Vaibhav Suryavanshi: ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ

Vaibhav Suryavanshi: ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ


ಕೇವಲ 14 ವರ್ಷ ವಯಸ್ಸಿನ ಕ್ರಿಕೆಟ್‌ನಲ್ಲಿ ಲೋಕದಲ್ಲಿ ಸಂಚಲನ ಸೃಷ್ಟಿಸಿರುವ ವೈಭವ್ ಸೂರ್ಯವಂಶಿ ತಮ್ಮ ವೃತ್ತಿಜೀವನದ ಆರಂಭದ ಹಂತದಲ್ಲೇ ಹಲವಾರು ದಾಖಲೆಗಳನ್ನು ನಿರ್ಮಿಸಿದ್ದಾರೆ. ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಸಿಡಿಸಿದ ಕಿರಿಯನೆಂಬ ದಾಖಲೆಯಿಂದ ಹಿಡಿದು, ಇಂಗ್ಲೆಂಡ್‌, ಆಸ್ಟ್ರೇಲಿಯಾದಲ್ಲೂ ವೈಭವ್ ಆರ್ಭಟ ಜೋರಿತ್ತು. ಸಿಕ್ಕ ಅವಕಾಶಗಳನ್ನು ಎರಡು ಕೈಗಳಿಂದ ಬಾಚಿಕೊಂಡಿರುವ ವೈಭವ್ಗೆ ಇದೀಗ ಭಾರತ ಸರ್ಕಾರದಿಂದ ಮನ್ನಣೆ ಸಿಕ್ಕಿದೆ. ವೈಭವ್ ಸೂರ್ಯವಂಶಿ ಅವರಿಗೆ ದೇಶದ ಅತ್ಯುನ್ನತ ಮಕ್ಕಳ ಪ್ರಶಸ್ತಿಯಾದ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಶೇಷ ಸಮಾರಂಭದಲ್ಲಿ ಪ್ರದಾನ ಮಾಡಿದ್ದಾರೆ.

ವಾಸ್ತವವಾಗಿ ದೇಶಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಬಿಹಾರ ತಂಡದ ಪರ ಕಣಕ್ಕಿಳಿಯುತ್ತಿರುವ ವೈಭವ್ ಮೊದಲ ಪಂದ್ಯದಲ್ಲೇ 190 ರನ್ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದರು. ಹೀಗಾಗಿ ಇಂದು ಎರಡನೇ ಪಂದ್ಯದಲ್ಲೂ ವೈಭವ್ ಆರ್ಭಟ ನೋಡಲು ಎಲ್ಲರೂ ಕಾದಿದ್ದರು. ಆದರೆ ಇಂದಿನ ವೈಭವ್ ಆಡಿರಲಿಲ್ಲ. ನವೀನ ವಿಜ್ಞಾನ ಭವನದಲ್ಲಿ ನಡೆದ ಈ ಸಮಾರಂಭದಲ್ಲಿ ಪ್ರತಿ ವರ್ಷದಂತೆ, ಈ ವರ್ಷವೂ ದೇಶಾದ್ಯಂತ ಅನೇಕ ಯುವಕರು ಮತ್ತು ಮಕ್ಕಳಿಗೆ ಅವರ ಸಾಧನೆಗಳಿಗಾಗಿ, ಅವರ ಸಾಧನೆಗಾಗಿ, ಕ್ರೀಡೆ, ಸಂಗೀತ ಅಥವಾ ವಿಜ್ಞಾನಕ್ಕೆ ನೀಡಿದ ಕೊಡುಗೆಗಳನ್ನು ಗೌರವಿಸಲಾಯಿತು.

ಅದರಂತೆ ಬಿಹಾರದ ಸಮಷ್ಟಿಪುರದ ವೈಭವ್ ಅವರಿಗೆ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಕ್ಕಾಗಿ ಈ ಪ್ರಶಸ್ತಿಯನ್ನು ಗೌರವಿಸಲಾಯಿತು. ಐಪಿಎಲ್‌ನಲ್ಲಿ ಆಡಿದ ಅತ್ಯಂತ ಕಿರಿಯ ಆಟಗಾರ ಮತ್ತು ಅತಿ ವೇಗದ ಶತಕ ಬಾರಿಸಿದ ಭಾರತೀಯ ಬ್ಯಾಟ್ಸ್‌ಮನ್ ಎಂಬ ಸಾಧನೆಗಾಗಿ ರಾಷ್ಟ್ರಪತಿ ಮುರ್ಮು ವೈಭವ್ ಅವರಿಗೆ ಪ್ರದಾನ ಮಾಡಿದರು.

ಹೆಚ್ಚಿನ ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *