
ಶಿವಮೊಗ್ಗ, ಏಪ್ರಿಲ್ 09: ರಸ್ತೆ ಅಗಲೀಕರಣ ವೇಳೆ ಗುಡ್ಡ ಕುಸಿದು ರಾಜ್ಯದ ಕಾರ್ಮಿಕ ಸೇರಿ ಮೂವರು ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ನಲ್ಲಿ ನಡೆದಿದೆ. ರಾಘವೇಂದ್ರ(37), ರಾಜು(30) ಮತ್ತು ಶಬ್ಬೀರ್(40) ಮೃತರು. ಘಟನಾ ಸ್ಥಳದಲ್ಲಿ, ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ನಗರ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.