ಹಳೆಯ ವಾಹನಗಳಿಗೆ ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗೆ ತೆರೆ ಎಳೆದ ಸಾರಿಗೆ ಇಲಾಖೆ

ಹಳೆಯ ವಾಹನಗಳಿಗೆ ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗೆ ತೆರೆ ಎಳೆದ ಸಾರಿಗೆ ಇಲಾಖೆ


ಹಳೆಯ ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗೆ ತೆರೆ ಎಳೆದ ಸಾರಿಗೆ ಇಲಾಖೆ

ಬೆಂಗಳೂರು, ಏಪ್ರಿಲ್ 04: 01 ಏಪ್ರಿಲ್ 2019ಕ್ಕಿಂತ ಹಿಂದೆ ರಿಜಿಸ್ಟ್ರೇಷನ್ ಆಗಿರುವ ಎಲ್ಲಾ ವಾಹನಗಳಿಗೆ ವಾಹನಗಳು ಹೈ ಸೆಕ್ಯುರಿಟಿ ನೋಂದಣಿ ಪ್ಲೇಟ್ (ಹೆಚ್‌ಎಸ್‌ಆರ್‌ಪಿ ಎಚ್‌ಎಸ್‌ಆರ್‌ಪಿ) ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕು, ಇದರಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ರಾಜ್ಯ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ಆ ಮೂಲಕ ಹರಡುತ್ತಿರುವ ಸುಳ್ಳು ಸುದ್ದಿಗೆ ಬ್ರೇಕ್ ಹಾಕಲಾಗಿದೆ. ಈ ಕುರಿತಾಗಿ ರಾಜ್ಯ ಸಾರಿಗೆ ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ವದಂತಿಗೆ ತೆರೆ ಎಳೆದ ರಾಜ್ಯ ಸಾರಿಗೆ ಇಲಾಖೆ

ಹಳೆಯ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯವಲ್ಲ ಎಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿಬಿಡಲಾಗಿದೆ. ಇದೀಗ ಅದೆಲ್ಲದಕ್ಕೂ ರಾಜ್ಯ ಸಾರಿಗೆ ಇಲಾಖೆ ತೆರೆ ಎಳೆದಿದೆ.

ಇದನ್ನೂ ಓದಿ: ನಂಬರ್ ಪ್ಲೇಟ್ ವ್ಯವಹಾರಕ್ಕೆ ಹೊಡೆತ ನೀಡಿದ ಎಚ್‌ಎಸ್‌ಆರ್‌ಪಿ ಅಳವಡಿಕೆ ಅಧಿಸೂಚನೆ

ಸಾರಿಗೆ ಇಲಾಖೆಯ ಪ್ರಕಾರ 01 ಏಪ್ರಿಲ್ 2019 ಕ್ಕಿಂತ ಮೊದಲು ನೊಂದಾಯಿತ ಎಲ್ಲಾ ವಾಹನಗಳಿಗೆ ಹೆಚ್ ಎಸ್ಆರ್ ಪಿ ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯವಾಗಿದೆ, ಈ ನಿಯಮದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದರ್ಥ. ರಾಜ್ಯದ ಎಲ್ಲಾ ವಾಹನಗಳು ತಮ್ಮ ಹಳೆಯ ವಾಹನಗಳಿಗೆ ತಕ್ಷಣವೇ ಹೆಚ್ಎಸ್ಆರ್ ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವಂತೆ ಇಲಾಖೆ ಮನವಿ ಮಾಡಿದೆ.

ಪ್ರಕಟಣೆಯಲ್ಲಿ ಏನಿದೆ?

ಕೇಂದ್ರ ಸರ್ಕಾರವು 1989 ರ ಕೇಂದ್ರ ಮೋಟಾರು ವಾಹನ ನಿಯಮಗಳ 50ನೇ ವಿಧಿಯ ಅನ್ವಯ, 01 ಏಪ್ರಿಲ್ 2019 ಕ್ಕಿಂತ ಮೊದಲು ನೋಂದಾಯಿತವಾಗಿರುವ ಎಲ್ಲಾ ವಾಹನಗಳಿಗೆ ಹೆಚ್ಎಸ್ಆರ್ಪಿ ಅಳವಡಿಕೆ ಕಡ್ಡಾಯವಾಗಿದೆ. ಈ ನಿಯಮವು 2018ರಲ್ಲಿ ಜಾರಿಗೊಂಡಿದ್ದು, ರಾಜ್ಯದಲ್ಲಿಯೂ ಈ ನಿಯಮವು ಅನ್ವಯವಾಗುತ್ತಿದೆ. ರಾಜ್ಯ ಸಾರಿಗೆ ಇಲಾಖೆ 2023 ರಲ್ಲಿ ಹೊರಡಿಸಿದ ಅಧಿಸೂಚನೆ ಪ್ರಕಾರ, 2019 ರ ಏಪ್ರಿಲ್ 1 ರ ಮೊದಲು ನೊಂದಾಯಿತ ಎಲ್ಲಾ ವಾಹನಗಳಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಬೇಕೆಂದು ಸೂಚಿಸಲಾಗಿದೆ.

ಇದನ್ನೂ ಓದಿ: ವಾಹನಗಳಿಗೆ ಗುಡ್ ನ್ಯೂಸ್: HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ

ಈ ವಿಷಯಕ್ಕೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ವೇಳೆ, ನ್ಯಾಯಾಲಯವು ಸರ್ಕಾರಕ್ಕೆ ಕ್ರಮ ಕೈಗೊಳ್ಳಲು ಅವಕಾಶ ನೀಡಿದ್ದು, ಎಚ್‌ಎಸ್‌ಆರ್‌ಪಿ ಆಡಳಿತಕ್ಕೆ ರಾಜ್ಯ ಸರ್ಕಾರದ ನಿರ್ಧಾರವನ್ನು ಅನುಸರಿಸಲು ಸೂಚಿಸಲಾಗಿದೆ. ಇದೇ ಸಂದರ್ಭದಲ್ಲಿ, ವಾಹನ ಚಲಾಯಿಸುವ ತಮ್ಮ ಹಳೆಯ ವಾಹನಗಳಿಗೆ ಹೆಚ್‌ಎಸ್‌ಪಿ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದೆ, ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *