ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ

ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ


ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ

ಬೆಂಗಳೂರು, (ಮಾರ್ಚ್ 29): ಪತ್ನಿಯ (ಹೆಂಡತಿ) ಚಿತ್ರ ವಿಕೃತಿ ಮತ್ತು ನಿರಂತರ ಕಿರುಕುಳ ತಾಳಲಾರದೆ ಪತಿಯೊಬ್ಬರು (ಗಂಡ) ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ (ಬೆಂಗಳೂರು) ಬೆಳಕಿಗೆ ಬಂದಿದೆ. ಪತ್ನಿಯ ಮಾನಸಿಕ ಹಿಂಸೆ, ದೌರ್ಜನ್ಯ ತಾಳಲಾರದೇ ಪತಿ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಲಾಗಿದೆ. ಪತ್ನಿಯ ವಿಪರೀತ ವಿಕೃತ ಬೇಡಿಕೆಗೆ ಬೆಸತ್ತಿರುವ ಪತಿ, ಆಕೆಯ ವಿಕೃತ ಕಾಮದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ತಾನು, ತನ್ನ ಸ್ನೇಹಿತೆಯ ಜೊತೆಯೂ ದೈಹಿಕ ಸಂಬಂಧ ಹೊಂದುವಂತೆ ಪತ್ನಿ ಒತ್ತಾಯಿಸಿದ್ದಾಳೆಂದು ದೂರಿನಲ್ಲಿ ವಿವರಿಸಲಾಗಿದೆ.

ನನ್ನ ಪತ್ನಿ ಅಶ್ಲೀಲ ವೀಡಿಯೋಗಳನ್ನು ಕಳುಹಿಸಿ ವಿಕೃತವಾಗಿ ವರ್ತಿಸುತ್ತಾಳೆ. ಸ್ನೇಹಿತೆಯರ ಜೊತೆ ಸ್ವೀಟ್ ಮೆಮೋರಿ ಹಂಚಿಕೊಳ್ಳುವಂತೆ ಒತ್ತಾಯಿಸುತ್ತಾಳೆ. ಮದುವೆಗೂ ಮುನ್ನ ಆಕೆಯ ಸಂಬಂಧಗಳ ಬಗ್ಗೆ ಹೇಳಿ ಕಿರಿಕಿರಿ ಉಂಟುಮಾಡುತ್ತಾಳೆ.ಅಷ್ಟೇ ಅಲ್ಲ ಕುಡಿದು ಬರುವುದು, ಸ್ನೇಹಿತರ ಜೊತೆ ಅಲೆದಾಡುವುದು ಇಂದಿನ ಕಾಲದಲ್ಲಿ ಕಾಮನ್ ಎಂದು ಹೇಳಿ ವಿಕೃತವಾಗಿ ವರ್ತಿಸುತ್ತಾಳೆ. ವಿಕೃತ ದೈಹಿಕ ಸಂಪರ್ಕಕ್ಕೆ ಒಪ್ಪದೆ ಇದ್ದಾಗ ಕಿರುಕುಳ ನೀಡುತ್ತಾಳೆ ಎಂದು ಪತಿ ದೂರಿನಲ್ಲಿ ಆರೋಪಿಸಿದ್ದಾನೆ.

ಇದನ್ನೂ ಓದಿ: ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿದ ಪತ್ನಿ!

ಇನ್ನು ಪತ್ನಿಯ ಈ ಅಸಲಿ ಮುಖ ತಿಳಿಯುವ ಮುನ್ನವೇ ಆಕೆಗೆ ಒಡವೆಗಳನ್ನು ಕೊಟ್ಟಿದ್ದೇನೆ. ಆವೆಗಳನ್ನೂ ವಾಪಸ್ ನೀಡದೆ ಸತಾಯಿಸುತ್ತಿದ್ದಾಳೆ ಎಂದು ನೊಂದ ಪತಿ ತನ್ನ ಅಳಲನ್ನು ತೊಡಿಸಿಕೊಂಡಿದ್ದಾನೆ. ಈ ಸಂಬಂಧ ಅಮೃತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *