ಕಲಬುರಗಿ, ನವೆಂಬರ್ 26: ಕಲಬುರಗಿ ಬಳಿಯ ಜೆವರ್ಗಿ ಪಟ್ಟಣದ ಹೊರವಲಯದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರಾಜ್ಯ ಕಂಡ ಜನಸ್ನೇಹಿ ಹಾಗೂ ದಕ್ಷ ಅಧಿಕಾರಿ ಐಎಸ್ ಎಸ್ ಮಹಾಂತೇಶ್ ಬೀಳಗಿ ಅವರು ಮಂಗಳವಾರ ನಿಧನರಾದರು. ವಿಜಯಪುರ ಮಾರ್ಗವಾಗಿ ಬರುತ್ತಿದ್ದ ಅವರ ಇನ್ನೋವಾ ಕಾರು, ಬೈಕ್ ಒಂದನ್ನು ತಪ್ಪಿಸಿ ಹೋಗಿ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಸುಮಾರು ನೂರು ಮೀಟರ್ ದೂರ ಸಾಗಿದೆ. ಅಪಘಾತದ ತೀವ್ರತೆಗೆ ಸಂಪೂರ್ಣವಾಗಿ ಕಾರು ನುಜ್ಜುಗುಜ್ಜಾಗಿದ್ದರೆ, ಏರ್‌ಬ್ಯಾಗ್‌ಗಳು ತೆರೆದುಕೊಂಡಿದ್ದರೂ ಕಾರಿನಲ್ಲಿದ್ದವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿ ಐದು ಜನ ಪ್ರಯಾಣಿಸುತ್ತಿದ್ದು, ಐವರಲ್ಲಿ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಮಹಾಂತೇಶ್ ಬೀಳಗಿ ಅವರ ಸ್ನೇಹಿತ ಈರಣ್ಣ ಸಿರಸಂಗಿ ಅವರೂ ಸಹ ಸಾವನ್ನಪ್ಪಿರುವುದು ದೃಢಪಟ್ಟಿದೆ. ಅಪಘಾತದ ಸ್ಥಳದಲ್ಲಿ ಮರ ಕಿತ್ತು ಬಂದಿರುವುದು ಕಾರಿನ ವೇಗ ಮತ್ತು ಡಿಕ್ಕಿಯ ಭೀಕರತೆಗೆ ಸಾಕ್ಷಿಯಾಗಿದೆ.
ಇದನ್ನೂ ಓದಿ: ಹೊತ್ತಿನ ಊಟಕ್ಕೂ ಪರದಾಟ, ಕಿರಾಣಿ ಅಂಗಡಿಯಲ್ಲಿ ಕೆಲಸ: ಮಹಾಂತೇಶ್ ಬೀಳಗಿ ಐಎಎಸ್ ಅಧಿಕಾರಿಯಾಗಲು ಪಟ್ಟ ಪಾಡು ಒಂದೇ ಎರಡೇ!
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ