
ಬೆಂಗಳೂರು, (ಮಾರ್ಚ್ 09): ಗಲ್ಫ್ ರಾಷ್ಟ್ರಗಳ ಯುದ್ಧದ ಬಿಸಿ ಬೆಂಗಳೂರಿಗೆ ತಟ್ಟಿದೆ. ಬೆಲೆ ಏರಿಕೆ ನಡುವೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಇದರಿಂದ ಹೋಟೆಲ್ ಬಂದ್ ಆಗುವ ಆತಂಕ ಎದುರಾಗಿದೆ. ಏಕಾಏಕಿ ಗ್ಯಾಸ್ ಸರಬಾರದು ನಿಂತಿರುವದೇ ಈ ಸಮಸ್ಯೆಗೆ ಕಾರಣವಾಗಿದೆ. ಅನಿವಾರ್ಯವಾಗಿ ಬಂದ್ ಮಾಡಬೇಕಾದ ಪರಿಸ್ಥಿತಿ ಎಂದು ಹೋಟೆಲ್‌ಗೆ ಎಚ್ಚರಿಕೆ ನೀಡಲಾಗಿದೆ.
ಹೋಟೆಲ್ ಅಸೋಸಿಯೇಷನ್ ನ ಜಂಟಿ ಕಾರ್ಯದರ್ಶಿ ಕೃಷ್ಣರಾಜ್ ಈ ಕುರಿತು ಪ್ರತಿಕ್ರಿಯಿಸಿದ್ದಾರೆ, ಇದು ನಮ್ಮ ನಿರ್ಧಾರ ಸರ್ಕಾರ ನಮ್ಮ ಮೇಲೆ ಹಾಕುತ್ತಿರುವ ಒತ್ತಡದ ಸೂಚನೆ ಅಲ್ಲ. ಮೊದಲೇ ನಮಗೆ ಮುನ್ಸೂಚನೆ ನೀಡಿದ್ರೆ ಈ ರೀತಿಯ ಪರಿಸ್ಥಿತಿ ಎದುರಿಸುವ ಪ್ರಮೇಯವೇ ಇರಲಿದೆ. ನಾವು ಬಂದ್ ಮಾಡೋದಕ್ಕೆ ನಿರ್ಧಾರ ತೆಗೆದುಕೊಂಡಿಲ್ಲ. ನಮಗೆ ಸಿಲಿಂಡರ್ ಪೂರೈಕೆಯಾಗುತ್ತಿಲ್ಲ. ನಾಳೆ ಮಧ್ಯಾಹ್ನಕ್ಕೆ ಆಗುವಷ್ಟು ಸಿಲಿಂಡರ್ ಮಾತ್ರ ನಮ್ಮ ಹತ್ರ ಇದೆ. ಅಷ್ಟರೊಳಗೆ ಸರ್ಕಾರ ಪೂರೈಕೆ ಮಾಡಿದ್ರೆ ಎಲ್ಲಾ ಹೋಟೆಲ್ ಬಂದ್ ಮಾಡಲಾಗುತ್ತೆ ಎಂದು ಕೃಷ್ಣರಾಜ್ ಹೇಳಿದ್ದಾರೆ. 15 ದಿನಗಳು ಮೊದಲೇ ಒಂದು ಸೂಚನೆ ನೀಡಬೇಕಿತ್ತು . ದಿಢೀರ್ ಪೂರೈಕೆ ಸ್ಥಗಿತಗೊಂಡರೆ ನಾವು ಬಂದ್ ಮಾಡದೇ ಬೇರೆ ದಾರಿ ಇಲ್ಲ. ಹೋಟೆಲ್ ಕೊಟ್ಟ ಸಂಘ ಯಾವುದೇ ಬಂದ್‌ಗೆ ಕರೆಯಿಲ್ಲ. ಆದರೆ ಆಹಾರ, ತಿನಿಸುಗಳು ಇಲ್ಲದಿದ್ದರೆ ಬಂದ್ ಮಾಡಲೇಬೇಕು. ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಸೂಚಿಸಿದ್ದಾರೆ.