
ಹುಬ್ಬಳ್ಳಿ, ಮಾರ್ಚ್ 15: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದರೂ ಆಸ್ಪತ್ರೆಗೆ ದಾಖಲಿಸಲು ಕಿಮ್ಸ್ ಸಿಬ್ಬಂದಿ ಬೇಜವಾಬ್ದಾರಿ ತೋರಿದ ಕಾರಣ ಆತ ಬ್ರೈನ್ ಡೆಡ್ ಆಗಿರುವ ಆರೋಪ ಕೇಳಿಬಂದಿದೆ. ಧಾರವಾಡದ ತಾಲೂಕಿನ ಮೊರಬ ಗ್ರಾಮದ ನಿವಾಸಿ ಪ್ರಕಾಶ್ (25) ಮೃತರಾಗಿದ್ದು, ಜೆಸಿಬಿ ಚಾಲಕನಾಗಿ ಇವರು ಕೆಲಸಮಾಡಿದ್ದಾರೆ. ಮಾರ್ಚ್ 13 ರಂದು ಕೆಲಸ ಬೈಕ್‌ನಲ್ಲಿ ತಮ್ಮೂರಿಗೆ ಹೋಗುತ್ತಿದ್ದ ವೇಳೆ ಯಾವುದೋ ಅಪರಿಚಿತವಾಹನ ಡಿಕ್ಕಿಯಾಗಿ ಪ್ರಕಾಶ್ ಕೊನೆಗೊಂಡಿದ್ದಾರೆ. ಆಯಂಬುಲೆನ್ಸ್ ಮೂಲಕ ಕೂಡಲೇ ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಈ ವೇಳೆ ವೈದ್ಯರು ಹುಬ್ಬಳ್ಳಿ ಕಿಮ್ಸ್ ಗೆ ಕರೆದುಕೊಂಡು ಹೋಗುವಂತೆ ಹೇಳಿದ್ದಾರೆ. ಹೀಗಾಗಿ ರಾತ್ರಿ ಪ್ರಕಾಶ್ ಅವರನ್ನು ಕಿಮ್ಸ್ ಗೆ ಕರೆತರಲಾಯಿತು. ಆದರೆ ಇಲ್ಲಿ ಸಿಬ್ಬಂದಿ ಕೇವಲ ಅರ್ಧ ಗಂಟೆಗೂ ಹೆಚ್ಚು ಕಾಲ ಕಳೆದರೂ ಕನಿಷ್ಠ ಚಿಕಿತ್ಸೆಯನ್ನೂ ನೀಡಿಲ್ಲ. ಹಾಸಿಗೆ ಇಲ್ಲವೆಂಬ ಕಾರಣ ಹೇಳಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದು ಕುಟುಂಬಸ್ಥರ ಆರೋಪ.
ಆಯಂಬುಲೆನ್ಸ್ ನಿಂದ ಗಾಯಾಳುವನ್ನು ಕೆಳಗಿಳಿಸಲೂ ಸಿಬ್ಬಂದಿ ಬಾರದ ಕಾರಣ, ಅರ್ಧಗಂಟೆಗೂ ಹೆಚ್ಚು ಕಾದು ನಂತರ ಅನಿವಾರ್ಯವಾಗಿ ಪ್ರಕಾಶ್ ಅವರನ್ನು ಮತ್ತೆ ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಷ್ಟರೊಳಗಾಗಿ ಅವರ ಬ್ರೈನ್ ಡೆಡ್ ಆಗಿದೆ. ಹೀಗಾಗಿ ಮರಳಿ ಮತ್ತೆ ಕಿಮ್ಸ್ ಗೆ ಕರೆತರಲಾಗಿತ್ತಾದರೂ ಗಾಯಾಳು ಮಾತ್ರ ಬದುಕುಳಿಯಲಿಲ್ಲ. ಧಾರವಾಡ ಜಿಲ್ಲಾ ಆಸ್ಪತ್ರೆಯ ಹುಬ್ಬಳ್ಳಿ ಕಿಮ್ಸ್, ಹುಬ್ಬಳ್ಳಿ ಕಿಮ್ಸ್ ನಿಂದ ಧಾರವಾಡ ಖಾಸಗಿ ಆಸ್ಪತ್ರೆಯಲ್ಲಿ ಎರಡು ಗಂಟೆಗೂ ಹೆಚ್ಚು ಸಮಯ ಹೋಗಲು ಸೂಕ್ತ ಚಿಕಿತ್ಸೆ ಸಿಗದ ಕಾರಣ ಪ್ರಕಾಶ್ ಬಾರದ ಲೋಕಕ್ಕೆ ಹೋಗಿದ್ದಾರೆ. ಹುಬ್ಬಳ್ಳಿ ಕಿಮ್ಸ್ ನಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಕ್ಕಿದ್ದರೆ ಪ್ರಕಾಶ್ ಬದುಕುಳಿಯುತ್ತಾರೆ. ಸ್ಥಳೀಯ ಸಿಬ್ಬಂದಿ ಆತನನ್ನು ಬಲಿ ಪಡೆದಿದ್ದಾರೆ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಧಾರವಾಡದ ಕೇಂದ್ರ ಕಾರಾಗೃಹ ಕೈದಿಗಳ ಪಾಲಿಗೆ ಪಂಚತಾರಾ ಹೋಟೆಲ್; ಹಣ ಕೊಟ್ಟರೆ ಎಲ್ಲ ಸಿಗುತ್ತದೆ, ಆಡಿಯೋ ವೈರಲ್
ಇನ್ನು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಇತ್ತೀಚೆಗೆ ಕೆಲ ಡಿ ಗ್ರೂಪ್ ಸಿಬ್ಬಂದಿ ಹಾಗೂ ವೈದ್ಯರು ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಇಂಥವರ ವಿರುದ್ಧ ಮೇಲಾಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕಿದ್ದು, ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡಿ ಜೀವ ಉಳಿಸುವ ಕೆಲಸ ಮಾಡಬೇಕಿದೆ. ಜನರು ಕಿಮ್ಸ್‌ನ ಬಡವರ ಸಂಜೀವಿನಿ ಎಂದು ನಂಬಿರುವ ಕಾರಣ, ಈ ಬಗ್ಗೆ ಸಂಬಂಧಪಟ್ಟವರು ಗಮನಹರಿಸಬೇಕು ಎಂಬ ಅಭಿಪ್ರಾಯ ಸಾರ್ವಜನಿಕರಿಂದ ವ್ಯಕ್ತವಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.