ಬೆಂಗಳೂರು, ಜನವರಿ 8: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಹಾಗೂ ವಿವಸ್ತ್ರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಪ್ರಕರಣದ ಬಗ್ಗೆ ಹುಬ್ಬಳ್ಳಿ ಪೊಲೀಸ್ ಕಮಿಷನರ್ ಶಶಿಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಒಬ್ಬ ಪೊಲೀಸ್ ಕಮಿಷನರ್ ಪ್ರಕರಣದ ಕುರಿತು ಅಧಿಕೃತವಾಗಿ ಹೇಳಿಕೆ ನೀಡಿದ ನಂತರ ಇನ್ನೇನು ಅನುಮಾನಕ್ಕೆ ಅವಕಾಶವಿದೆ? ಆಕೆಯನ್ನು ವಿವಸ್ತ್ರ ಮಾಡಿಲ್ಲ. ಆಕೆಯೇ ಸ್ವಯಂ ಆಗಿ ಬಟ್ಟೆ ತೆಗೆದುಕೊಂಡಿದ್ದಾಳೆ ಎಂದು ಕಮಿಷನರ್ ಹೇಳಿದ್ದಾರೆ.
ಈ ವಿಷಯದಲ್ಲಿ ಬಿಜೆಪಿಯವರು ಅನಗತ್ಯ ರಾಜಕೀಯ ಮಾಡಬಾರದು ಎಂದು ಪರಮೇಶ್ವರ್ ಹೇಳಿದರು. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಯೇ ವಿವರವಾಗಿ ಸ್ಪಷ್ಟನೆ ನೀಡಿದ್ದಾರೆ, ಮತ್ತೆ ಇದನ್ನು ರಾಜಕೀಯ ವಿಚಾರವಾಗಿ ಮಾಡುವುದು ಸರಿಯಲ್ಲ. ಸತ್ಯ ಹೊರಬರಬೇಕು, ಆದರೆ ಅದನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಬಾರದು ಎಂದು ಹೇಳಿದರು.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ