Headlines

Horoscope Today 14 January : ಇಂದು ಈ ರಾಶಿಯವರ ಭಾವನೆಗೆ ತೊಂದರೆಯಾಗಲಿದೆ

Horoscope Today 14 January : ಇಂದು ಈ ರಾಶಿಯವರ ಭಾವನೆಗೆ ತೊಂದರೆಯಾಗಲಿದೆ


Horoscope Today 14 January : ಇಂದು ಈ ರಾಶಿಯವರ ಭಾವನೆಗೆ ತೊಂದರೆಯಾಗಲಿದೆ

ಮೇಷ ರಾಶಿ:

ಇಂದಿನ ಪ್ರಯಾಣದಲ್ಲಿ ಅಡೆತಡೆಗಳಿದ್ದರೂ ಅದನ್ನು ಲೆಕ್ಕಿಸದೆ ಮುನ್ನಡೆಯುವಿರಿ. ಅನ್ಯ ಕಾರ್ಯದಿಂದ ನಿಮ್ಮ ಮುಖ್ಯ ಕಾರ್ಯದಲ್ಲಿ ವೇಗವು ಕಡಿಮೆ ಆಗಬಹುದು. ನೂತನ ವಾಹನವನ್ನು ಖರೀದಿಸುವ ಆಲೋಚನೆ ಇರುವುದು. ನಿಮ್ಮ ರಕ್ಷಣೆಯನ್ನು ನೀವೇ ಮಾಡಿಕೊಳ್ಳಬೇಕು. ಸ್ನೇಹಿತರ ಸಂಪಾದನೆಯ ದಾರಿಯನ್ನು ಹಾಕಿಕೊಡುವಿರಿ. ಎಲ್ಲದಕ್ಕೂ ಉತ್ತರವನ್ನು ಕೊಡುವ ಅವಶ್ಯಕತೆ ಇರುವುದಿಲ್ಲ. ನಿಮ್ಮ ಅಧಿಕಾರದ ಮಾತುಗಳು ಅಹಂಕಾರದ ಮಾತಾಗುವುದು. ವ್ಯಾಪಾರವು ಮಧ್ಯಮಗತಿಯಲ್ಲಿ ಇರುವುದು. ನಿಮ್ಮದಾದ ನಿಯಮವನ್ನು ಬಿಡಲು ನೀವು ಸಿದ್ಧರಾಗುವುದಿಲ್ಲ. ಕೆಲವರ ಮನೋಗತವನ್ನು ಅರಿತುಕೊಳ್ಳುವಿರಿ. ನಿಂದನೆಯನ್ನು ಸಹಜದಂತೆ ಸ್ವೀಕರಿಸುವಿರಿ.

ವೃಷಭ ರಾಶಿ:

ನಿಮ್ಮಿಷ್ಟಿದ ಸ್ಥಳಕ್ಕೆ ಹೋದರೆ ಮನಸ್ಸು ಹಗುರಾಗುವುದು. ಒಳ್ಳೆಯ ಹವ್ಯಾಸಗಳನ್ನು ಕೊಲ್ಲುವುದು ಬೇಡ. ಸಂಗಾತಿಯ ಅನಪೇಕ್ಷಿತ ಆಸೆಗಳನ್ನು ದೂರ ಮಾಡುವಿರಿ. ನಿಮ್ಮ ಮಾತುಗಳು ಕಠೋರವಾಗಿ ಇರುವುದು. ಏನನ್ನೋ ಸಾಧಿಸಲು ಹೋಗಿ ಮತ್ತೇನನ್ನೋ ಮಾಡಿಕೊಳ್ಳುವಿರಿ. ವಾಹನದಿಂದ ಗಾಯವಾಗುವ ಸಾಧ್ಯತೆ ಇದೆ. ನಿಮ್ಮ ಕನಸನ್ನು ಸಕಾರ ಮಾಡಿಕೊಳ್ಳಲು ಪ್ರಗತಿಯಲ್ಲಿದೆ. ಸಹೋದರನ ಜೊತೆ ಸಣ್ಣ ವಿಷಯಕ್ಕೆ ವಿವಾದವಾಗುತ್ತದೆ. ನೇರ ನುಡಿಗಳು ನಿಮಗೆ ಮುಜುಗರವನ್ನು ಉಂಟುಮಾಡಬಹುದು. ವಿದೇಶಕ್ಕೆ ಹೋಗಲು ಬೇಕಾದ ಸಿದ್ಧತೆ ನಡೆಸಿರಿ. ಮನೆಯಿಂದ ದೂರ ಇದ್ದವರಿಗೆ ತೊಂದರೆ ಬರಬಹುದು.

ಮಿಥುನ ರಾಶಿ:

ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಆರ್ಥಿಕತೆಯ ಹೆಜ್ಜೆ ಇಡಬಹುದು. ಹೊಸ ಉದ್ಯೋಗದ ಅಭಿವೃದ್ಧಿಗೆ ದೇವರಲ್ಲಿ ಶರಣಾಗುವಿದರಿ. ಪ್ರಯತ್ನಗಳು ಪ್ರಾರಂಭವಾಗಲಿದೆ. ಪಿತ್ರಾರ್ಜಿತ ಆಸ್ತಿಯು ತಾನಾಗಿಯೇ ಬರಬಹುದು. ವಿದ್ಯಾಭ್ಯಾಸದಲ್ಲಿ ಆಸಕ್ತಿ ಬರುವಂತೆ ಮಾಡುವ ಹೊಣೆಗಾರಿಕೆ ಇರಲಿದೆ. ಹಿರಿಯರಿಂದ ಮಾರ್ಗದರ್ಶನವು ಸಿಗಲಿದೆ. ಇಂದು ಉದ್ಯೋಗಕ್ಕೆ ಸಂಬಂಧಿಸಿದ ಓಡಾಟವು ವ್ಯರ್ಥವಾಗುವುದು. ಸ್ವತಂತ್ರವಾಗಿ ನಿಮ್ಮನ್ನು ಗುರುತಿಸಿಕೊಳ್ಳಲು ಇಷ್ಟಪಡುವಿರಿ. ಇಂದು ನೀವು ಹೊಸ ಕೆಲಸಗಳನ್ನು ಪ್ರಾರಂಭಿಸಬಹುದು. ಅನಾರೋಗ್ಯವನ್ನೂ ನೀವು ಲೆಕ್ಕಿಸದೆ ಇರುವುದು ಹೆಚ್ಚು ದುರ್ಬಲವಾಗಲು ಕಾರಣ.

ಕರ್ಕಾಟಕ ರಾಶಿ:

ಹಳೆಯ ಬಯಕೆಯನ್ನು ಇಡೇರಿಸಿಕೊಂಡು ಖುಷಿಪಡುವಿರಿ. ನಿಮ್ಮ ನಿರ್ಲಕ್ಷ್ಯದಿಂದ ಭೂಮಿಯ ಸ್ವಲ್ಪ ಭಾಗವನ್ನು ಕಳೆದುಹೋಗಬಹುದು. ಕಾನೂನಿಗೆ ಶರಣಾಗುವಿರಿ. ಉದ್ಧಟತನದ ಮಾತುಗಳಿಂದ ನಿಮ್ಮ ಸ್ವಭಾವವು ಸ್ಪಷ್ಟವಾಗುವುದು. ಸ್ನೇಹಿತರ ಸಹವಾಸದಿಂದ ದುರಭ್ಯಾಸವು ಬಂದುಬಿಡುವುದು. ವಿದ್ಯಾಭ್ಯಾಸದ ಕಾರಣಕ್ಕೆ ಹಣವನ್ನು ಪಡೆದು ಅನ್ಯ ಕಾರ್ಯಕ್ಕೆ ಬಳಸಿಕೊಳ್ಳುವಿರಿ. ಭಾವನೆಗಳು ಹೇರಿದರೆ ಅದು ಸ್ಫೋಟವಾಗುವ ಸಾಧ್ಯತೆ ಇದೆ. ಸುಲಭ ದಾರಿಯನ್ನು ಆಯ್ಕೆ ಮಾಡಿಕೊಳ್ಳುವುದು ಸೂಕ್ತ. ನಂಬಿಕೆಯನ್ನು ಕಳೆದುಕೊಳ್ಳುವ ಪ್ರಸಂಗವು ಬರಬಹುದು. ಉದ್ಯಮವನ್ನು ಮುನ್ನಡೆಸಲು ಉತ್ತಮ ವ್ಯಕ್ತಿಗಳ ಅನ್ವೇಷಣೆ ಮಾಡುವಿರಿ. ನಿಮ್ಮ ತಪ್ಪನ್ನು ಯಾರಿಂದಲೂ ಕೇಳಲು ಇಚ್ಛಿಸುವುದಿಲ್ಲ.

ಸಿಂಹ ರಾಶಿ:

ರಕ್ಷಣೆಯ ಜವಾಬ್ದಾರಿ ಇದ್ದವರಿಗೆ ಒತ್ತಡವಿರುವುದು. ನಿಮ್ಮ ಸಮತೋಲನ ಮನಃಸ್ಥಿತಿಯು ಕ್ಲಿಷ್ಟ ಸಂದರ್ಭವನ್ನು ಲೀಲಾಜಾಲವಾಗಿ ದಾಟಿಸುವುದು. ನೆರೆಹೊರೆಯರ ಮಾತು ನಿಮಗೆ ಬೇಸರ ತರಿಸಿ, ಪ್ರತಿಯಾಗಿ ಏನನ್ನಾದರೂ ಹೇಳಲು ಹೋಗುವಿರಿ. ನಿಮ್ಮ ಉದ್ವೇಗದ ಮನಸ್ಸನ್ನು ಇತರರಿಗೆ ತೋರಿಸುತ್ತದೆ. ಮೇಲಧಿಕಾರಿಗಳು ನಿಮ್ಮ ಕಾರ್ಯಕ್ಕೆ ತೊಂದರೆ ಕೊಡಬಹುದು. ಮಕ್ಕಳಿಗೆ ಜವಾಬ್ದಾರಿಯನ್ನು ಕೊಡಲು ಹಿಂಜರಿಯುವಿರಿ. ಕಷ್ಟವಾದರೂ ಸಾಲದ ಮರುಪಾವತಿಯನ್ನು ಮಾಡವಿರಿ. ಮನಸ್ಸಿಗೆ ಬೇರಸವಾಗುವ ಸಂಗತಿಯು ಹತ್ತಿರ ಬಂದಾಗ ಅದನ್ನು ದೂರವಿಡಲು ಪ್ರಯತ್ನಿಸಿ. ನಿಮ್ಮ ಕಾರ್ಯಕ್ಕೆ ಮಕ್ಕಳಿಂದ ವಿರೋಧವಿದೆ. ಅಹಂಕಾರದ ಮಾತುಗಳು ನಿಮಗೇ ಬರಬಹುದು.

ಕನ್ಯಾ ರಾಶಿ:

ಅಯಾಚಿತ ಭಾಗ್ಯದಿಂದ ಖುಷಿಯಾಗಲಿದೆ. ಯೋಜಿತ ಕಾರ್ಯಗಳು ಸಮಯಕ್ಕೆ ಸರಿಯಾಗಿ ಮುಗಿಯಲಿದೆ ನೆಮ್ಮದಿ ಇರುವುದು. ನಿಮ್ಮಿಂದ ಆಕರ್ಷಿತರಾಗಿ ಮೋಹಗೊಳ್ಳಬಹುದು. ವ್ಯಾಪಾರದಲ್ಲಿ ಜನರ ಆಕರ್ಷಣೆಯನ್ನು ಮಾಡುವ ಕಲೆ ಸಿದ್ಧಿಸಿದೆ. ನಿಮ್ಮ ಅಸಮಾಧಾನವನ್ನು ಅಸ್ಥಾನದಲ್ಲಿ ಹೊರಹಾಕಿ ಮುಜುಗರಕ್ಕೆ ಒಳಗಾಗುವಿರಿ. ಬಂಧುಗಳಿಂದ ನಿಮಗೆ ಪ್ರಶಂಸೆ ಸಿಕ್ಕರೂ ಒಳಗೇ ಆತಂಕ. ತಂದೆಯ ಮೇಲೆ ನಿಮ್ಮ ಗೌರವವು ಅಧಿಕವಾಗಿದ್ದರೆ ಅನಿರೀಕ್ಷಿತ ಉಡುಗೊರೆಯನ್ನು ಕೊಡುವಿರಿ. ಯಾರ ವಸ್ತುವನ್ನು ಕಸಿದುಕೊಳ್ಳುವ ಹಂತಕ್ಕೆ ಹೋಗುವುದು ಬೇಡ. ನಿಮ್ಮ ನಿರ್ಲಕ್ಷ್ಯದಿಂದ ಭೂಮಿಯ ಸ್ವಲ್ಪ ಭಾಗವನ್ನು ಕಳೆದುಹೋಗಬಹುದು. ಬಂಧಿವಿನಿಂದ ನೀವು ಧನವನ್ನು ಅಪೇಕ್ಷಿಸುವಿರಿ.

ತುಲಾ ರಾಶಿ:

ಶೂನ್ಯದಿಂದ ಆರಂಭಿಸುವ ಕಲೆ ನಿಮಗೆ ಗೊತ್ತಿದೆ. ನಿರೀಕ್ಷಿತ ಗೌರವವು ನಿಮಗೆ ಸಿಗಲಿದೆ. ಕೆಲವು ವ್ಯಕ್ತಿಗಳಿಂದ ನೀವು ದೂರವಿರಲು ಬಯಸುತ್ತೀರಿ. ಸಹೋದ್ಯೋಗಿಗೆ ಸಹಾಯ ಮಾಡುವ ಸ್ಥಿತಿಯು ನಿಮಗೆ ಬರಬಹುದು. ಆಗಬೇಕಾದ ಕಾರ್ಯಗಳು ಒತ್ತಡ ಇಲ್ಲದೇ ಆಗುವುದು. ಯಾರ ಬಲವಂತಕ್ಕೂ ಮಣಿಯುವುದಿಲ್ಲ. ರತ್ನ ವ್ಯಾಪಾರದಲ್ಲಿ ಹಿನ್ನಡೆಯಾಗಬಹುದು. ನಿಮ್ಮ ಸ್ವಭಾವವು ಇತರರಿಗೆ ಅಸಹಜತೆಯಂತೆ ಕಾಣಿಸಬಹುದು. ಎಲ್ಲರ ಮೇಲೂ ಹಿಡಿತ ಸಾಧಿಸುವ ಪ್ರಯತ್ನ ಬೇಡ. ಮಾತನಾಡಿ ಇಂದು ಸಮಯ ವ್ಯರ್ಥ ಮಾಡುವಿರಿ. ವಹಿಸಿಕೊಂಡ ಕಾರ್ಯವನ್ನು ಸಮಯಕ್ಕೆ ಮುಗಿಸಿ. ಕೃಷಿಕರು ಆದಾಯದ ಮೂಲವನ್ನು ಹೆಚ್ಚಿಸಿಕೊಳ್ಳುವರು.

ವೃಶ್ಚಿಕ ರಾಶಿ:

ರಕ್ಷಣೆಯ ಜವಾಬ್ದಾರಿ ಇದ್ದವರಿಗೆ ಒತ್ತಡವಿರುವುದು. ಮಕ್ಕಳಲ್ಲಿ ಪ್ರೀತಿಯನ್ನು ತೋರುವಿರಿ. ಅಪರಿಚಿತರಿಗೆ ಮಾಡಿದ ಸಹಾಯವು ದುರುಪಯೋಗವಾಗುವುದು. ನಿಮ್ಮ ಗುಣಗಳು ಅಪ್ರಕಾಶವಾಗಬಹುದು. ದೂರದ ಸ್ಥಳಕ್ಕೆ ಉದ್ಯೋಗಕ್ಕೆ ಹೋಗಲು ಮನೆಯಿಂದ ನಕಾರಾತ್ಮಕ ಸೂಚನೆ ಬರಬಹುದು. ಯಾರನ್ನೂ ಅವಲಂಬಿಸದೆ ನಡೆಯಬೇಕು ಎನ್ನುವ ಹಠವು ಬರುವುದು. ಪ್ರಶಂಸೆಯು ಇಲ್ಲದೇ ಕೆಲಸದಲ್ಲಿ ನಿಮ್ಮ ಆಸಕ್ತಿಯು ಕಡಿಮೆ ಆಗಬಹುದು. ನಿಮ್ಮ ಕಾರ್ಯಕ್ಕೆ ಮಕ್ಕಳಿಂದ ವಿರೋಧವಿದೆ. ಸ್ಥಳ ಬದಲಾವಣೆಯನ್ನು ಅನಿವಾರ್ಯವಾಗಿ ಮಾಡಬೇಕಾದೀತು. ಸ್ನೇಹಿತರ ಜೊತೆ ಎಲ್ಲಾದರೂ ಪ್ರಯಾಣವನ್ನು ಮಾಡುತ್ತೀರಿ. ಸತ್ಯವನ್ನು ಸಂಗಾತಿಯಿಂದ ಮುಚ್ಚಿಡಲು ಪ್ರಯತ್ನಿಸುವಿರಿ.

ಧನು ರಾಶಿ:

ನೀವು ಯಾವ ಜವಾಬ್ದಾರಿಯನ್ನು ಪಡೆಯಲೂ ಹಿಂಜರಿಯುವುದಿಲ್ಲ. ನಿಮ್ಮ ವಾಹನವನ್ನು ಬದಲಾಯಿಸುವ ಸಾಧ್ಯತೆಯಿದೆ. ನಿಂದಕರಿಗೆ ಉತ್ತರವನ್ನು ಕೊಟ್ಟು ಸಿಟ್ಟಗುವಿರಿ. ಬರಲಿರುವ ಧನಾಗಮನದ ನಿರೀಕ್ಷೆಯಲ್ಲಿ ಇರುವಿರಿ. ಭಾವುಕರಾಗುವ ಸಂದರ್ಭವು ಬರಬಹುದು. ನಿರಂತರ ಕಾರ್ಯದಿಂದ ವಿಶ್ರಾಂತಿಯನ್ನು ಪಡೆದುಕೊಳ್ಳಿ. ಕೆಲಸದ ಸಮಯವು ವ್ಯತ್ಯಾಸವಾಗುವುದರಿಂದ ನಿಮಗೆ ಹೊಂದಿಕೊಳ್ಳುವುದು ಕಷ್ಟವಾಗುತ್ತದೆ. ನಿಮ್ಮ ಮೇಲೆ ಸಹಾನುಭೂತಿ ಇರಬಹುದು. ವಿದೇಶೀ ವ್ಯಾಪಾರದಿಂದ ಆದಾಯವು ಹೆಚ್ಚಾಗಬಹುದು. ನಿಮ್ಮ ಜ್ಞಾನವನ್ನು ನೀವೇ ತೋರಿಸಿಕೊಳ್ಳಿ. ನಮ್ಮದೇ ಸರಿ ಎನ್ನುವ ವಾದವು ಸರಿಯಾಗದು. ನೀವು ಇಂದು ಯಾರ ಜೊತೆಯೂ ಬೆರೆಯಲು ಇಷ್ಟಪಡುವುದಿಲ್ಲ.

ಮಕರ ರಾಶಿ:

ಇಂದು ಇತರ ಅನುಭವವೂ ನಿಮಗೆ ಪಾಠವಾಗುವುದು. ಹಠದ ಸ್ವಭಾವದಿಂದ ಹೊರಬನ್ನಿ. ನಿಮ್ಮ ಸ್ವೇಚ್ಛಾಚಾರವು ಮನೆಯವರಿಗೆ ಇಷ್ಟವಾಗದು. ಅನಿರೀಕ್ಷಿತ ಧನಾಗಮನದಿಂದ ಸಂತೋಷವು ಇಮ್ಮಡಿಯಾಗಬಹುದು. ನಿಮಗೆ ಸಿಕ್ಕ ಜವಾಬ್ದಾರಿಯಿಂದ ಬೀಗುವಿರಿ. ಹೊಸ ಪರಿಚಯವು ಅತಿಯಾಗಿ ಆಪ್ತವಾಗಬಹುದು. ಇನ್ನೊಬ್ಬರ ಗೌಪ್ಯತೆಯನ್ನು ಬಿಚ್ಚಿಡುವುದು ಸಂತೋಷದ ವಿಚಾರವಾಗುವುದು. ನಿಮ್ಮ ಬಗ್ಗೆ ನೀವೇ ಹೇಳಿಕೊಳ್ಳುವುದು ಜಂಭವೆನಿಸುವುದು. ಅತಿ ಲೋಭದಿಂದ ಧನಾರ್ಜನೆಯನ್ನು ಮಾಡುವಿರಿ. ಉದ್ಯೋಗಕ್ಕೆ ಸಂಬಂಧಿಸಿದ ಓಡಾಟವು ವ್ಯರ್ಥವಾಗುವುದು. ಯಾವುದಕ್ಕೆ ಸಿಕ್ಕಿದ್ದನ್ನು ಪಡೆಯಲು ಇಚ್ಛಿಸುವುದಿಲ್ಲ. ಶ್ರಮಕ್ಕೆ ಹೆಚ್ಚು ಮಹತ್ವವನ್ನು ಕೊಡುವಿರಿ.

ಕುಂಭ ರಾಶಿ:

ಸಾಧಕರ ಒಡನಾಟವು ನಿಮ್ಮ ಆಲೋಚನೆಯ ಕ್ರಮವನ್ನು ಬದಲಿಸುತ್ತದೆ. ಪ್ರಶಾಂತವಾದ ಚಿತ್ತದಿಂದ ಇದ್ದರೆ ಸಕಾರಾತ್ಮಕ ಅಂಶಗಳು ಕಾಣುವಿರಿ. ಒತ್ತಡದ ಕಾರಣ ಜವಾಬ್ದಾರಿಯನ್ನು ಒಪ್ಪಿಕೊಳ್ಳುವುದಿಲ್ಲ. ಸಂಗಾತಿಯ ಕಾರಣದಿಂದ ನಿಮಗೆ ಬೇಸರವಾಗುವುದು. ಅತಿ ಭೋಜನದಿಂದ ಉದರ ಬಾಧೆ. ಕೆಲವು ನಿಮ್ಮ ದಾರಿ ತಪ್ಪಿಸಬಹುದು. ಮಿತ್ರರ ಸಹಾನುಭೂತಿಯು ನಿಮಗೆ ಉತ್ಸಾಹವನ್ನು ಕೊಡುವುದು. ಉತ್ತಮವಾದ ಉಡುಗೊರೆಯೊಂದು ನಿಮ್ಮ ಕೈ ಸೇರಬಹುದು. ಪ್ರಮುಖ ಅಂಶಗಳು ದೂರಾಗಿ ಅಪ್ರಧಾನಾಂಶಗಳೇ ಮುನ್ನೆಲೆಗೆ ಬರುವುದು. ಕಾರ್ಯದ ಅನಿವಾರ್ಯತೆಯು ಎದ್ದು ಕಾಣುತ್ತದೆ. ನಿಮ್ಮ ಸರಳ ವ್ಯಕ್ತಿತ್ವವು ಮಾದರಿಯಾಗುವುದು.

ಮೀನ ರಾಶಿ:

ಇಂದು ಉಪಾಯದಿಂದ ಕೆಲಸವನ್ನು ಮಾಡುವುದು ಉತ್ತಮ. ನಿಮ್ಮ ಅನುಪಸ್ಥಿತಿಯಲ್ಲಿ ಕಾರ್ಯಗಳು ಆಗುವುದು. ನಿಮ್ಮಿಂದಾಗಿ ಕುಟುಂಬದ ಒತ್ತಡ ಕಡಿಮೆ ಆಗುವುದು. ಅವಸರ ಮಾಡದೇ ಕೆಲಸವನ್ನು ಮಾಡಿ. ಸಂಗಾತಿಯ ಮಾತಿನಂತೆ ಇಂದು ನಡೆದುಕೊಳ್ಳುವ ಅನಿವಾರ್ಯತೆ ಇದೆ. ವ್ಯಾಪಾರವು ಮಧ್ಯಮಗತಿಯಲ್ಲಿ ಇರುವುದು. ನಿಮ್ಮದಾದ ನಿಯಮವನ್ನು ಬಿಡಲು ನೀವು ಸಿದ್ಧರಾಗುವುದಿಲ್ಲ. ಕೆಲವರ ಮನೋಗತವನ್ನು ಅರಿತುಕೊಳ್ಳುವಿರಿ. ಯಾರದೋ ಒತ್ತಾಯಕ್ಕೆ ಮಣಿದು ಬೇಸರಪಡುವಿರಿ. ಇಂದು ನಿಮ್ಮ ಬೆಂಬಲಕ್ಕೆ ಬರುವವರನ್ನು ಅತಿಯಾಗಿ ನಂಬುವಿರಿ. ಅರ್ಥಿಕ ಕ್ರಮವನ್ನು ಸರಿಯಾಗಿ ಇಟ್ಟುಕೊಳ್ಳುವಿರಿ.

ಜನವರಿ 14, 2026ರ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಪುರಸಭಾ : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಪೂರ್ವಾಷಾಢ, ವಾರ : ಬುಧವಾರ, ಪಕ್ಷ : ಕೃಷ್ಣ, ತಿಥಿ : ಏಕಾದಶೀ, ನಿತ್ಯ ಸೂರ್ಯನಕ್ಷತ್ರ : ಅನೂರಾಧಾ ಯೋಗ : ಗಂಡ, ಕರಣ : ಬಾಲವ, 6 – 3 – 6 – 3 – ಸೂರ್ಯ 3 – ಸೂರ್ಯ 3 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12-33 – 13:58, ಯಮಗಂಡ ಕಾಲ 08:19 – 09:44, ಗುಳಿಕ ಕಾಲ 11:09 – 12:33

– ಲೋಹಿತ ಹೆಬ್ಬಾರ್ – 8762924271 (What’s app only)



Source link

Leave a Reply

Your email address will not be published. Required fields are marked *