ಹುಬ್ಬಳ್ಳಿ, ನವೆಂಬರ್ 14: ಒಂದೇ ಯುವತಿಯನ್ನು ಇಬ್ಬರು ಪ್ರೀತಿಸಿದ ವಿಚಾರಕ್ಕೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ಇಬ್ಬರು ಯುವಕರಿಗೆ ಚಾಕು ಇರುವ ಘಟನೆ ಹುಬ್ಬಳ್ಳಿ ನಗರದ ಗ್ಲೋಬಲ್ ಕಾಲೇಜು ಮುಂಭಾಗ ನಡೆಯಿತು. ಗಾಯಾಳು ಯುವಕರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಂಬಂಧಿತ ಪ್ರಮುಖ ಆರೋಪಿ ಒಟ್ಟು 7 ಜನರನ್ನು ಬಂಧಿಸಿದ್ದಾರೆ.
ಘಟನೆ ಏನು?
ಮಣಿಕಂಠ ಮತ್ತು ಪವನ್ ಎಂಬ ವಿದ್ಯಾರ್ಥಿಗಳು ಗ್ಲೋಬಲ್ ಕಾಲೇಜ್‌ನಲ್ಲಿ ಬಿಬಿಎ ಮೊದಲು ಓದುತ್ತಿದ್ದರು, ಇಬ್ಬರೂ ಒಂದೇ ಹುಡುಗಿಯನ್ನ ಪ್ರೀತಿಸುತ್ತಿದ್ದರು. ಇದೇ ವಿಚಾರಕ್ಕೆ ತಿಂಗಳ ಹಿಂದೆ ಇವರ ನಡುವೆ ಗಲಾಟೆಯೂ ನಡೆದಿತ್ತು. ಆದರೆ, ತನ್ನ ಹುಟ್ಟು ಹಬ್ಬದ ಪಾರ್ಟಿ ಇದೆ. ಆಗಿರೋ ಸಮಸ್ಯೆಯನ್ನ ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಎಂದು ಪವನ್ ಮಣಿಕಂಠ ಕರೆದಿದ್ದರು. ಹೀಗಾಗಿ ಪಾರ್ಟಿಗೆ ಹೋಗಲು ನಿರ್ಧರಿಸಿದ್ದ ಪವನ್, ಈ ವೇಳೆ ಸ್ನೇಹಿತರಾದ ಹುಬ್ಬಳ್ಳಿಯ ದೇಶಪಾಂಡೆ ನಗರದ ನಿವಾಸಿಗಳಾದ ಅಭಿಷೇಕ್ ಬಂಡಿವಂಡರ್ ಮತ್ತು ಮಾರುತಿ ಬಂಡಿವಂಡರ್ ಅವರನ್ನೂ ಕರೆದುಕೊಂಡು ಹೋಗಿದ್ದರು. ಆದರೆ, ಬರ್ತ್ ಡೇ ಪಾರ್ಟಿ ಆರಂಭಕ್ಕೆ ಮುನ್ನವೇ ಪವನ್ ಮತ್ತು ಆತನ ಸ್ನೇಹಿತರ ಜೊತೆ ಮಣಿಕಂಠ ಜಗಳ ಆರಂಭಿಸಿದ್ದಾನೆ. ಈ ವೇಳೆ ಗಲಾಟೆ ವಿಕೋಪಕ್ಕೆ ಹೋಗಿದ್ದು, ಮಣಿಕಂಠ ಮತ್ತು ಆತನ ಸ್ನೇಹಿತರು ಅಭಿಷೇಕ್ ಮತ್ತು ಮಾರುತಿಗೆ ಚಾಕು ಇದ್ದಿದ್ದಾರೆ. ಗಲಾಟೆ ಜೋರಾಗಿರುವುದರಿಂದ ಸ್ಥಳೀಯರು ಸ್ಥಳಕ್ಕೆ ಬಂದ ಕಾರಣ ಆರೋಪಿಗಳು ಎಸ್ಕೇಪ್ ಆಗಿದ್ದಾರೆ.
ಇದನ್ನೂ ಓದಿ: ಆಸ್ತಿಗಾಗಿ ಗಂಡನನ್ನೇ ಗೃಹ ಬಂಧನದಲ್ಲಿಟ್ಟ ಪತ್ನಿ! 15 ದಿನಗಳ ಗೃಹ ಬಂಧನದಿಂದ ಬಚಾವಾಗಿದ್ದೇಗೆ ಗೊತ್ತೇ?
ಆಸ್ಪತ್ರೆಗೆ ನಗರ ಪೊಲೀಸ್ ಆಯುಕ್ತರ ಭೇಟಿ
ಗಲಾಟೆ ವೇಳೆ ಪವನ್ ಪಾರಾಗಿದ್ದರೆ ಆತನ ಸ್ನೇಹಿತರಾದ ಅಭಿಷೇಕ್ ಮತ್ತು ಮಾರುತಿ ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ ಇವರಿಬ್ಬರ ಸ್ನೇಹಿತನ ಜೊತೆ ಪಾರ್ಟಿಗೆ ಹೋಗಿ ಈಗ ಆಸ್ಪತ್ರೆಯ ಬೆಡ್ ಮೇಲೆ ಮಲಗುವ ಸ್ಥಿತಿ ತಲುಪಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಕಿಮ್ಸ್ ಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಚಾಕು ಇರಿತ ಪ್ರಕರಣ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.