ಮಂಗಳೂರು, ಫೆಬ್ರವರಿ 6: ಬೈಕೊಂದರಲ್ಲಿ ಟ್ರಿಬಲ್ ರೈಡ್ ಹೋಗುತ್ತಿದ್ದ ಯುವಕ ಏಕಾಏಕಿ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ ಪರಿಣಾಮ ರಸ್ತೆಯಲ್ಲಿ ವೇಗವಾಗಿ ಸಾಗುತ್ತಿದ್ದ ಕಾರು ಡಿಕ್ಕಿಯಾಗಿ ಭಾರೀ ಅವಘಡ ಸಂಭವಿಸಿದೆ. ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಸೂರಜ್ ಹೋಟೆಲ್ ಬಳಿ ನಡೆದ ಘಟನೆ, ಯುವಕರು ಹೆಲ್ಮೆಟ್ ಧರಿಸದೇ ನಿರ್ಲಕ್ಷ್ಯದಿಂದ ಬೈಕ್ ನಲ್ಲಿ ಟ್ರಿಬಲ್ ರೈಡ್ ಮಾಡುತ್ತಿದ್ದರು. ಈ ವೇಳೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರರು ಫುಟ್ ಬಾಲ್ ನಂತೆ ಹಾರಿ ಬಿದ್ದಿದ್ದಾರೆ. ಕಾರು ಡಿಕ್ಕಿಯ ರಭಸಕ್ಕೆ ಅಪಾಯದಿಂದ ಪಾರಾಗಿದ್ದರೆ, ಉಳಿದ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ