ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಪುರಸಭಾ : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಮಕರ, ಮಹಾನಕ್ಷತ್ರ : ಪೂರ್ವಾಷಾಢ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ: ಚತುರ್ದ ಸೂರ್ಯ, ನಿತ್ಯನಕ್ಷತ್ರ : ಪೂರ್ವಾಷಾ ಯೋಗ : ವ್ಯಾಘಾತ, 6 ಕರಣ : ಶಕ – 0 – 5 ಕರಣ 06 – 15 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09-44 – 11:09, ಯಮಗಂಡ ಕಾಲ 13:59 – 15:25, ಗುಳಿಕ ಕಾಲ 06:54 – 08:18.
ಮೇಷ ರಾಶಿ: ನಿಮ್ಮ ಸಂಗಾತಿಯ ಜೊತೆ ತುಂಬಾ ಆಪ್ತವಾಗಿ ವ್ಯವಹರಿಸುವಿರಿ. ನಿಮ್ಮ ವೈವಾಹಿಕ ಜೀವನದ ಕೆಲವು ಹಳೆಯ ನೆನಪುಗಳು ಖುಷಿ ಕೊಡುವುದು. ನೀವು ನೀಡುವ ಅಗೌರವವು ಪಶ್ಚಾತ್ತಾಪಕ್ಕೆ ಕಾರಣವಾಗಿದೆ. ನಿಮ್ಮ ವಸ್ತುವನ್ನು ಇತರರಿಗೆ ಕೊಡಲು ಇಚ್ಛಿಸುವಿರಿ. ಮಕ್ಕಳ ಮೇಲೆ ಒಂದು ಕಣ್ಣಿರಲಿ. ನಿಮ್ಮನ್ನು ಅನಾರೋಗ್ಯಕ್ಕೆ ಒಳಪಡಿಸುವವರ ಬಗ್ಗೆ ನಿಮಗೆ ಪ್ರೀತಿ ಹೆಚ್ಚು ಆಗುವುದು. ಕಛೇರಿಯಲ್ಲಿ ಉಂಟಾದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ನೀವು ಯತ್ನಿಸುವಿರಿ. ನಿಮಗೆ ಅಗತ್ಯವಿರುವಷ್ಟು ಸಾಧನ, ಇತರ ವಸ್ತುವನ್ನು ಹಿಂದಿರುಗಿಸುವಿರಿ.
ವೃಷಭ ರಾಶಿ: ನಿಮ್ಮ ಉದ್ಯೋಗದ ಕನಸು ನನಸಾಗುವ ಹಂತಕ್ಕೆ ತಲುಪಬಹುದು. ಅಶಿಸ್ತಿನ ವ್ಯವಸ್ಥೆಯಿಂದ ನೀವು ಇಂದು ಸಿಟ್ಟಾಗುವಿರಿ. ಸುಪ್ತವಾಗಿತ್ತು ವಿದೇಶದ ಕನಸು ಅಂಕುರಿಸಬಹುದು. ಕೆಲಸದಲ್ಲಿ ನೈಪುಣ್ಯತೆಯನ್ನು ಬೆಳೆಸಿಕೊಂಡಿರಿ. ನಿಮಗೆ ಕೆಲವು ಪರೋಕ್ಷ ಮಾತುಗಳು ಅಭಿಮಾನಕ್ಕೆ ಭಂಗ ತರಬಹುದು. ಗುರುವಿನ ದರ್ಶನವನ್ನು ಪಡೆದು ಖುಷಿಪಡುವಿರಿ. ನಿಮ್ಮ ಸಕಾರಾತ್ಮಕ ನಿಲುವು ಹಲವರಿಗೆ ಇಷ್ಟವಾಗುವುದು. ನೀವು ಕೆಲಸದಲ್ಲಿ ಪಾರದರ್ಶಕತೆಯನ್ನು ಹೆಚ್ಚು ಇಷ್ಟಪಡುತ್ತೀರಿ. ವ್ಯಾಪಾರವನ್ನು ವಿನಯದಿಂದ ಮಾಡಿ, ಆದಾಯವನ್ನು ಹೆಚ್ಚು ಮಾಡಿಕೊಳ್ಳಬಹುದು.
ಮಿಥುನ ರಾಶಿ: ಇಂದಿನ ವರ್ತನೆಯು ಊಹಾತೀತವಾಗಿರುವುದು. ವ್ಯಾಪಾರಸ್ಥರು ಸುಲಭದಲ್ಲಿ ಲಾಭವನ್ನು ಗಳಿಸುವುದು ಕಷ್ಟವಾದೀತು. ನಿಮ್ಮ ಮನೆಯ ವಾತಾವರಣವು ಅನೇಕ ದಿನಗಳು ಅನಂತರ ಪ್ರಶಾಂತವಾಗಿರುವುದು. ನಿಮ್ಮ ಕಾರ್ಯದ ಪರಿಶೀಲನೆ ಅಧಿಕಾರಿಗಳು ಬರಬಹುದು. ಪ್ರಶಂಸೆ ಸಿಗುವ ಸಾಧ್ಯತೆಯೂ ಇದೆ. ನಿಮ್ಮ ಏಳ್ಗೆಯನ್ನು ಕಂಡು ದಾಯಾದಿಗಳು ಅಸೂಯೆ ಪಡಲಡುವರು. ಯಾವುದಾದರೂ ಒಂದು ಆರೋಪದಲ್ಲಿ ಸಿಕ್ಕಿಹಾಕಿಕೊಳ್ಳುವ ಸನ್ನಿವೇಶವು ಬರಬಹುದು. ಎಲ್ಲ ಕಡೆಗಳಲ್ಲಿ ತಾರತಮ್ಯ ತೋರುವುದು ಬೇಡ. ನಿಮ್ಮ ಮೇಲೂ ನಿಮ್ಮವರ ಮೇಲೆ ನಂಬಿಕೆ ಇಟ್ಟಕೊಳ್ಳಿ.
ಕರ್ಕಾಟಕ ರಾಶಿ: ಉದ್ಯಮದಲ್ಲಿ ಶತ್ರುಗಳು ಹುಟ್ಟಿಕೊಳ್ಳಬಹುದು. ನಿಮ್ಮ ಸ್ಥಗಿತಗೊಂಡ ಕೆಲಸವು ಪೂರ್ಣವಾಗುವ ಹಂತಕ್ಕೆ ಹೋಗಬಹುದು. ಪ್ರಭಾವೀ ಮುಖಂಡರ ಜೊತೆ ನೀವು ಸಾಮಾಜಿಕ ಕಾರ್ಯಗಳ ಬಗ್ಗೆ ಚರ್ಚಿಸಿ. ನಂಬಿಕೆ ಬಾರದ ಕಡೆ ವ್ಯವಹಾರವನ್ನು ಮುಂದುವರಿಸುವುದು ಬೇಡ. ಧನವ್ಯಯವಾದರೂ ದೊಡ್ಡ ಸಮಸ್ಯೆ ಆಗುವುದಿಲ್ಲ. ಪ್ರೇಮದ ವಿಚಾರದಲ್ಲಿ ನೀವು ಎಚ್ಚರಿಕೆಯಿಂದ ಮುಂದುವರಿಯಿರಿ. ಶತ್ರುಗಳಿಂದ ಕೆಲಸಗಳಿಗೆ ತೊಂದರೆಯಾಗಬಹುದು. ಹೆಚ್ಚು ಪ್ರಯತ್ನವಿದ್ದರೂ ಸ್ವಲ್ಪ ಫಲವು ಇರಲಿದೆ. ಅವಕಾಶದ ಕೊರತೆಯು ನಿಮ್ಮ ಹತಾಶಗೊಳಿಸಬಹುದು
ಸಿಂಹ ರಾಶಿ: ಯಾರನ್ನೂ ಕೊಂಡುಕೊಳ್ಳಲಾಗದು, ಇನ್ನೊಬ್ಬರಿಗೆ ಕೊಟ್ಟುಕೊಂಡರೆ ಕೆಲಸ ಸಲೀಸು. ಆರ್ಥಿಕತೆಯ ಸೌಲಭ್ಯಗಳನ್ನು ಹೆಚ್ಚು ಮಾಡಿಕೊಳ್ಳುವಿರಿ. ಪ್ರಯತ್ನವು ಫಲಿಸುವ ತನಕ ಸಹನೆ ಅತ್ಯವಶ್ಯಕ. ನಡೆದಾಡುವಾಗ ಜಾಗರೂಕತೆ ಬೇಕು. ಇಂದು ನಿಮಗೆ ವ್ಯಕ್ತಿಗಿಂತ ಕೆಲಸವೇ ಮುಖ್ಯವಾಗುವುದು. ದುಡಿಯುವವು ತಮ್ಮ ಶ್ರಮಕ್ಕೆ ಉಚಿತ ಫಲಿತಾಂಶವನ್ನು ನಿರೀಕ್ಷಿಸುವರು. ನಿಮ್ಮ ಆಸೆಯನ್ನು ಯಾರ ಎದುರು ಪ್ರಕಟಪಡಿಸಲು ಮುಜುಗರ ಆಗಬಹುದು. ಬರುವ ಆದಾಯವನ್ನು ಜಾಣ್ಮೆಯಿಂದ ಬಳಸಿಕೊಳ್ಳುವಿರಿ. ಸಂಗಾತಿಗೆ ಸಿಟ್ಟು ಬರುವಂತೆ ನೀವು ಉದ್ದೇಶಪೂರ್ವಕವಾಗಿ ನಡೆದುಕೊಳ್ಳುವಿರಿ.
ಕನ್ಯಾ ರಾಶಿ: ನಿಮ್ಮ ಕೆಲಸದ ಬಗ್ಗೆ ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಹಕಾರ ಲಭ್ಯವಿಲ್ಲ. ನಿತ್ಯ ಬಳಕೆಯ ವಸ್ತುವಿನ ವ್ಯಾಪಾರದಿಂದ ಲಾಭ ಗಳಿಸುವಿರಿ. ಯಾರಿಗೂ ನೋವಾಗದಂತೆ ಇರುವುದು ಸುಲಭವಲ್ಲ. ಸಂಗಾತಿಯ ಬಯಕೆಯನ್ನು ಪೂರ್ಣವಾಗಿಸುವಿರಿ. ವ್ಯಾಪಾರಸ್ಥರಾದ ನೀವು ಆರ್ಥಿಕ ಸ್ಥಿತಿಯನ್ನು ಕಾಪಾಡಿಕೊಳ್ಳಿ. ಮಗುವಿನ ಆರೋಗ್ಯದ ಚಿಂತೆ ಇಂದು ಕಾಡಬಹುದು. ದಾಯಾದಿ ಕಲಹವು ತಾರಕಕ್ಕೆ ಹೋಗಬಹುದು. ಇತರರ ಬೆಂಬಲವು ನಿಮಗೆ ಕಡಿಮೆ ಆಗಬಹುದು. ಸಹೋದ್ಯೋಗಿಗಳು ನಿಮ್ಮ ಬಗ್ಗೆ ದೂರವಿರಬಹುದು. ಎಂದೋ ಮಾಡಿದ ಸಾಮಾಜಿಕ ಕೆಲಸಗಳಿಂದ ಗೌರವ ಸಿಗುವ ಸಂದರ್ಭವಿದೆ.
ತುಲಾ ರಾಶಿ: ಇಂದಿನ ನಿಮ್ಮ ಕಾರ್ಯಗಳು ಸುಗಮವಾಗಿ ನಡೆಯಲಿವೆ. ಮನೆಯಲ್ಲಿ ಸಂತೋಷದ ವಾತಾವರಣವನ್ನು ನೀವೇ ಸೃಷ್ಟಿಸಿ. ಸಂತೋಷವನ್ನು ಇನ್ನೊಂದರಲ್ಲಿ ಹುಡುಕಲು ನಿಮ್ಮೊಳಗೆ ಇದೆಯೇ ಎಂದು ಭಾವಿಸಿ. ಬಂಧುಗಳು ನಿಮ್ಮ ಸಹಾಯವನ್ನು ಕೇಳಿ ಬರಬಹುದು. ಆಸ್ತಿಯ ವಿಚಾರವಾಗಿ ನೀವು ಕಾನೂನು ಹೋರಾಟವನ್ನು ಮಾಡುವುದು ಒಳ್ಳೆಯದು. ವಿಳಂಬವಾದರೂ ಮಾರ್ಗ ಸರಿಯಾಗಿರಲಿದೆ. ನಿಮ್ಮ ಮಾತಿನ ಮೇಲೆ ನಂಬಿಕೆ ಕಡಿಮೆ ಆಗುವುದು. ಕಲಾವಿದರು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುತ್ತಾರೆ. ಬೆನ್ನಿನ ನೋವು ಮತ್ತೆ ಕಾಣಿಕೊಂಡು ಸಂಕಟಪಡಬೇಕಾದೀತು.
ವೃಶ್ಚಿಕ ರಾಶಿ: ಪ್ರೇಮಿಗಳು ಇಂದು ಸ್ವತಂತ್ರವಾಗಿ ಇರಲು ಆಸೆಪಡುವರು. ವಿವಾಹಿತರ ಜೀವನವು ಆನಂದದಿಂದ ಇರುವುದು. ನಿಮ್ಮ ವರ್ಚಸ್ಸು ಅಧಿಕವಾದಷ್ಟೂ ಅಪಾಯವೇ ನಿಮಗೆ. ನಿಮ್ಮ ಆರ್ಥಿಕ ಸ್ಥಿತಿಯು ಸಾಮಾನ್ಯವಾಗಿದ್ದು ಹತಾಶ ಭಾವವಿರುವುದು. ಈ ಸಮಯದಲ್ಲಿ ನೀವು ಉಳಿತಾಯದ ಬಗ್ಗೆ ಹೆಚ್ಚು ಗಮನ ಕೊಡಬೇಕು. ಕಛೇರಿಯಲ್ಲಿ ನಿಮ್ಮ ಮಾತು ಮತ್ತು ನಡವಳಿಕೆಯ ಬಗ್ಗೆ ಗಮನಹರಿಸುವುದು. ವ್ಯಾಪಾರಸ್ಥರಿಗೆ ಸಾಮಾನ್ಯವಾಗಿ ಇರುವುದು. ಭೂಮಿಯ ದಾಖಲೆಗಳನ್ನು ಸರಿಯಾಗಿ ವ್ಯವಹರಿಸಿ. ಭವಿಷ್ಯದ ಕುರಿತು ಬಹಳ ಆಲೋಚನೆ ಇರುವುದು.
ಧನು ರಾಶಿ: ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಲಹೆಯನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡಿರಿ. ನಿಮಗೆ ನಿಮ್ಮದೇ ಹಣ ಬರುವ ಸಾಧ್ಯತೆ ಇದೆ. ಸಂಗಾತಿಯ ಜೊತೆ ಭಿನ್ನಾಭಿಪ್ರಾಯವು ಹೆಚ್ಚಾಗಬಹುದು. ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸುವ ಅವಶ್ಯಕತೆಯಿದೆ. ಉತ್ತಮ ಅವಕಾಶಗಳು ಸಣ್ಣ ಅಂತರದಲ್ಲಿ ಕೈ ತಪ್ಪುತ್ತವೆ. ಆಕಸ್ಮಿಕವಾಗಿ ಉದ್ಯೋಗವು ನಿಮ್ಮ ಪಾಲಿಗೆ ಬರುವುದು. ಇಂದಿನ ನಿಮ್ಮ ಉತ್ಸಾಹವು ಸಮಾರಂಭಗಳಲ್ಲಿ ಸಂತೋಷದಿಂದ ಭಾಗವಹಿಸುವಂತೆ ಮಾಡುವುದು.
ಮಕರ ರಾಶಿ: ಯಾರನ್ನೂ ಕುರುಡಾಗಿ ನಂಬುವುದು ಬೇಡ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಇವೆ. ನಿಮ್ಮ ಅತಿಯಾದ ನಿರೀಕ್ಷೆಯನ್ನು ಇಟ್ಟು ಕಾರ್ಯ ಮಾಡುವುದು ಬೇಡ. ಉದ್ಯಮಿಗಳಿಗೆ ರಪ್ತು ವ್ಯವಹಾರವು ಬಹಳ ಕಷ್ಟವೆನಿಸುತ್ತದೆ. ಪಾಲುದಾರಿಕೆಯನ್ನು ಕೈಬಿಡುವುದು ಒಳ್ಳೆಯದು. ಆರೋಗ್ಯವೂ ಅತಿಯಾದ ಒತ್ತಡದಿಂದ ಹಾಳಾಗುವುದು. ಸಲ್ಲದ ಮಾತುಗಳ ಮೇಲೆ ನಿಯಂತ್ರಣದ ಅವಶ್ಯಕತೆ ಇರಲಿದೆ. ನೇರ ಮಾತು ಎಲ್ಲರಿಗೂ ಹಿಡಿಸದು. ಮಕ್ಕಳ ವಿಚಾರದಲ್ಲಿ ಕಾಳಜಿಯ ಅವಶ್ಯಕತೆ ಇರುತ್ತದೆ.
ಕುಂಭ ರಾಶಿ: ಅಂತಸ್ತಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ. ನಿಮ್ಮ ಉದ್ಯೋಗಸ್ಥರು ಕಚೇರಿಯಲ್ಲಿ ಮೇಲಿನವರಿಂದ ಹೆಚ್ಚಿನ ಬೆಂಬಲವನ್ನು ಪಡೆಯುತ್ತಾರೆ. ಹಣದ ಪರಿಸ್ಥಿತಿ ಉತ್ತಮವಾಗಿದ್ದರೂ, ಯಥಾಯೋಗ್ಯವಾದ ಖರ್ಚೂ ಇರಲಿದೆ. ಆರೋಗ್ಯವಾಗಿರಲು, ನೀವು ಅಸಂಬದ್ಧ ಚಿಂತೆಗಳಿಂದ ದೂರವಿರಬೇಕು. ಕೋಪದಲ್ಲಿ ಏನನ್ನಾದರೂ ಹೇಳಿ ಮನಸ್ಸನ್ನು ವಿಕಾರ ಮಾಡಿಕೊಳ್ಳುವಿರಿ. ಧಾರ್ಮಿಕ ಕಾರ್ಯದಲ್ಲಿ ಅಲ್ಪ ಆಸಕ್ತಿಯುಳ್ಳದ್ದು. ಇಂದಿನ ಘಟನೆಯು ನಿಮ್ಮ ಎಲ್ಲ ಆಸಕ್ತಿಯನ್ನು ಕುಗ್ಗಿಸುವುದು. ಕೆಲಸವನ್ನು ಹಂಚಿಕೊಂಡು ಮಾಡಿ.
ಮೀನ ರಾಶಿ: ಉದ್ಯಮದಲ್ಲಿ ಬರುವ ದಾಖಲೆಗಳ ಸಮಸ್ಯೆಯೂ ದೂರವಾಗುವುದು. ನಿಮ್ಮ ಆರ್ಥಿಕ ಸ್ಥಿತಿಯು ಮಧ್ಯಮಕ್ಕಿಂತ ಹೆಚ್ಚಾಗಿರುತ್ತದೆ. ವೈವಾಹಿಕ ಜೀವನದಲ್ಲಿ ಖುಷಿ ಇರುವುದು. ಆರೋಗ್ಯವು ಸುಸ್ಥಿರವಾಗಿದ್ದು ಇಂದು ಅನುಕೂಲವೇ. ಕಾನೂನಿಗೆ ವಿರುದ್ಧವಾಗಿ ಕಾರ್ಯವನ್ನು ಮಾಡುವ ಆಲೋಚನೆಯನ್ನು ಬಿಡುವುದು ಇದ್ದರೆ, ಅಂತಹ ಸಾಹಸದಲ್ಲಿ ತೊಡಗಿಸಿಕೊಳ್ಳುವುದು ಬೇಡ. ಬೇಸರಿಸದೇ ಬಂದ ಕೆಲಸವನ್ನು ಶ್ರದ್ಧೆಯಿಂದ ಮಾಡಿ.’ ಬಂಧುಗಳ ಜೊತೆ ಇಂದು ವಿನಾಕಾರಣ ವಿವಾದದಿಂದ ಬೇಸರವಿರಲಿದೆ.
ಲೋಹಿತ ಹೆಬ್ಬಾರ್ -8762924271 (What’s app ಮಾತ್ರ)