟ್ಟಿಯಲ್ಲಿ ನಿಮ್ಮ ಹೆಸರೂ ಇರಲಿದೆ. ಮಕ್ಕಳ ಭವಿಷ್ಯಕ್ಕೆ ಹಣ ಉಳಿತಾಯ ಮಾಡವಿರಿ. ಇಂದಿನ ಸಮಯವನ್ನು ಮಿತಿಯನ್ನು ಅರಿತು ಕಾರ್ಯವನ್ನು ಮಾಡುವಿರಿ. ನಂಬಿಕೆಯನ್ನು ಪ್ರಯತ್ನಪೂರ್ವಕವಾಗಿ ಇರಿಸಿಕೊಳ್ಳುಬಿರಿ.

ಸಿಂಹ ರಾಶಿ :

ಮಾತಿನಿಂದ ಜೊತೆಗಾರರೇ ನಿಮ್ಮನ್ನು ದ್ವೇಷಿಸುತ್ತಾರೆ. ಸಾಧಿಸುವ ವಿಧಾನವನ್ನು ಹೇಳಿಕೊಳ್ಳುವುದು ಬೇಡ. ವಾಹನ ಚಾಲನೆಗೆ ಅತ್ಯುತ್ಸಾಹವಿದ್ದರೂ ಎಚ್ಚರಿಕೆಯನ್ನು ಹೆಚ್ಚು ಇಟ್ಟುಕೊಳ್ಳುವುದು ಮುಖ್ಯ. ಖಾಸಗಿ ಉದ್ಯೋಗ ಸಾಕೆನಿಸಿ, ಮನೆಯಲ್ಲಿ ಇರುವ ಯೋಚನೆ ಬರುವುದು. ಬಹಳ ಪ್ರಯತ್ನದ ಫಲವಾಗಿ ಅವಿವಾಹಿತರಿಗೆ ಯೋಗ್ಯವಾದ ಸಂಬಂಧವು ಬರಲಿದೆ. ಅತಿಯಾದ ಉದ್ಯೋಗದ ಬದಲಾವಣೆಯನ್ನು ಮಾಡುವುದು ಬೇಡ. ಮಾತ್ಸರ್ಯದಿಂದ ಸುಖವನ್ನು ನಾಶಮಾಡಿಕೊಳ್ಳುವಿರಿ. ಸಂಗಾತಿಯ ಜೊತೆ ಕೆಲವು ಸಮಯವನ್ನು ಕಳೆಯುವ ಮನಸ್ಸಾಗುವುದು. ದೂರಪ್ರಯಾಣವನ್ನು ಇಂದು ರದ್ದು ಮಾಡಿರಿ.

ಕನ್ಯಾ ರಾಶಿ :

ನಿಮ್ಮ ತಪ್ಪಿಗೆ ಯಾರನ್ನೋ ದೂರಿ ಕಲಹವಾಗುವುದು. ಬಾಲಿಶವಾಗಿ ವರ್ತಿಸುವುದರಿಂದ ನಿಮ್ಮ ಬಗ್ಗೆ ತಪ್ಪು ಕಲ್ಪನೆ ಬರಬಹುದು. ಅಗತ್ಯ ವಸ್ತುಗಳನ್ನು ನೀವು ಕಳೆದುಕೊಳ್ಳುತ್ತೀರಿ. ಸಾಲ ಪಡೆದವರ ಹುಡುಕಾಟವನ್ನು ಕಷ್ಟ. ಶ್ರಮವಹಿಸಿದಷ್ಟು ಫಲವು ಸಿಗಲಿಲ್ಲ ಎಂಬ ಬೇಸರವಿದ್ದರೂ ತಕ್ಕಮಟ್ಟಿನ ಖುಷಿಯೂ ಇರಲಿದೆ. ಇಂದು ದೈವಾನುಕೂಲವನ್ನು ನಿರೀಕ್ಷಿಸದೆ ಪುರುಷ ಪ್ರಯತ್ನವು ಹೆಚ್ಚಾಗಬೇಕು. ಹೇಳಬೇಕಾದದ್ದನ್ನು ಹೇಳದೇ ’ಮನಸ್ಸಿನಲ್ಲಿಯೇ ಮಂಡಿಗೆ ತಿನ್ನುವಿರಿ. ಪ್ರೇಮಿಯನ್ನು ನೀವು ಬಹಳ ಜೋಪಾನವಾಗಿ ನೋಡಿಕೊಳ್ಳಬೇಕು. ಆಪ್ತರಿಂದ ಸಣ್ಣ ನಿರ್ಲಕ್ಷ್ಯವನ್ನೂ ಸಹಿಸಲಾರಿರಿ. ಸ್ನೇಹಿತರು ನೆಚ್ಚುವ ಕಾರ್ಯವನ್ನು ಮಾಡುತ್ತಾರೆ.

ತುಲಾ ರಾಶಿ :

ಜವಾಬ್ದಾರಿಯ ಮಾತುಗಳಿಂದ ಅಚ್ಚರಿಯಾದೀತು. ಕೃಷಿಗೆ ಸಂಬಂಧಿಸಿದ ನೂತನ ಅನ್ವೇಷಣೆಯನ್ನು ಮಾಡುವ ಹೊಸ ಆಲೋಚನೆಯನ್ನು ಮಾಡುವಿರಿ. ಸಾಮಾಜಿಕ ಕಾರ್ಯದಿಂದ ಪ್ರೇರಣೆ ಪಡೆದು ಸಂಸ್ಥೆಯನ್ನು ಆರಂಭಿಸುವಿರಿ. ಹೇಳಿಕೊಟ್ಟ ಮಾತು ಎಲ್ಲಿಯವರೆಗೆ ಇದ್ದೀತು. ನಿಮ್ಮ ದುರಾಲೋಚನೆಗೆ ಸ್ನೇಹಿತರು ಅಡ್ಡಿ ಮಾಡುತ್ತಾರೆ. ಶತ್ರುವಿನ ಬಲವನ್ನು ನಿಯಂತ್ರಿಸಲು ಸಿದ್ಧತೆ ನಡೆಸುವಿರಿ. ನಿಮ್ಮಕ್ಕೆ ಸಂಬಂಧಿಸಿದ ಬಂಧುಗಳಿಂದ ಸಾಂತ್ವನವು ಸಿಗುವುದು. ಸಿಕ್ಕಿದ್ದರಲ್ಲಿ ಸುಖ ಪಡುವುದನ್ನು ಬೆಳೆಸಿಕೊಳ್ಳಿ. ಮಕ್ಕಳನ್ನು ಸ್ವತಂತ್ರವಾಗಿ ಬಿಡುವುದು ಬೇಡ. ಸಣ್ಣ ವಿರಸವೂ ದೂರವಾಗಲು. ದುಃಸ್ವಪ್ನವು ನಿಮ್ಮನ್ನು ಕಾಡಬಹುದು.

ವೃಶ್ಚಿಕ ರಾಶಿ :

ಯಾವುದೋ ಆಲೋಚನೆಯಲ್ಲಿ ಮುಖ್ಯ ಕೆಲಸವನ್ನು ಮರೆಯಬಹುದು. ನಿಮ್ಮ ಉತ್ಪಾದನೆಯಿಂದ ಆದಾಯಕ್ಕಿಂತ ನೆಮ್ಮದಿಯನ್ನು ಹೆಚ್ಚು ಕೊಡುವುದು. ಪ್ರಭಾವಿ ಜನರ ಸಂಸರ್ಗದಿಂದ ಹೊಸ ಆಯಾಮವು ತೆರೆದುಕೊಳ್ಳುವುದು. ಯಾವ ಮಾರ್ಗದಿಂದ ಹಣ ಬಂದರೂ ಸ್ವೀಕರಿಸುವಿರಿ. ನಿಮ್ಮ ಉದ್ದೇಶಪೂರ್ವಕ ಆಡಿದ ಮಾತಾದರೆ ಸಮಸ್ಯೆಗಳನ್ನು ಎದುರಿಸಬೇಕಾದೀತು. ರಕ್ಷಣಾ ವ್ಯವಸ್ಥೆಯಲ್ಲಿ ಇರುವವರಿಗೆ ಕಾರ್ಯದ ಒತ್ತಡ ಹೆಚ್ಚಿರುವುದು. ಕಾರ್ಯವನ್ನೇ ಸರಿಯಾಗಿ ಮಾಡಿ ಆದಾಯವು ಹೆಚ್ಚಾಗುವಂತೆ ಮಾಡಿಕೊಳ್ಳಿ. ಇಂದು ಕೋಪವು ಬಂದರೂ ವ್ಯಕ್ತಪಡಿಸದೆ ಸುಮ್ಮನಿದ್ದು ನುಂಗಿಕೊಳ್ಳುವಿರಿ.

ಧನು ರಾಶಿ :

ಅನಿರೀಕ್ಷಿತವಾಗಿ ಕುಟುಂಬದ ಜವಾಬ್ದಾರಿಯು ನಿಮ್ಮ ಮೇಲೆ ಬರಬಹುದು. ಇಂದು ನಿಮ್ಮ ಮಾತಿನ ಮಾರ್ಗಗಳು ಎಲ್ಲವೂ ಮುಚ್ಚಿದಂತೆ ಅನ್ನಿಸಬಹುದು. ವೇಗದ ನಡಿಗೆಯಿಂದ ಬೀಳುವಿರಿ. ನಿಮಗೆ ಆರ್ಥಿಕ ನೆರವನ್ನು ನೀಡಿದವರಿಗೆ ಕೃತಜ್ಞತೆಯನ್ನು ಸಲ್ಲಿಸಿ. ಸ್ತ್ರೀಯರಿಂದ ನಿಮಗೆ ಬೈಗುಳವು ಬರಲಿದೆ. ವಿವಾಹಿತರು ವಿವಾಹದ ಬಗ್ಗೆ ಮಾಡಿ ಪ್ರಯೋಜನವಾಗದು, ಕಾರ್ಯದಲ್ಲು ಪ್ರವೃತ್ತರಾಗಿ.’ ಉದ್ಯೋಗದಲ್ಲಿ ಪ್ರಾಮಾಣಿಕರಾಗಿದ್ದರೂ ಅಪವಾದವು ಬರಬಹುದು. ಸಾಮಾಜಿಕ ಕಾರ್ಯಕ್ಕೆ ಜನಬೆಂಬಲವು ಸಿಗಬಹುದು. ಸಂಗಾತಿಯಿಂದ ಸಿಗಬೇಕಾದ ಪ್ರೀತಿಯು ಕಡಿಮೆ ಆಗಲಿದೆ. ಇಂದಿನ ಸಮಯವನ್ನು ಮಿತಿಯನ್ನು ಅರಿತು ಕಾರ್ಯವನ್ನು ಮಾಡುವಿರಿ.

ಮಕರ ರಾಶಿ :

ಸರ್ಕಾರಿ ಉದ್ಯೋಗದ ಕಡೆ ನಿಮ್ಮ ಮನಸ್ಸು ಹೊರಳುವುದು. ನಿಶ್ಚಿತ ಕಾರ್ಯವು ನಿಮ್ಮಿಂದ ಆಗದೇ ಹೋಗಬಹುದು. ಪ್ರಯಾಣದ ಅನಿವಾರ್ಯತೆ ಇದ್ದರೆ ಸ್ವಂತ ವಾಹನದಲ್ಲಿ ಪ್ರಯಾಣ ಮಾಡಿ. ವಿದ್ಯಾಭ್ಯಾಸದ ಗೊಂದಲವನ್ನು ನೀವು ಸರಿಮಾಡಿಕೊಳ್ಳುವುದು ಕಷ್ಟವಾದೀತು. ಶತ್ರುಗಳನ್ನು ಹಿಮ್ಮೆಟ್ಟಿಸುವ ಕಾರ್ಯವು ನಿಮ್ಮ ಕಡೆಯಿಂದ ಆಗುವುದು. ಮತ್ತೆ ನಿಮಗೆ ಆಗದ ವಿಚಾರಗಳೇ ಕಿವಿಗೆ ಬೀಳಬಹುದು. ಒತ್ತಡಗಳು ನಿಮ್ಮ ಕೆಲಸದ ಬದಲಾವಣೆಯಾಗುವುದು. ಇಂದು ಹೊಂದಾಣಿಕೆಯ ಸ್ವಭಾವವನ್ನು ಬಿಡಬಹುದು. ಎಲ್ಲರಿಂದ ಗೌರವವನ್ನು ಪಡೆಯುವ ಬಯಕೆ ಇರಲಿದೆ. ಸಹೋದ್ಯೋಗಿಗಳ ಅನಾದರವನ್ನು ನೀವು ಲೆಕ್ಕಿಸದೇ ನಿಮ್ಮ ಕಾರ್ಯದಲ್ಲಿ ಮಗ್ನರಾಗುವಿರಿ.

ಇದನ್ನೂ ಓದಿ:ಶುಕ್ರ ಹಾಗೂ ರವಿಯ ಅಪರೂಪದ ಸಂಯೋಗ, ಗುರುದೃಷ್ಟಿಯ ಯೋಗ

ಕುಂಭ ರಾಶಿ :

ಆರ್ಥಿಕತೆಯು ದುರ್ಬಲವಾಗುತ್ತಿದ್ದರೆ ದೊಡ್ಡ ಚಿಂತೆಯಾಗಬಹುದು. ಏಕಕಾಲಕ್ಕೆ ಹತ್ತಾರು ಚಿಂತನೆಯನ್ನು ಮನಸ್ಸು ಮಾಡಲಿದೆ. ಯಾರ ಬೆಂಬಲವನ್ನು ಬಯಸದೇ ಸ್ವತಂತ್ರವಾಗಿ ಕೆಲಸ ಮಾಡಿ. ಮನೆಯಲ್ಲಿ ನಿಮಗೆ ಪೂರಕವಾದ ವಾತಾವರಣವಿದ್ದರೂ ಸಂತೋಷವು ಇರದು. ಇಂದು ನಿಮ್ಮ ಬಗ್ಗೆಯೇ ನಿಮಗೆ ಅಸಮಾಧಾನವಿದೆ. ಬರಬೇಕಿದ್ದ ಹಣವು ಬಹಳ ದಿನವಾದರೂ ಬಾರದೇ ಇದ್ದುದು ಚಿಂತೆಯಾಗುವುದು. ಇಂದು ಎಲ್ಲರಿಂದ ದೂರವಿರುವುದು ನಿಮಗೆ ಇಷ್ಟವಾಗುವುದು. ಹೊಸ ಸ್ಥಳವು ನೀವು ಒಗ್ಗಿಕೊಳ್ಳುವುದು ಕಷ್ಟವಾದೀತು. ದೇವರಲ್ಲಿ ನಂಬಿಕೆ ಕಡಿಮೆಯಾಗುವುದು. ನೀವು ಇತರರಿಗೆ ನಿಮ್ಮನ್ನು ಹೋಲಿಸಿಕೊಂಡು ನಿಮ್ಮೊಳಗೇ ಸಂಕಟಪಡುವಿರಿ.

ಮೀನ ರಾಶಿ :

ನಂಬಿಕೆಯನ್ನು ಗಳಿಸುವುದು ನಿಮಗೆ ಸವಾಲಾಗಬಹುದು. ನಿರೀಕ್ಷಿತ ಉಡುಗೊರೆಯಿಂದ ಸಂತೋಷ ಸಮಾರಂಭ. ಕಾರ್ಯದಲ್ಲಿ ಉಂಟಾದ ತೊಂದರೆಯನ್ನು ನೀವು ಲೆಕ್ಕಿಸದೆ ಮುನ್ನಡೆಯುವಿರಿ. ಆಭರಣ ಪ್ರಿಯರಿಗೆ ಸಂತೋಷವಾಗುವುದು. ಹಳೆಯ ವ್ಯವಹಾರವು ಮುನ್ನೆಲೆಗೆ ಬಂದು ಕಲಹದಲ್ಲಿ ಅಂತ್ಯವಾಗಬಹುದು. ನಿಮ್ಮ ಅಶಿಸ್ತಿನ ಕಾರ್ಯಕ್ಕೆ ಅಪಹಾಸ್ಯ ಮಾಡಬಹುದು. ಮಾತಿನಲ್ಲಿ ಮಿತಿ ಇರಲಿದೆ ಎಲ್ಲರಿಗೂ ಅಚ್ಚರಿಯಾದೀತು. ಆಲಸ್ಯದಿಂದ ದೂರವಿದ್ದರೂ ಸೋಮಾರಿ ಬಿರುದು ಬರಬಹುದು. ವಿವಾದಕ್ಕೆ ಹೋಗಿ ಮೂರ್ಖರಾಗುವುದು ಬೇಡ. ಆಲಸ್ಯವನ್ನು ಬಿಡುವುದು ಅನಿವಾರ್ಯವಾದೀತು.

-ಲೋಹಿತ ಹೆಬ್ಬಾರ್ – 8762924271 (What’s app ಮಾತ್ರ)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *