ಲೀಡ್ಸ್‌ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ 364 ರನ್‌ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಇಂಗ್ಲೆಂಡ್ ಗೆಲುವಿಗೆ 371 ರನ್‌ಗಳ ಬೃಹತ್ ಟಾರ್ಗೆಟ್ ನೀಡಿದೆ. ತಂಡದ ಪರ ಎರಡನೇ ಇನ್ನಿಂಗ್ಸ್‌ನಲ್ಲಿ ಆರಂಭಿಕ ಕೆಎಲ್ ರಾಹುಲ್ ಮತ್ತು ಉಪನಾಯಕ ರಿಷಭ್ ಪಂತ್ ಶತಕ ಬಾರಿಸುವ ಮೂಲಕ ತಂಡವನ್ನು 370 ರನ್‌ಗಳಿಗೆ ಕೊಂಡೊಯ್ದರು. ಭಾರತದ ಪರ ಎರಡನೇ ಇನ್ನಿಂಗ್ಸ್‌ನಲ್ಲಿ, ಪಂತ್ ಮತ್ತು ರಾಹುಲ್ ನಾಲ್ಕನೇ ವಿಕೆಟ್‌ಗೆ 195 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ಆದಾಗ್ಯೂ, ಪಂತ್ ಮತ್ತು ರಾಹುಲ್ ವಿಕೆಟ್ ಒಪ್ಪಿಸಿದ ನಂತರ ಭಾರತದ ಇನ್ನಿಂಗ್ಸ್ ಕುಂಟುತ್ತಾ ಸಾಗಿದಲ್ಲದೆ, ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರು.
90 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ಮೂರನೇ ದಿನದಾಟವನ್ನು ಮುಗಿಸಿದ್ದ ಟೀಂ ಇಂಡಿಯಾ, ಇಲ್ಲಿಂದ ನಾಲ್ಕನೇ ದಿನದಾಟವನ್ನು ಮುಂದುವರೆಸಿತು. ಆದರೆ ತಂಡವು ನಾಯಕ ಶುಭಮನ್ ಗಿಲ್ ಬೇಗನೆ ವಿಕೆಟ್ ಒಪ್ಪಿಸಿದರು. ಇದರ ನಂತರ, ಪಂತ್ ಮತ್ತು ರಾಹುಲ್ ಅದ್ಭುತವಾಗಿ ಬ್ಯಾಟಿಂಗ್ ಮಾಡಿ ಇಂಗ್ಲೆಂಡ್ ಬೌಲರ್‌ಗಳು ವಿಕೆಟ್ಗಾಗಿ ಕಾಯುವಂತೆ ಮಾಡಿದರು. ಚಹಾ ವಿರಾಮಕ್ಕೂ ಮೊದಲು 118 ರನ್ ಬಾರಿಸಿದ್ದ ಪಂತ್ ವಿಕೆಟ್ ಒಪ್ಪಿಸಿದರು. ಇದರ ನಂತರ, ರಾಹುಲ್ ಇನ್ನಿಂಗ್ಸ್ ನಿಭಾಯಿಸಿದರಾದರೂ ಅವರು ಕೂಡ 137 ರನ್ ಬಾರಿಸಿ ಔಟಾದರು. ರಾಹುಲ್ ಪೆವಿಲಿಯನ್‌ಗೆ ಹಿಂತಿರುಗಿದ ತಕ್ಷಣ, ಭಾರತೀಯ ಬ್ಯಾಟ್ಸ್‌ಮನ್‌ಗಳು ರನ್ ಗಳಿಸಲು ಹೆಣಗಾಡಲು ಪ್ರಾರಂಭಿಸಿದರು.