ವಧು ವರರ ಕುರ್ಚಿಯಲ್ಲಿ ಕುಳಿತ ತಂದೆ-ತಾಯಿ! ಮಧುಮಕ್ಕಳಿಲ್ಲದೇ ಹುಬ್ಬಳ್ಳಿಯಲ್ಲಿ ನಡೆಯಿತು ಆರತಕ್ಷತೆ: ಇಂಡಿಗೋ ವಿಮಾನ ರದ್ದು ಕಾರಣ

ವಧು ವರರ ಕುರ್ಚಿಯಲ್ಲಿ ಕುಳಿತ ತಂದೆ-ತಾಯಿ! ಮಧುಮಕ್ಕಳಿಲ್ಲದೇ ಹುಬ್ಬಳ್ಳಿಯಲ್ಲಿ ನಡೆಯಿತು ಆರತಕ್ಷತೆ: ಇಂಡಿಗೋ ವಿಮಾನ ರದ್ದು ಕಾರಣ


ವಧು ವರರ ಕುರ್ಚಿಯಲ್ಲಿ ಕುಳಿತ ತಂದೆ-ತಾಯಿ! ಮಧುಮಕ್ಕಳಿಲ್ಲದೇ ಹುಬ್ಬಳ್ಳಿಯಲ್ಲಿ ಆರತಕ್ಷತೆ

ಹುಬ್ಬಳ್ಳಿ, ಡಿಸೆಂಬರ್ 5: ಆರತಕ್ಷತೆಗೆ ಎಲ್ಲ ಸಿದ್ಧತೆ ನಡೆದಿತ್ತು. ಇನ್ನೇನು ಸಮಾರಂಭ ಶುರುವಾಗಬೇಕು, ಆದರೂ ವಧು ಹಾಗೂ ವರನ ಆಗಮನವಿಲ್ಲ. ಕೊನೆಗೆ ವಧುವಿನ ತಂದೆ ತಾಯಿಯೇ ವಧು-ವರರ ಕುರ್ಚಿಯಲ್ಲಿ ಕುಳಿತ ಬಂದ ಬಂಧುಗಳಿಂದ ಶುಭ ಹಾರೈಕೆ ಸ್ವೀಕರಿಸಿದರು! ಇಂಥದ್ದೊಂದು ಅಪರೂಪದ ವಿದ್ಯಮಾನಕ್ಕೆ ಹುಬ್ಬಳ್ಳಿಯ (ಹುಬ್ಬಳ್ಳಿ) ಗುಜರಾತ್ ಭವನ ಸಾಕ್ಷಿಯಾಗಿದೆ. ಇದಕ್ಕೆ ಕಾರಣವಾಗಿದ್ದು ಇಂಡಿಗೋ ವಿಮಾನ (ಇಂಡಿಗೋ ವಿಮಾನ) ರದ್ದತಿ. ದೇಶದಾದ್ಯಂತ ಇಂಡಿಗೋ ವಿಮಾನ ಸಂಚಾರದಲ್ಲಿ ಬಿಸಿ ನೂತನ ವಧು ವರರಿಗೂ ತಟ್ಟಿದೆ.

ಹುಬ್ಬಳ್ಳಿಯ ಗುಜರಾತ್ ಭವನದಲ್ಲಿ ಬುಧವಾರ ವಧು ಮೇಧಾ ಕ್ಷೀರಸಾಗರ ಹಾಗೂ ವರ ಸಂಗಮ ದಾಸ್ ಅವರ ಆರತಕ್ಷತೆ ನಡೆಯಿತು. ನವೆಂಬರ್ 23 ಭುವನೇಶ್ವರದಲ್ಲಿ ಮದುವೆಯಾದ ಈ ಜೋಡಿ, ಬೆಂಗಳೂರಿಗೆ ಆಗಮಿಸಿ ಅಲ್ಲಿಂದ ಹುಬ್ಬಳ್ಳಿಗೆ ಬರಲು ಡಿಸೆಂಬರ್ 2 ರಂದು ವಿಮಾನ ಬುಕ್ ಮಾಡಲಾಗಿತ್ತು. ಕೆಲ ಹಂತವು ಭುವನೇಶ್ವರ–ಮುಂಬೈ–ಹುಬ್ಬಳ್ಳಿ ಮಾರ್ಗದಲ್ಲಿ ವಿಮಾನ ಟಿಕೆಟ್ ಬುಕ್ ಮಾಡಲಾಗಿತ್ತು.

ನಿಜವಾಗಿಯೂ ಆಗಿದ್ದೇನು? ವಧು-ವರರು ಬಾಕಿ ಆಗಿದ್ಹೇಗೆ?

ಡಿಸೆಂಬರ್ 2 ರಂದು ಬೆಳಿಗ್ಗೆ 9 ರಿಂದ ಇಂಡಿಗೋ ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿದೆ. ಅನೇಕ ವಿಮಾನಗಳ ಸಂಚಾರ ರದ್ದಾಗಿದೆ. ಭುವನೇಶ್ವರದಿಂದ ಮೇಧಾ ಕ್ಷೀರಸಾಗರ ಹಾಗೂ ಸಂಗಮ ದಾಸ್ ಪ್ರಯಾಣಿಸಬೇಕಿದ್ದ ವಿಮಾನ ಸಂಚಾರ ಮುಂದಿನ ದಿನ (ಡಿ.3) ಬೆಳಗಿನ 4–5 ಗಂಟೆಗಳವರೆಗೆ ವಿಳಂಬವಾಗುವ ಸಂದೇಶ ಬಂದಿತ್ತು. ಹೀಗಾಗಿ ಅವರು ಪರ್ಯಾಯ ಪ್ರಯಾಣಕ್ಕೆ ಯೋಚಿಸಲಿಲ್ಲ. ಆದರೆ, ಕೊನೆ ಕ್ಷಣದಲ್ಲಿ ಏಕಾಏಕಿ ಡಿಸೆಂಬರ್ 3 ರಂದು ಬೆಳಗ್ಗೆ ವಿಮಾನ ಸಂಚಾರವೇ ರದ್ದಾಯಿತು. ಪರಿಣಾಮವಾಗಿ ವಧು-ವರರು ಹುಬ್ಬಳ್ಳಿಗೆ ರಕ್ಷಣೆ ವೇಳೆಗೆ ತಲುಪಲು ಸಾಧ್ಯವಾಗಲಿಲ್ಲ.

ಈ ನಡುವೆ ಗುಜರಾತ್ ಭವನದಲ್ಲಿ ಆರತಕ್ಷತೆಯ ಎಲ್ಲಾ ಸಿದ್ಧತೆಗಳು ಲಭ್ಯವಿವೆ, ಕುಟುಂಬಸ್ಥರು ಹೊಸ ಪರಿಹಾರವನ್ನು ಹುಡುಕಿದರು. ಕೊನೆಗೆ ವಧುವಿನ ತಂದೆ-ತಾಯಿ ತಮ್ಮ ಮಗಳು ಹಾಗೂ ಅಳಿಯನ ಬದಲು ವಧು-ವರರ ಕುರ್ಚಿಯಲ್ಲಿ ಕುಳಿತು ಶಾಸ್ತ್ರಗಳನ್ನು ಮಾಡಿದ್ದಾರೆ.

ಇದನ್ನೂ ಓದಿ: 550 ಇಂಡಿಗೋ ವಿಮಾನಗಳ ಸಂಚಾರ ರದ್ದು, ಬೆಂಗಳೂರು ಸೇರಿ ಹಲವೆಡೆ ಪ್ರಯಾಣಿಕರ ಓಡಾಟ

ವಧು ಮೇಧಾ ಮತ್ತು ವರ ಸಂಗಮ ದಾಸ್ ಇಬ್ಬರೂ ಭುವನೇಶ್ವರದಲ್ಲೇ ಸಿದ್ಧರಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ಆರತಕ್ಷತೆಯಲ್ಲಿ ಭಾಗವಹಿಸುವ ಅನಿವಾರ್ಯ ಸ್ಥಿತಿ ಎದುರಾಯಿತು. ಇಂಡಿಗೋ ವಿಮಾನಗಳು ರದ್ದು ಮತ್ತು ವಿಳಂಬದಿಂದ ಅನೇಕರು ಪರದಾಡುತ್ತಿರುವಾಗ, ಹುಬ್ಬಳ್ಳಿಯಲ್ಲಿ ನಡೆದ ಈ ಎಲ್ಲರ ಗಮನ ಸೆಳೆದಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *