Headlines

5+3+3 ಸೂತ್ರದಲ್ಲಿ ಕಣಕ್ಕಿಳಿಯಲಿದೆ ಟೀಮ್ ಇಂಡಿಯಾ

5+3+3 ಸೂತ್ರದಲ್ಲಿ ಕಣಕ್ಕಿಳಿಯಲಿದೆ ಟೀಮ್ ಇಂಡಿಯಾ


T20 ವಿಶ್ವಕಪ್ 2026: T20 ನಿಂದ ಎರಡನೇ ಸೆಮಿಫೈನಲ್‌ನಲ್ಲಿ ಭಾರತ (ಭಾರತ) ಮತ್ತು ಇಂಗ್ಲೆಂಡ್ (ಇಂಗ್ಲೆಂಡ್) ಮುಖಾಮುಖಿಯಾಗಲಿದೆ. ಗುರುವಾರ (ಮಾ.5) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್‌ನಲ್ಲಿ ಗೆದ್ದ ತಂಡ ಫೈನಲ್‌ಗೇರಿದರೆ, ಸೋತ ತಂಡದಿಂದ ಹೊರಬೀಳಲಿದೆ. ಹೀಗಾಗಿ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ.

ಇದಕ್ಕಾಗಿ ಟೀಮ್ ಇಂಡಿಯಾ 5+3+3 ಸೂತ್ರದಲ್ಲಿ ಪ್ಲೇಯಿಂಗ್ ಇಲೆವೆನ್ ಸಂಯೋಜಿಸಲಿದೆ. ಅಂದರೆ ಐವರು ಪೂರ್ಣ ಪ್ರಮಾಣದ ಬ್ಯಾಟರ್‌ಗಳು, ಮೂವರು ಆಲ್‌ರೌಂಡರ್‌ಗಳು ಹಾಗೂ ಮೂವರು ಬೌಲರ್‌ಗಳನ್ನು ಕಣಕ್ಕಿಳಿಸಲಿದ್ದಾರೆ. ಅದರಂತೆ ಟೀಮ್ ಇಂಡಿಯಾ ಆರಂಭಿಕರಾಗಿ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಕಣಕ್ಕಿಳಿಯಲಿದ್ದಾರೆ.

ಇನ್ನು ಮೂರನೇ ಕ್ರಮಾಂಕದಲ್ಲಿ ಇಶಾನ್ ಕಿಶನ್ ಬ್ಯಾಟ್ ಬೀಸಲಿದ್ದಾರೆ. ಜೊತೆಗೆ ನಾಲ್ಕನೇ ಮತ್ತು ಐದನೇ ಕ್ರಮಾಂಕಗಳಲ್ಲಿ ಸೂರ್ಯಕುಮಾರ್ ಯಾದವ್ ಹಾಗೂ ತಿಲಕ್ ವರ್ಮಾ ಕಾಣಿಸಿಕೊಂಡಿದ್ದಾರೆ.

ಮತ್ತೊಂದೆಡೆ ಆಲ್ರೌಂಡರ್‌ಗಳಾಗಿ ಹಾರ್ದಿಕ್ ಪಾಂಡ್ಯ ಶಿವಂ ಹಾಗೂ ಅಕ್ಷರ್ ಪಟೇಲ್‌ಗೆ ಸ್ಥಾನ ಲಭಿಸಲಿದೆ. ಇನ್ನು ಸ್ಪಿನ್ನರ್ ಆಗಿ ವರುಣ್ ಚಕ್ರವರ್ತಿ ಕಾಣಿಸಿಕೊಳ್ಳುವುದು ಖಚಿತ. ಜೊತೆಗೆ ಜಸ್ಪ್ರೀತ್ ಬುಮ್ರಾ ಹಾಗೂ ಅರ್ಷದೀಪ್ ಸಿಂಗ್ ವೇಗಿಗಳಾಗಿ ಪ್ಲೇಯಿಂಗ್ ಇಲೆವೆನ್‌ನಲ್ಲಿ ಇರಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲ್ಲವೆನ್ ಈ ಕೆಳಗಿನಂತಿರುತ್ತದೆ…

  • ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್)
  • ಅಭಿಷೇಕ್ ಶರ್ಮಾ
  • ಇಶಾನ್ ಕಿಶನ್
  • ಸೂರ್ಯಕುಮಾರ್ ಯಾದವ್ (ನಾಯಕ)
  • ತಿಲಕ್ ವರ್ಮಾ
  • ಹಾರ್ದಿಕ್ ಪಾಂಡ್ಯ
  • ಶಿವಂ ದುಬೆ
  • ಅಕ್ಷರ್ ಪಟೇಲ್
  • ವರುಣ್ ಚಕ್ರವರ್ತಿ
  • ಜಸ್ಪ್ರೀತ್ ಬುಮ್ರಾ
  • ಅರ್ಷದೀಪ್ ಸಿಂಗ್.

ಇದನ್ನೂ ಓದಿ: ಟಿ20 ತಂಡದ ನಡುವೆ ಹೋಗಿ ಸಿಕ್ಕಾಕೊಂಡ ನ್ಯೂಝಿಲೆಂಡ್ ಆಟಗಾರ

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ಸಿಂಗ್ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್.



Source link

Leave a Reply

Your email address will not be published. Required fields are marked *