
ಟಾಲಿವುಡ್ ನಟ ಜೂನಿಯರ್ ಎನ್ ಟಿಆರ್ (ಜೂನಿಯರ್ ಎನ್ಟಿಆರ್) ಅವರಿಗೆ ಬೆಂಗಳೂರಿನಲ್ಲೂ ಅಭಿಮಾನಿಗಳು ಇದ್ದಾರೆ. ಇಂದು (ಮಾರ್ಚ್ 8) ಮಹಾದೇವಪುರ ಕಿಮ್ಸ್ ಆಸ್ಪತ್ರೆ ಉದ್ಘಾಟನೆಗೆ ಆಗಮಿಸಿದ ಏನ್ಟಿಆರ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು. ಆಸ್ಪತ್ರೆಯ ಎದುರು ಅಪಾರ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿದ್ದರು. ತಮ್ಮ ನೆಚ್ಚಿನ ನಟನನ್ನು ನೋಡಲು ಫ್ಯಾನ್ಸ್ ಮುಗಿಬಿದ್ದರು. ಈ ವೇಳೆ ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಗಿದೆ. ಭಾರಿ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿದ್ದರಿಂದ ನೂಕುನುಗ್ಗಲು ಉಂಟಾಯಿತು. ಜೂನಿಯರ್ ಎನ್ ಟಿಆರ್ ಅವರನ್ನು ಹತ್ತಿರದಿಂದ ನೋಡಬೇಕು ಎಂಬ ಆಸೆಯಿಂದ ಆಸ್ಪತ್ರೆಯೊಳಗೆ ನುಗ್ಗಿದರು. ಇದರಿಂದ ಆಸ್ಪತ್ರೆಯ ಎಸ್ಕಲೇಟರ್‌ಗೆ ಹಾನಿಯಾಗಿದೆ ಎಂಬ ಮಾಹಿತಿ ಕೇಳಿಬಂದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.