ಐಸಿಸಿ ಏಕದಿನ ಬ್ಯಾಟರ್ಗಳ ನೂತನ ರ್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಾರಿಯ ಟಾಪ್-10 ಪಟ್ಟಿಯಲ್ಲಿ ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ಬಾರಿ ನ್ಯೂಝಿಲೆಂಡ್ ಬ್ಯಾಟರ್ ಡೇರಿಲ್ ಮಿಚೆಲ್ ಅಗ್ರಸ್ಥಾನ ಅಲಂಕರಿಸಿದ್ದರು. ಆದರೆ ವೆಸ್ಟ್ ಇಂಡೀಸ್ ವಿರುದ್ಧ 2 ಪಂದ್ಯಗಳಿಂದ ಹೊರಗುಳಿದ ಕಾರಣ ಇದೀಗ ಅವರ ಶ್ರೇಯಾಂಕದಲ್ಲಿ ಕುಸಿತವಾಗಿದೆ.
ಅದರಂತೆ ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಐಸಿಸಿ ಏಕದಿನ ಬ್ಯಾಟರ್ನ ನೂತನ ರ್ಯಾಂಕಿಂಗ್ನಲ್ಲಿ ಮೊದಲ ಸ್ಥಾನಕ್ಕೇರಿದ್ದಾರೆ. ಹಿಟ್ಮ್ಯಾನ್ 781 ಅಂಕಗಳೊಂದಿಗೆ ಅಗ್ರಸ್ಥಾನವನ್ನು ಅಲಂಕರಿಸಿದ್ದು, ದಕ್ಷಿಣ ಆಫ್ರಿಕಾದ ಸರಣಿಯ ಮೂಲಕ ಮೊದಲ ಸ್ಥಾನವನ್ನು ಕಾಯ್ದುಕೊಳ್ಳಬಹುದು.
ಇನ್ನು ದ್ವಿತೀಯ ಸ್ಥಾನದಲ್ಲಿ ನ್ಯೂಝಿಲೆಂಡ್ನ ಡೇರಿಲ್ ಮಿಚೆಲ್ ಕಾಣಿಸಿಕೊಂಡಿದ್ದಾರೆ. ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಳಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಮೈಕೆಲ್ ಈ ಬಾರಿ 15 ಅಂಕಗಳ ಕುಸಿತ ಕಂಡಿದ್ದಾರೆ. ಅದರಂತೆ ಇದೀಗ 766 ಅಂಕಗಳೊಂದಿಗೆ ದ್ವಿತೀಯ ಸ್ಥಾನವನ್ನು ಅಲಂಕರಿಸಿದ್ದಾರೆ.
ಮೂರನೇ ಸ್ಥಾನವನ್ನು ಅಫ್ಘಾನಿಸ್ತಾನದ ಯುವ ದಾಂಡಿಗ ಇಬ್ರಾಹಿಂ ಝದ್ರಾನ್ ಅಲಂಕರಿಸಿದ್ದಾರೆ. ಬಾಂಗ್ಲಾದೇಶ ವಿರುದ್ಧ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಝದ್ರಾನ್ ಒಟ್ಟು 764 ಅಂಕಗಳೊಂದಿಗೆ ಐಸಿಸಿಯ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದ್ದಾರೆ.
ನಾಲ್ಕನೇ ಸ್ಥಾನದಲ್ಲಿ ಭಾರತ ಏಕದಿನ ತಂಡದ ನಾಯಕ ಶುಭಮನ್ ಗಿಲ್ ಇದ್ದಾರೆ. ಚಾಂಪಿಯನ್ ಟ್ರೋಫಿ ಪಂದ್ಯದ ಬೆನ್ನಲ್ಲೇ ಅಗ್ರಸ್ಥಾನಕ್ಕೇರಿದ್ದ ಗಿಲ್ ಆಸ್ಟ್ರೇಲಿಯಾ ಸರಣಿಯಲ್ಲಿ ವಿಫಲವಾಗಿದೆ. ಅದರ ಪರಿಣಾಮ ಇದೀಗ 745 ಅಂಕಗಳೊಂದಿಗೆ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ.
ಇನ್ನು ಐದನೇ ಶ್ರೇಯಾಂಕದಲ್ಲಿ ಕಾಣಿಸಿಕೊಂಡಿರುವುದು ವಿರಾಟ್ ಕೊಹ್ಲಿ. ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಆಕರ್ಷಕ ಅರ್ಧಶತಕ ಸಿಡಿಸಿದ್ದ ಏಕದಿನ ಬ್ಯಾಟರ್ ಶ್ರೇಯ ಪಟ್ಟಿಯಲ್ಲಿ ಒಟ್ಟು 725 ಅಂಕಗಳನ್ನು ಐದನೇ ಸ್ಥಾನವನ್ನು ಅಲಂಕರಿಸಲಾಗಿದೆ.





