
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿ (ನ.30) ಇಂದಿನಿಂದ ಶುರುವಾಗಿದೆ. ಮೂರು ಪಂದ್ಯಗಳ ಈ ಏಕದಿನ ಸರಣಿಗೆ ಟೀಮ್ ಇಂಡಿಯಾದ 8 ಆಟಗಾರರು ಅಲಭ್ಯರಾಗಿದ್ದಾರೆ. ಅಂದರೆ ಈ ಹಿಂದೆ ಭಾರತ ಏಕದಿನ ತಂಡವನ್ನು ಪ್ರತಿನಿಧಿಸಿದ್ದ ಕೆಲ ಆಟಗಾರರು ಈ ಬಾರಿ ಕಾಣಿಸಿಕೊಳ್ಳುವುದಿಲ್ಲ. ಆ ಆಟಗಾರರು ಯಾರೆಂದರೆ….

ಶುಭಮನ್ ಗಿಲ್: ಭಾರತ ಏಕದಿನ ತಂಡದ ನಾಯಕ ಶುಭಮನ್ ಗಿಲ್ ಸೌತ್ ಆಫ್ರಿಕಾ ವಿರುದ್ಧ ಸರಣಿಯಿಂದ ಹೊರಗುಳಿದಿದ್ದಾರೆ. ಸೌತ್ ಆಫ್ರಿಕಾದ ಮೊದಲ ಟೆಸ್ಟ್ ಪಂದ್ಯದ ವೇಳೆ ಕುತ್ತಿಗೆ ನೋವಿನ ಸಮಸ್ಯೆಗೆ ಸಿಲುಕಿದ್ದ ಗಿಲ್ ಗೆ ವೈದ್ಯರು ವಿಶ್ರಾಂತಿ ಸೂಚಿಸಿದ್ದಾರೆ, ಹೀಗಾಗಿ ಈ ಸರಣಿಯಿಂದ ಹೊರಗುಳಿದಿದ್ದಾರೆ.

ಶ್ರೇಯಸ್ ಅಯ್ಯರ್: ಭಾರತ ಏಕದಿನ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಕೂಡ ಈ ಸರಣಿಗೆ ಅಲಭ್ಯರಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿ ವೇಳೆ ಅಯ್ಯರ್ ಅವರು ಇದ್ದರು. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಅವರನ್ನು ಆಯ್ಕೆ ಮಾಡಲಾಗಿಲ್ಲ.

ಹಾರ್ದಿಕ್ ಪಾಂಡ್ಯ: ಭಾರತ ತಂಡದ ಪ್ರಮುಖ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರಿಗೂ ಹೆಚ್ಚಿನ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಜೊತೆಗೆ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಮೂಲಕ ಪಾಂಡ್ಯ ಕಂಬ್ಯಾಕ್ ಮಾಡಲಿದ್ದಾರೆ.

ಮೊಹಮ್ಮದ್ ಸಿರಾಜ್: ಭಾರತ ಟೆಸ್ಟ್ ತಂಡದ ಸದಸ್ಯರಾಗಿದ್ದ ಮೊಹಮ್ಮದ್ ಸಿರಾಜ್ ಅವರನ್ನು ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಪರಿಗಣಿಸಲಾಗಿಲ್ಲ. ಇದಾಗ್ಯೂ ಅವರು ಟಿ20 ತಂಡದಲ್ಲಿ ಸ್ಥಾನ ಪಡೆಯಲಿದ್ದಾರಾ ಎಂದು ಕಾದು ನೋಡಬೇಕಾಗಿದೆ.

ಅಕ್ಷರ್ ಪಟೇಲ್: ಟೀಮ್ ಇಂಡಿಯಾದ ಸ್ಪಿನ್ ಆಲ್ ರೌಂಡರ್ ಅಕ್ಷರ್ ಪಟೇಲ್ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿದಿದ್ದರು. ಇದಾಗ್ಯೂ ಅವರ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಹೀಗಾಗಿ ಅವರನ್ನು ಸಹ ಸೌತ್ ಆಫ್ರಿಕಾ ವಿರುದ್ಧ ಸರಣಿಯಿಂದ ಕೈ ಬಿಡಲಾಗಿದೆ.

ವರುಣ್ ವರ್ತಿ: ಭಾರತ ತಂಡವು ಚಾಂಪಿಯನ್ಸ್ ಟ್ರೋಫಿಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರು ಸಹ ದಕ್ಷಿಣ ಆಫ್ರಿಕಾದ ಏಕದಿನ ಸರಣಿಗೆ ಪರಿಗಣಿಸಲಾಗಿಲ್ಲ. ಇದಾಗ್ಯೂ ಅವರು ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಜಸ್ಪ್ರೀತ್ ಬುಮ್ರಾ: ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಲಾಗಿಲ್ಲ. ಮುಂಬರುವ ಟಿ20 ಹಿನ್ನಲೆಯಲ್ಲಿ ಬುರಾಗೆ ವಿಶ್ರಾಂತಿ ನೀಡುತ್ತಿಲ್ಲ, ಹೀಗಾಗಿ ಸೌತ್ ಆಫ್ರಿಕಾ ವಿರುದ್ಧ ಏಕದಿನ ಪಂದ್ಯಗಳಲ್ಲಿ ಅವರು ಕಾಣಿಸಿಕೊಳ್ಳುವುದಿಲ್ಲ.

ಮೊಹಮ್ಮದ್ ಶಮಿ: ಟೀಮ್ ಇಂಡಿಯಾದ ಹಿರಿಯ ವೇಗಿ ಮೊಹಮ್ಮದ್ ಶಮಿ ಅವರು ಚಾಂಪಿಯನ್ಸ್ ಟ್ರೋಫಿ ಸ್ಪರ್ಧೆಯಲ್ಲಿ ಕಣಕ್ಕಿಳಿದಿದ್ದರು. ಇದಾಗ್ಯೂ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಆಯ್ಕೆ ಮಾಡಲಿಲ್ಲ. ಇದೀಗ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದಲೂ ಕೈ ಬಿಡಲಾಗಿದೆ.

ಭಾರತ ಏಕದಿನ ತಂಡ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ಕೆಎಲ್ ರಾಹುಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರುತುರಾಜ್ ಗಾಯಕ್ವಾಡ್, ಪ್ರಸಿದ್ಧ್, ಕೃಷ್ಣ, ಅರ್ಷದ್.
ರಂದು ಪ್ರಕಟಿಸಲಾಗಿದೆ – 7:53 am, ಭಾನುವಾರ, 30 ನವೆಂಬರ್ 25