ಸರಣಿ ಗೆಲುವಿನ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ; ಕಿವೀಸ್ ಎದುರಿನ ಪಂದ್ಯದಲ್ಲಿ ಒಂದು ಮಹತ್ವದ ಬದಲಾವಣೆ?

ಸರಣಿ ಗೆಲುವಿನ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ; ಕಿವೀಸ್ ಎದುರಿನ ಪಂದ್ಯದಲ್ಲಿ ಒಂದು ಮಹತ್ವದ ಬದಲಾವಣೆ?

ಸರಣಿ ಗೆಲುವಿನ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ; ಕಿವೀಸ್ ಎದುರಿನ ಪಂದ್ಯದಲ್ಲಿ ಒಂದು ಮಹತ್ವದ ಬದಲಾವಣೆ?

ಗುವಾಹಟಿ: ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯವು ಇಂದು ಗುವಾಹಟಿಯಲ್ಲಿ ಆರಂಭವಾಗಲಿದ್ದು, ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ ಸರಣಿ ಗೆಲ್ಲುವ ಲೆಕ್ಕಾಚಾರದಲ್ಲಿದೆ. ಟೀಂ ಇಂಡಿಯಾದಲ್ಲಿ ಒಂದು ಮೇಜರ್ ಚೇಂಜ್ ಆಗುವ ಸಾಧ್ಯತೆಯಿದೆ.

ನ್ಯೂಜಿಲೆಂಡ್‌ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿ ಗೆಲುವು ದಾಖಲಿಸಿದ್ದ ಭಾರತ, ಭಾನುವಾರ ಇಲ್ಲಿ ನಡೆಯಲಿರುವ 3ನೇ ಟಿ20 ಪಂದ್ಯದಲ್ಲೂ ಜಯ ಸಾಧಿಸಿ 5 ಪಂದ್ಯಗಳ ಸರಣಿಯನ್ನು ವಶಪಡಿಸಿಕೊಳ್ಳಲು ಎದುರು ನೋಡುತ್ತಿದೆ.

ನಾಯಕ ಸೂರ್ಯಕುಮಾರ್‌, ಇಶಾನ್‌ ಕಿಶನ್‌ ಲಯ ಕಂಡುಕೊಂಡಿರುವುದು ತಂಡದ ಬ್ಯಾಟಿಂಗ್‌ ಬಲ ಹೆಚ್ಚಿಸಿದ್ದು, ಸಂಜು ಸ್ಯಾಮ್ಸನ್‌ ಸ್ಥಿರ ಆಟ ಪ್ರದರ್ಶಿಸಬೇಕಾದ ಒತ್ತಡದಲ್ಲಿದ್ದಾರೆ.

ಕಳೆದ ಪಂದ್ಯದಲ್ಲಿ ಇಶಾನ್ ಕಿಶನ್ ಸ್ಪೋಟಕ ಬ್ಯಾಟಿಂಗ್ ನಡೆಸಿರುವುದರಿಂದ ಇದೀಗ ಸಂಜು ಸ್ಯಾಮ್ಸನ್, ದೊಡ್ಡ ಮೊತ್ತ ಕಲೆಹಾಕಲೇಬೇಕಾದ ಒತ್ತಡಕ್ಕೆ ಸಿಲುಕಿದ್ದಾರೆ. ಮುಂಬರುವ ಟಿ20 ವಿಶ್ವಕಪ್‌ಗೂ ಮುನ್ನ ಸಂಜು ಲಯಕ್ಕೆ ಮರಳಬೇಕಿದೆ.

ಕಳೆದ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಜಸ್‌ಪ್ರೀತ್‌ ಬುಮ್ರಾ ಈ ಪಂದ್ಯದಲ್ಲಿ ಆಡುವ ಸಾಧ್ಯತೆ ಇದೆ. ಆಲ್ರೌಂಡರ್ ಜೇಮ್ಸ್‌ ನೀಶಮ್‌ ಕಿವೀಸ್‌ ತಂಡ ಕೂಡಿಕೊಂಡಿದ್ದು, ಇಂದು ಕಣಕ್ಕಿಳಿಯಬಹುದು. ಇಲ್ಲಿನ ಪಿಚ್‌ ಬ್ಯಾಟಿಂಗ್‌ ಸ್ನೇಹಿ ಎನಿಸಿದ್ದು, ದೊಡ್ಡ ಸ್ಕೋರ್‌ ನಿರೀಕ್ಷಿಸಬಹುದಾಗಿದೆ.

ಭಾರತ ತಂಡವು ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದ್ದು, ಇದೀಗ ಇನ್ನೂ ಎರಡು ಪಂದ್ಯ ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದೆ. ಇಂದಿನ ಪಂದ್ಯ ಗೆದ್ದರೇ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿ ಬೆಂಚ್ ಸ್ಟ್ರೆಂಥ್ ಪರೀಕ್ಷಿಸುವ ಲೆಕ್ಕಾಚಾರದಲ್ಲಿದೆ ಭಾರತ.

ಇನ್ನು ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಪಂದ್ಯವು ಇಂದು ಸಂಜೆ 7 ಗಂಟೆಯಿಂದ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ಚಾನೆಲ್ ಹಾಗೂ ಜಿಯೋ ಹಾಟ್‌ಸ್ಟಾರ್‌ನಲ್ಲಿ ಪಂದ್ಯವನ್ನು ವೀಕ್ಷಿಸಬಹುದು.

Source link

Leave a Reply

Your email address will not be published. Required fields are marked *