ಟಿ20 ವಿಶ್ವಕಪ್ ತಂಡದ ಪ್ಲಾನ್‌ನಲ್ಲೇ ಇರದ ಇಶಾನ್ ಕಿಶನ್ ಟೀಂ ಇಂಡಿಯಾಗೆ ಸೆಲೆಕ್ಟ್ ಆಗಿದ್ದು ಹೇಗೆ? ಇದಕ್ಕೆ ಯಾರು ಕಾರಣ ಗೊತ್ತಾ?

ಟಿ20 ವಿಶ್ವಕಪ್ ತಂಡದ ಪ್ಲಾನ್‌ನಲ್ಲೇ ಇರದ ಇಶಾನ್ ಕಿಶನ್ ಟೀಂ ಇಂಡಿಯಾಗೆ ಸೆಲೆಕ್ಟ್ ಆಗಿದ್ದು ಹೇಗೆ? ಇದಕ್ಕೆ ಯಾರು ಕಾರಣ ಗೊತ್ತಾ?

ಟಿ20 ವಿಶ್ವಕಪ್ ತಂಡದ ಪ್ಲಾನ್‌ನಲ್ಲೇ ಇರದ ಇಶಾನ್ ಕಿಶನ್ ಟೀಂ ಇಂಡಿಯಾಗೆ ಸೆಲೆಕ್ಟ್ ಆಗಿದ್ದು ಹೇಗೆ? ಇದಕ್ಕೆ ಯಾರು ಕಾರಣ ಗೊತ್ತಾ?

ಬೆಂಗಳೂರು: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ, ಪಾಕಿಸ್ತಾನ ಎದುರು ಗೆದ್ದು ಬೀಗಿದೆ. ಈ ಗೆಲುವಿನ ರೂವಾರಿ ಇಶಾನ್ ಕಿಶನ್. ಎರಡೂವರೆ ವರ್ಷದಿಂದ ತಂಡದಿಂದ ಹೊರಗುಳಿದಿದ್ದ ಇಶಾನ್ ಕಿಶನ್, ಡೈರೆಕ್ಟ್ ಟಿ20 ವಿಶ್ವಕಪ್ ಆಗಿದ್ದು ಹೇಗೆ? ಇದಕ್ಕೆ ಯಾರು ಕಾರಣ ಗೊತ್ತಾ?

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ, ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ಸೂಪರ್-08 ಹಂತಕ್ಕೆ ಅಧಿಕೃತವಾಗಿ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದೆ. ಬದ್ದ ಎದುರಾಳಿ ಪಾಕಿಸ್ತಾನ ಎದುರು ಭಾರತ ತಂಡ ಗೆದ್ದು ಬೀಗಿದೆ.

ಪಾಕಿಸ್ತಾನ ಎದುರಿನ ಗೆಲುವಿನಲ್ಲಿ ಟೀಂ ಇಂಡಿಯಾ ಆರಂಭಿಕ ಬ್ಯಾಟರ್ ಇಶಾನ್ ಕಿಶನ್ ಪ್ರಮುಖ ಪಾತ್ರ ವಹಿಸಿದ್ದರು. ಮೊದಲ ಓವರ್‌ನಲ್ಲೇ ಅಭಿಷೇಕ್ ಶರ್ಮಾ ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಭಾರತ ತಂಡಕ್ಕೆ ಇಶಾನ್ ಕಿಶನ್ ಸ್ಪೋಟಕ ಬ್ಯಾಟಿಂಗ್ ನಡೆಸುವ ಮೂಲಕ ಆಸರೆಯಾದರು.

ಆರಂಭದಿಂದಲೇ ಮೈಚಳಿ ಬಿಟ್ಟು ಬ್ಯಾಟ್ ಬೀಸಿದ ಇಶಾನ್ ಕಿಶನ್, ಕೇವಲ 27 ಎಸೆತಗಳನ್ನು ಎದುರಿಸಿ ಅರ್ಧಶತಕ ಪೂರೈಸಿದರು. ಇದಾದ ಬಳಿಕವೂ ಮಿಂಚಿನ ಬ್ಯಾಟಿಂಗ್ ನಡೆಸಿದ ಇಶಾನ್ ಕಿಶನ್, ಕೇವಲ 40 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಆಕರ್ಷಕ 77 ರನ್ ಸಿಡಿಸಿ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಅಂದಹಾಗೆ 2023ರ ನವೆಂಬರ್ ಬಳಿಕ ಟೀಂ ಇಂಡಿಯಾದಿಂದ ಹೊರಗುಳಿದಿದ್ದ ಇಶಾನ್ ಕಿಶನ್ ಅವರ ಕ್ರಿಕೆಟ್ ಬದುಕು ಮುಗಿದೇ ಹೋಯಿತು ಎಂದು ಬಹುತೇಕ ಕ್ರಿಕೆಟ್ ಪಂಡಿತರು ಷರಾ ಬರೆದುಬಿಟ್ಟಿದ್ದರು. ಆದರೆ ದೇಶಿ ಕ್ರಿಕೆಟ್‌ನಿಂದ ಇಶಾನ್ ಕಿಶನ್ ನೇರವಾಗಿ ಭಾರತ ವಿಶ್ವಕಪ್ ತಂಡಕ್ಕೆ ಸೆಲೆಕ್ಟ್ ಆಗಿದ್ದೇ ಒಂದು ಇಂಟ್ರೆಸ್ಟಿಂಗ್ ಸ್ಟೋರಿ.

ಹೌದು, ಇಶಾನ್ ಕಿಶನ್, ಭಾರತ ತಂಡಕ್ಕೆ ಡೈರೆಕ್ಟ್ ಎಂಟ್ರಿಕೊಡಲು ನೇರ ಕಾರಣ ಟೀಂ ಇಂಡಿಯಾ ಆಯ್ಕೆ ಸಮಿತಿ ಸದಸ್ಯರಾದ ರುದ್ರಪ್ರತಾಪ್ ಸಿಂಗ್ ಹಾಗೂ ಪ್ರಗ್ಯಾನ್ ಓಜಾ ಎನ್ನುವುದು ಬಹುತೇಕ ಮಂದಿಗೆ ಗೊತ್ತಿಲ್ಲ. ಈ ಇಬ್ಬರು ಸೆಲೆಕ್ಟರ್ಸ್ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯ ಮೇಲೆ ಹದ್ದಿನ ಕಣ್ಣಿಟ್ಟಿದ್ದರು.

ಇತ್ತೀಚೆಗೆ ಮುಕ್ತಾಯವಾದ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಇಶಾನ್ ಕಿಶನ್ ನೇತೃತ್ವದ ಜಾರ್ಖಂಡ್ ತಂಡವು ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿತ್ತು. ಇಶಾನ್ ಕಿಶನ್‌ ಫೈನಲ್‌ನಲ್ಲಿ ಶತಕ ಸಿಡಿಸಿದ್ದರು. ದೇಶಿ ಕ್ರಿಕೆಟ್‌ನಿಂದ ಡೈರೆಕ್ಟ್ ಭಾರತ ತಂಡಕ್ಕೆ ಎಂಟ್ರಿ ಕೊಡಲು ಆರ್‌.ಪಿ ಸಿಂಗ್ ಹಾಗೂ ಓಜಾ ಕಾರಣ. ಈ ಅವಕಾಶ ಬಳಸಿಕೊಂಡಿರುವ ಇಶಾನ್ ಕಿಶನ್ ಸತತ ಎರಡು ಪಂದ್ಯಗಳಲ್ಲಿ ಸ್ಪೋಟಕ ಅರ್ಧಶತಕ ಸಿಡಿಸಿ ಸಿಕ್ಕ ಅವಕಾಶ ಸದುಪಯೋಗಪಡಿಸಿಕೊಂಡಿದ್ದಾರೆ.

Source link

Leave a Reply

Your email address will not be published. Required fields are marked *