ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 2ನೇ ಟಿ20 ಪಂದ್ಯ ನಾಳೆ (ಅಕ್ಟೋಬರ್ 31) ನಡೆಯಲಿದೆ. ಮೆಲ್ಬೋರ್ನ್ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿಲ್ಲ.
ಏಕೆಂದರೆ ಮೊದಲ ಪಂದ್ಯವು ಮಳೆಯಿಂದಾಗಿ ರದ್ದಾಗಿರುವ ಕಾರಣ, ಆ ಮ್ಯಾಚ್ನಲ್ಲಿ ಕಣಕ್ಕಿಳಿದ ಆಟಗಾರರನ್ನೇ ದ್ವಿತೀಯ ಪಂದ್ಯಕ್ಕೆ ಆಯ್ಕೆ ಮಾಡಲಿದ್ದಾರೆ. ಒಂದು ವೇಳೆ ಒಂದು ಬದಲಾವಣೆ ಮಾಡಿಕೊಂಡರೂ ನಿತೀಶ್ ಕುಮಾರ್ ರೆಡ್ಡಿ ಕಾಣಿಸಿಕೊಳ್ಳುವುದಿಲ್ಲ.
ನಿತೀಶ್ ಕುಮಾರ್ ರೆಡ್ಡಿ ಬೆನ್ನಿನ ಬಿಗಿತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿಯೇ ಮೊದಲ ಮ್ಯಾಚ್ನಲ್ಲಿ ಕಣಕ್ಕಿಳಿದಿರಲಿಲ್ಲ. ಜೊತೆಗೆ ದ್ವಿತೀಯ ಮತ್ತು ತೃತೀಯ ಪಂದ್ಯಗಳ ವೇಳೆಯೂ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ. ಹೀಗಾಗಿ ಮೆಲ್ಬೋರ್ನ್ನಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲೂ ನಿತೀಶ್ ಕಾಣಿಸಿಕೊಳ್ಳುವುದಿಲ್ಲ.
ಇನ್ನು ಕ್ಯಾನ್ಬೆರಾದಲ್ಲಿ ಕಣಕ್ಕಿಳಿದ ಆಡುವ ಬಳಗವನ್ನೇ ಎಂಸಿಜಿ ಮೈದಾನದಲ್ಲಿ ಕಣಕ್ಕಿಳಿಸುವ ಸಾಧ್ಯತೆಯಿದೆ. ಹೀಗಾಗಿ ದ್ವಿತೀಯ ಪಂದ್ಯದಲ್ಲೂ ಅರ್ಷದೀಪ್ ಸಿಂಗ್ ಅವಕಾಶವಂಚಿತರಾಗಬಹುದು. ಅವರಿಗೆ ಬದಲಾಗಿ ಹರ್ಷಿತ್ ರಾಣಾ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ದ್ವಿತೀಯ ಪಂದ್ಯಕ್ಕೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲ್ಲವೆನ್ ಈ ಕೆಳಗಿನಂತಿರುತ್ತದೆ…
ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಸುಂದರ್ ಚಕ್ರವರ್ತಿ, ಜಸ್ ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್, ಕುಲದೀಪ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.





